ಭಟ್ಕಳ: ಮುಸ್ಲಿಂ ಮಹಿಳೆಯರೊಂದಿಗೆ ಅಸಭ್ಯವಾಗಿ ವರ್ತಿಸಿದ ಇಬ್ಬರು ಹಿಂದೂ ಯುವಕರನ್ನು ಸೇರಿ ಏಳು ಮಂದಿಯನ್ನು ಪೊಸೀಸರು ವಶಕ್ಕೆ ಪಡೆದ ಘಟನೆ ಭಟ್ಕಳದ ರಂಜಾನ್ ಮಾರ್ಕೆಟ್ ಪ್ರದೇಶದಲ್ಲಿ ನಡೆದಿದೆ.
ಹದ್ಲೂರು ನಿವಾಸಿ ಚಂದ್ರು ಗೊಂಡ, ಸರ್ಪನಕಟ್ಟೆಯ ರವೀಂದ್ರ ನಾಯ್ಕ ಮಹಿಳೆಯರೊಂದಿಗೆ ಅಸಭ್ಯವಾಗಿ ವರ್ತಿಸಿದ ಆರೋಪಿಗಳಾಗಿದ್ದಾರೆ.
ಭಟ್ಕಳದ ಮಾರುಕಟ್ಟೆಯಲ್ಲಿ ರಂಜಾನ್ ಖರೀದಿ ಹಿನ್ನೆಲೆಯಲ್ಲಿ ದೊಡ್ಡ ಮಟ್ಟದ ಜನಸಂದಣಿ ಇತ್ತು.
ಇದನ್ನು ದುರುಪಯೋಗಪಡಿಸಿಕೊಂಡ ಯುವಕರು ಮುಸ್ಲಿಂ ಮಹಿಳೆಯರ ಜತೆ ಅಸಭ್ಯವಾಗಿ ವರ್ತಿಸಿದ್ದಾರೆ.
ಹಿಂದು ಯುವಕರು ಈ ರೀತಿ ವರ್ತಿಸುತ್ತಿರುವುದನ್ನು ಗಮನಿಸಿದ ಮುಸ್ಲಿಂ ಯುವಕರು ಅವರ ಮೆಲೆ ಹಲ್ಲೆ ನಡೆಸಿದ್ದಾರೆ.
ಈ ನಡುವೆ, ಸ್ಥಳಕ್ಕೆ ಪೊಲೀಸರು ಆಗಮಿಸಿ ಅನುಚಿತವಾಗಿ ವರ್ತಿಸಿದ ಯುವಕರನ್ನು ವಶಕ್ಕೆ ಪಡೆದು ಠಾಣೆಗೆ ಕರೆದೊಯ್ಯಲು ಮುಂದಾದರು.
ಆರೋಪಿಗಳನ್ನು ಕರೆದೊಯ್ಯುವ ವೇಳೆ ಉದ್ರಿಕ್ತರು ಕಲ್ಲು ತೂರಾಟ ನಡೆಸಿದ್ದರು. ಅವರು ಬೀಸಿದ ಕಲ್ಲಿಗೆ ಪೊಲೀಸ್ ಜೀಪಿನ ಗಾಜು ಪುಡಿಯಾಗಿತ್ತು.
ಪೊಲೀಸ್ ಜೀಪಿನ ಮೇಲೆ ಕಲ್ಲೆಸೆದ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಕಲ್ಲು ತೂರಾಟ ನಡೆಸಿದ ಯುವಕರನ್ನು ಪೊಲೀಸರು ಬಂಧಿಸಿದ್ದಾರೆ.
ದೊಂಬಿ, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಕ್ಕಾಗಿ ಐದು ಮಂದಿಯನ್ನು ವಶಕ್ಕೆ ಪಡೆಯಲಾಗಿದೆ. ಭಟ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.