dtvkannada

'; } else { echo "Sorry! You are Blocked from seeing the Ads"; } ?>

ಚಾಮರಾಜನಗರ: ಯುವತಿಯೊಬ್ಬಳು ದ್ವಿತೀಯ ಪದವಿ ಪೂರ್ವ ಕಾಲೇಜು (PUC) ಪರೀಕ್ಷೆಯಲ್ಲಿ ಅನುತ್ತೀರ್ಣರಾದ ಕಾರಣ ಮನನೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆ ಚಾಮರಾಜನಗರ ಜಿಲ್ಲೆಯಲ್ಲಿ ನಡೆದಿದೆ.

ಮೃತರನ್ನು ಜೆಎಸ್‌ಎಸ್ ಪಿಯು ಕಾಲೇಜಿನ ವಿದ್ಯಾರ್ಥಿನಿ ವಿಜಯಲಕ್ಷ್ಮಿ (18) ಎಂದು ಗುರುತಿಸಲಾಗಿದೆ.
ಈ ವರ್ಷದ ಮಾರ್ಚ್‌ನಲ್ಲಿ ನಡೆದ ಪರೀಕ್ಷೆಗಳ ಫಲಿತಾಂಶವನ್ನು ಇಂದು (April 21) ಪ್ರಕಟಿಸಲಾಗಿದ್ದು, ನಾಲ್ಕು ವಿಷಯದಲ್ಲಿ ಈಕೆ ಅನುತ್ತೀರ್ಣಳಾಗಿದ್ದಳು.

'; } else { echo "Sorry! You are Blocked from seeing the Ads"; } ?>

ವಿಜಯಲಕ್ಷ್ಮಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿಯಾಗಿದ್ದು, ನಾಲ್ಕು ವಿಷಯಗಳಲ್ಲಿ ಅನುತ್ತೀರ್ಣರಾಗಿದ್ದಾರೆ ಎಂದು ತಿಳಿದು ಬಂದಿದೆ. ಚಾಮರಾಜನಗರದ ವಿಜಯಲಕ್ಷ್ಮಿ ಹಾಸ್ಟೆಲ್‌ನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.

ಗುಂಡ್ಲುಪೇಟೆ ತಾಲೂಕಿನ ಮೂಡಗೂರು ಗ್ರಾಮದ ನಿವಾಸಿ ವಿಜಯಲಕ್ಷ್ಮಿ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆಗೆ (ಕೆಸಿಇಟಿ) ತಯಾರಿ ನಡೆಸಲು ಹಾಸ್ಟೆಲ್‌ನಲ್ಲಿ ತಂಗಿದ್ದರು. ನಗರ ಠಾಣೆ ಪೊಲೀಸರು ವಸತಿ ನಿಲಯಕ್ಕೆ ಆಗಮಿಸಿ ಪರಿಸ್ಥಿತಿ ಅವಲೋಕಿಸಿದರು. ಸದ್ಯಕ್ಕೆ ತನಿಖೆಗಳು ನಡೆಯುತ್ತಿವೆ.

'; } else { echo "Sorry! You are Blocked from seeing the Ads"; } ?>

ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ಆತ್ಮಹತ್ಯೆ ಮಾಡಿಕೊಳ್ಳುವುದು ತಪ್ಪು ನಿರ್ಧಾರ. ಇದಕ್ಕಿಂತ ಹೇಡಿತನದ ಕೆಲಸ ಮತ್ತೊಂದಿಲ್ಲ. ಫೇಲ್ ಆದ ವಿದ್ಯಾರ್ಥಿಗಳಿಗೆ ಮತ್ತೊಮ್ಮೆ ಪರೀಕ್ಷೆ ಬರೆಯಲು ಅವಕಾಶವಿದೆ. ಶಿಕ್ಷಣ ಇಲಾಖೆ ಮತ್ತೊಂದು ಅವಕಾಶ ನೀಡಿದೆ. ಫೇಲ್ ಆದ ವಿಷಯವನ್ನು ಪೂರಕ ಪರೀಕ್ಷೆ ಬರೆದು ಪಾಸ್ ಮಾಡಿಕೊಳ್ಳಬಹುದು. ಆತ್ಮಹತ್ಯೆ ಮಾಡಿಕೊಳ್ಳುವುದು ಎಲ್ಲಾ ಸಮಸ್ಯೆಗಳಿಗೆ ಪರಿಹಾರವಲ್ಲ.

ದ್ವಿತೀಯ ಪಿಯು ಪೂರಕ ಪರೀಕ್ಷೆ ಕಟ್ಟಲು ಏಪ್ರಿಲ್ ‌27 ಕೊನೆಯ ದಿನ:
ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪೂರಕ‌ ಪರೀಕ್ಷೆ ಕಟ್ಟಲು ಇಂದಿನಿಂದಲೇ ಅವಕಾಶ ಮಾಡಿಕೊಡಲಾಗುತ್ತದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಅಧ್ಯಕ್ಷ ಡಾ. ರಾಮಚಂದ್ರನ್ ದ್ವಿತೀಯ ಪಿಯುಸಿ ಫಲಿತಾಂಶ ಘೋಷಿಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಯಾವುದೇ ದಂಡ ಶುಲ್ಕವಿಲ್ಲದೆ 27 ಏಪ್ರಿಲ್ ‌ವರಿಗೂ ಪೂರಕ‌ ಪರೀಕ್ಷೆ ಕಟ್ಟಲು ಅವಕಾಶವಿದೆ. ಮೇ 2 ರವರೆಗೆ ದಂಡಸಹಿತವಾಗಿ ಪರೀಕ್ಷೆ ಕಟ್ಟಬಹುದು. ಅದಾದ ನಂತರ ಮತ್ತೆ ಅವಕಾಶ ಇರುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!