ಬೆಂಗಳೂರು: ದ್ವಿತೀಯ ಪಿಯುಸಿ ಫಲಿತಾಂಶ ಇಂದು(ಶುಕ್ರವಾರ)ಪ್ರಕಟಗೊಂಡಿದ್ದು, ಅನುಗ್ರಹ ಮಹಿಳಾ ಕಾಲೇಜಿನ ವಿದ್ಯಾರ್ಥಿನಿ ಖತೀಜತುಲ್ ಫೌಝಿಯಾ ಶೇ95.83%(600/575)ಅಂಕ ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣಳಾಗಿದ್ದಾರೆ.
ಇವರು ಕಲ್ಲಡ್ಕದ ಅನುಗ್ರಹ ಮಹಿಳಾ ಕಾಲೇಜಿನ ವಿದ್ಯಾರ್ಥಿನಿಯಾಗಿದ್ದು, ಕಾಲೇಜಿಗೆ ಪ್ರಥಮ ಸ್ಥಾನ ಪಡೆದಿದ್ದಾರೆ. ಇವರು ರಫೀಕ್ ಪೋಲ್ಯ ಹಾಗೂ ಝುಹರ ದಂಪತಿಯ
ಪುತ್ರಿ.

ದ್ವಿತೀಯ ಪಿಯುಸಿಯಲ್ಲಿ ಒಟ್ಟು 7.27 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆದಿದ್ದು, 5,24,209 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಮೊದಲ ಸ್ಥಾನದಲ್ಲಿ ದಕ್ಷಿಣ ಕನ್ನಡ, ಎರಡನೇ ಸ್ಥಾನ ಉಡುಪಿ, ಮೂರನೇ ಸ್ಥಾನ ಕೊಡಗು, ಕೊನೆಯ ಸ್ಥಾನದಲ್ಲಿ ಯಾದಗಿರಿ ಜಿಲ್ಲೆ ಇದೆ.
ಕಲಾ ವಿಭಾಗದಲ್ಲಿ 593 ಅಂಕ ಪಡೆಯುವ ಮೂಲಕ ತಬಸ್ಸುಮ್ ಶೇಖ್ ರಾಜ್ಯಕ್ಕೆ ಮೊದಲ ಸ್ಥಾನ ಸ್ಥಾನ ಪಡೆದಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ಅನನ್ಯಾ 600ಕ್ಕೆ 600 ಅಂಕಗಳನ್ನು ಗಳಿಸಿ ರಾಜ್ಯಕ್ಕೆ ಟಾಪರ್ ಆಗಿದ್ದಾರೆ ಎಂದು ಹೇಳಿದ್ದಾರೆ.