ಮುಂಬೈ: ಯುವತಿಯರನ್ನು ಹಿಡಿದುಕೊಂಡು ವೇಶ್ಯಾವಾಟಿಕೆ ನಡೆಯುತ್ತಿದ್ದ ಅಡ್ಡೆಯ ಮೇಲೆ ದಾಳಿ ಮಾಡಿದ ಪೊಲೀಸರು ಖ್ಯಾತ ಕಿರುತೆರೆ ನಟಿ ಆರತಿ ಹರೀಶ್ ಚಂದ್ರ ಮಿತ್ತಲ್ ಅವರನ್ನು ಬಂಧಿಸಿದ ಬಗ್ಗೆ ವರದಿಯಾಗಿದೆ. ಈಕೆ ಮಾಡೆಲ್ ಯುವತಿಯರನ್ನು ಇಟ್ಟುಕೊಂಡು ವೇಶ್ಯಾವಾಟಿಕೆ ನಡೆಸುತ್ತಿದ್ದರೆಂದು ತಿಳಿದು ಬಂದಿದೆ.

ಅಪ್ಪಾಪನ್ ಸೇರಿದಂತೆ ಹಲವು ಜನಪ್ರಿಯ ಧಾರಾವಾಹಿಗಳಲ್ಲಿ ನಟಿಸಿರುವ ಆರತಿ, ಕಾಸ್ಟಿಂಗ್ ಡೈರೆಕ್ಟರ್ ಆಗಿಯೂ ಗುರುತಿಸಿಕೊಂಡಿದ್ದರು. ಗ್ರಾಹಕರ ಮಾರುವೇಶದಲ್ಲಿ ಆರತಿಯನ್ನು ಸಂಪರ್ಕಿಸಿರುವ ಪೊಲೀಸರು ನಂತರ ಆರತಿಯನ್ನು ಬಂಧಿಸಿದ್ದಾರೆ. ಇವರ ಜೊತೆ ರಾಕೆಟ್‌ನಲ್ಲಿ ಇಬ್ಬರು ಮಾಡೆಲ್ ಗಳು ಇದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಪೊಲೀಸ್ ಅಧಿಕಾರಿಯೊಬ್ಬರು ಕಿರುತೆರೆ ನಟಿ ಆರತಿಗೆ ತಮಗೆ ಇಬ್ಬರು ಹುಡುಗಿಯನ್ನು ಕಳುಹಿಸುವಂತೆ ಸಂಪರ್ಕಿಸಿದ್ದಾರೆ. 60 ಸಾವಿರ ಬೇಡಿಕೆ ಇಟ್ಟು, ಹುಡುಗಿಯರನ್ನು ಕಳುಹಿಸುವುದಾಗಿ ಆರತಿ ತಿಳಿಸಿದ್ದರು. ಹಣ ಕೊಡುವುದಾಗಿಯೂ ಅಧಿಕಾರಿ ತಿಳಿಸಿದ್ದು ಹೋಟೆಲ್ ರೂಮ್ ಗೆ ತೆರಳುವ ಮುನ್ನ ಸ್ವತಃ ಆರತಿಯೇ ಸ್ಥಳದಲ್ಲಿ ಇದ್ದರೆಂದು ತಿಳಿದು ಬಂದಿದೆ.


ಇವೆಲ್ಲವನ್ನೂ ಪೊಲೀಸರು ರೆಕಾರ್ಡ್ ಮಾಡಿಕೊಂಡೇ ಆರತಿಯನ್ನು ಬಂಧಿಸಿದ್ದು ಆರತಿ ಜೊತೆ ಯಾರೆಲ್ಲ ಇದ್ದಾರೆ ಎನ್ನುವುದರ ಕುರಿತು ಪೊಲೀಸರು ಇನ್ನಷ್ಟು ಮಾಹಿತಿ ಕಲೆಹಾಕುತ್ತಿದ್ದಾರುವ ಬಗ್ಗೆ ಪತ್ರಿಕೆಗಳಲ್ಲಿ ತಿಳಿಸಿದ್ದಾರೆ.
