';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>
ಬಂಟ್ವಾಳ: ಬಿಜೆಪಿ ಪಕ್ಷದ ಅಭ್ಯರ್ಥಿ ಪರವಾಗಿ ಚುನಾವಣಾ ಪ್ರಚಾರ ನಡೆಸುತ್ತಿದ್ದ ವ್ಯಕ್ತಿಯೋರ್ವ ಕುಸಿದು ಬಿದ್ದು ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಪುಂಜಾಲಕಟ್ಟೆ ಸಮೀಪದ ಕಾವಳಮೂಡೂರು ಎಂಬಲ್ಲಿ ನಡೆದಿದೆ.
ಘಟನೆ ಸಂಭವಿಸಿ ಮೃತಪಟ್ಟ ವ್ಯಕ್ತಿಯನ್ನು ಪ್ರವೀಣ್ ಚಂದ್ರ ನಾಯಕ್ (45) ಮೃತರು ಎಂದು ತಿಳಿದು ಬಂದಿದೆ.
ಪ್ರವೀಣ್ ರವರು ವೃತ್ತಿಯಲ್ಲಿ ಛಾಯಾಗ್ರಾಹಕನಾಗಿದ್ದು, ಪಕ್ಷದ ಕ್ರಿಯಾಶೀಲ ಕಾರ್ಯಕರ್ತನಾಗಿದ್ದಲ್ಲದೇ ಪ್ರಗತಿಪರ ಕೃಷಿಕನಾಗಿಯೂ ಗುರುತಿಸಿಕೊಂಡಿದ್ದರು. ಪ್ರವೀಣ್ ಅವರು ಚುನಾವಣಾ ಪ್ರಚಾರದ ವೇಳೆ ಕುಸಿದು ಬಿದ್ದಿದ್ದು ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟರು ಎಂದು ಸ್ಥಳೀಯರು ತಿಳಿಸಿದ್ದಾರೆ.