dtvkannada

ಬಂಟ್ವಾಳ: ಕಾರು ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಮೃತಪಟ್ಟು, ಸಹಸವಾರ ಗಂಭೀರ ಗಾಯಗೊಂಡ ಘಟನೆ ಬಂಟ್ವಾಳದ ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಅಮ್ಮಾಡಿ ನಿವಾಸಿ ಸಂದೀಪ್ ಲೋಬೋ(35) ಮೃತ ದುರ್ದೈವಿ. ಸಹಸವಾರ ಆಕಾಶ್ ಎಂಬುವವರು ಗಂಭೀರ ಗಾಯಗೊಂಡಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇವರಿಬ್ಬರು ವೆಲ್ಡಿಂಗ್ ಕೆಲಸ ಮಾಡುವ ಕಾರ್ಮಿಕರಾಗಿದ್ದು ಬಿಸಿರೋಡಿನಿಂದ ಪುಂಜಾಲಕಟ್ಟೆ ಕಡೆಗೆ ಬೈಕಿನಲ್ಲಿ ತೆರಳುತ್ತಿದ್ದರು. ಈ ವೇಳೆ ಎದುರಿನಿಂದ ಓವರ್ ಟೇಕ್ ಮಾಡಿಕೊಂಡು ಅತೀ ವೇಗ ಹಾಗೂ ಅಜಾಗರೂಕತೆಯಿಂದ ಚಾಲಕ ಕಾರು ಚಲಾಯಿಸಿಕೊಂಡು ಬಂದ ಪರಿಣಾಮ ಅಪಘಾತ ಸಂಭವಿಸಿದೆ ಎನ್ನಲಾಗಿದೆ.

ಅಪಘಾತದಿಂದ ಗಂಭೀರವಾಗಿ ಗಾಯಗೊಂಡಿದ್ದ ಸಂದೀಪ್ ಲೋಬೋ ಅವರು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟಿದ್ದು, ಸಹಸವಾರ ಆಕಾಶ್ ನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

By dtv

Leave a Reply

Your email address will not be published. Required fields are marked *

error: Content is protected !!