dtvkannada

ಎರಡು ಗುಂಪಿನ ನಡುವಿನ ಜಗಳವನ್ನ ಬಿಡಿಸಿ ಕಳುಹಿಸಿದ ವ್ಯಕ್ತಿಯನ್ನ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ನಡೆದಿದೆ.
ಗ್ರಾಪಂ ಉಪಾಧ್ಯಕ್ಷ , ಬಿಜೆಪಿ ಯುವ ಮೋರ್ಚಾ ಮುಖಂಡನೂ ಆಗಿರುವ ಪ್ರವೀಣ್​ ಕಮ್ಮಾರ(36) ಮೃತ ವ್ಯಕ್ತಿ.

ಪ್ರವೀಣ್​, ಗ್ರಾಮದಲ್ಲಿ ನಡೆದಿದ್ದ ಉಡಚಮ್ಮ ದೇವಿ ಜಾತ್ರೆಯ ಪ್ರಸಾದದ ವೇಳೆ ಕೆಲವರು ಕುಡಿದು ಜಗಳವಾಡಿಕೊಳ್ಳಲು ಶುರು ಮಾಡಿದ್ದಾರೆ. ಈ ವೇಳೆ ಪ್ರವೀಣ್ ಜಗಳ ಬಿಡಿಸಿ ಕಳುಹಿಸಿದ್ದ. ​
ಆದರೆ ಜಗಳ ಮಾಡಿದ್ದ ಒಂದು ಗುಂಪಿನ ಕಡೆಯವರು ಪುನಃ ಜಗಳವಾಡಲು ಬಂದಿದ್ದಾರೆ. ಈ ವೇಳೆ ಪ್ರವೀಣ್​ಗೆ ಚಾಕು ಇರಿದಿದ್ದಾರೆ. ಇನ್ನು ಚಾಕು ಇರಿತದಿಂದ ತೀವ್ರವಾಗಿ ಗಾಯಗೊಂಡಿದ್ದ ಪ್ರವೀಣ್​ರನ್ನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಇಂದು(ಏ.19) ಬೆಳಗಿನ ಜಾವ ಚಿಕಿತ್ಸೆ ಫಲಿಸದೇ ಪ್ರವೀಣ್ ಸಾವನ್ನಪ್ಪಿದ್ದಾನೆ.

ಚಾಕು ಇರಿದಿದ್ದ ರಾಘವೇಂದ್ರ ಪಟಾತ್ ಸೇರಿದಂತೆ ನಾಲ್ಕು ಜನರನ್ನ ಇದೀಗ ಪೊಲೀಸರು ಬಂಧಿಸಿದ್ದಾರೆ. ಈ ಕುರಿತು ಗರಗ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದಾರವಾಡ ತಾಲೂಕಿನ ಕೋಟೂರು ಗ್ರಾಮದಲ್ಲಿ ಈ ಘಟನೆ ನಡೆದಿದೆ.

ಕೋಟೂರ ಗ್ರಾಪಂ ಉಪಾಧ್ಯಕ್ಷನ ಹತ್ಯೆ ಹಿನ್ನೆಲೆ ಗ್ರಾಮಕ್ಕೆ ಎಸ್ಪಿ ಲೋಕೇಶ ಜಗಲಾಸರ್ ಭೇಟಿ:
ಹೌದು ಪ್ರವೀಣ್ ಗ್ರಾಪಂ ಉಪಾಧ್ಯಕ್ಷ ಮಾತ್ರವಲ್ಲದೆ, ಬಿಜೆಪಿ ಯುವ ಮೋರ್ಚಾ ಮುಖಂಡನೂ ಆಗಿದ್ದ. ಈ ಹಿನ್ನಲೆ ಇದು ರಾಜಕೀಯ ತಿರುವು ಪಡೆದುಕೊಳ್ಳುವ ಸಾಧ್ಯತೆಯಿರುವ ಕಾರಣ ಗ್ರಾಮಕ್ಕೆ ಎಸ್ಪಿ ಲೋಕೇಶ ಜಗಲಾಸರ್ ಭೇಟಿ ನೀಡಿದ್ದಾರೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ಗ್ರಾಮಕ್ಕೆ ಬಂದೋಬಸ್ತ್ ನಿಯೋಜನೆ ಮಾಡಲಾಗಿದೆ

ಮೊನ್ನೆ ತಾನೇ ಅಮೃತ ದೇಸಾಯಿ ಅವರ ನಾಮಪತ್ರ ಸಲ್ಲಿಕೆಯ ರ್‍ಯಾಲಿಯಲ್ಲೂ ಭಾಗಿಯಾಗಿದ್ದರು. ಆದರೆ, ಅದೇ ದಿನ ರಾತ್ರಿ ಕೋಟೂರಿನಲ್ಲಿ ನಡೆದ ಜಗಳದಲ್ಲಿ ದುಷ್ಕರ್ಮಿಗಳು ಪ್ರವೀಣ ಕಮ್ಮಾರನಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿ ಪರಾರಿಯಾಗಿದ್ದಾರೆ.
ಪ್ರವೀಣ ಕಮ್ಮಾರ ಬಿಜೆಪಿ ಮುಖಂಡರಾಗಿದ್ದು, ಪಕ್ಷ ಸಂಘಟನೆಯಲ್ಲಿ ಸಕ್ರಿಯರಾಗಿದ್ದರು. ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಹಾಗೂ ಶಾಸಕ ಅಮೃತ ದೇಸಾಯಿ ಅವರು ಆಸ್ಪತ್ರೆಗೆ ಭೇಟಿ ನೀಡಿ ಬಿಜೆಪಿ ಯುವ ಮುಖಂಡನ ಅಂತಿಮ ದರ್ಶನ ಪಡೆದರು.

ಮಂಗಳವಾರ ತಡರಾತ್ರಿ ಪ್ರಸಾದ ನೀಡುವ ವಿಷಯದಲ್ಲಿ ಎರಡು ಗುಂಪುಗಳ ನಡುವೆ ಕ್ಷುಲ್ಲಕ ಕಾರಣಕ್ಕೆ ನಡೆದ ಜಗಳವನ್ನು ಬಿಡಿಸಲು ಮುಂದಾದ ಬಿಜೆಪಿ ಯುವ ಮೋರ್ಚಾ ಕಾರ್ಯಕಾರಿಣಿ ಸದಸ್ಯ ಪ್ರವೀಣ ಕಮ್ಮಾರ ಎಂಬುವರಿಗೆ ಚಾಕುವಿನಿಂದ ಹಲವೆಡೆ ಇರಿಯಲಾಗಿದೆ. ತೀವ್ರವಾಗಿ ಗಾಯಗೊಂಡ ಪ್ರವೀಣನನ್ನು ಎಸ್‌ಡಿಎಂ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಬುಧವಾರ ಬೆಳಿಗ್ಗೆ 5ಕ್ಕೆ ಪ್ರವೀಣ ಕೊನೆಯುಸಿರೆಳೆದರು ಎಂದು ಪೊಲೀಸರು ತಿಳಿಸಿದ್ದಾರೆ. ಈ ಕೊಲೆ ಪ್ರಕರಣ ಬುಧವಾರ ಬೆಳಿಗ್ಗೆ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಯಿತು. ಪ್ರವೀಣ ಭಾವಚಿತ್ರ ಹಿಡಿದು ಬಿಜೆಪಿಯ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಸೇರಿ, ಪ್ರವೀಣ ಸಾವಿಗೆ ಕಾರಣರಾದವರನ್ನು ಕೂಡಲೇ ಬಂಧಿಸುವಂತೆ ಆಗ್ರಹಿಸಿದರು.

ಪ್ರವೀಣ ಹತ್ಯೆಯಲ್ಲಿ ನಾಲ್ವರು ಆರೋಪಿಗಳನ್ನು ಬಂಧಿಸಿದ್ದು, ಉಳಿದವರ ಬಂಧನಕ್ಕೆ ಶೋಧ ಕಾರ್ಯವೂ ನಡೆದಿದೆ

By dtv

Leave a Reply

Your email address will not be published. Required fields are marked *

error: Content is protected !!