ಮಲಪ್ಪುರಂ: ಕೇರಳದ ಮಲಪ್ಪುರಂ ಜಿಲ್ಲೆಯ ತನೂರಿನಲ್ಲಿರುವ ತೂವಲ್ ಥೀರಂ ಪ್ರವಾಸಿ ತಾಣದ ಪುರಪುಳ ನದಿಯಲ್ಲಿ ಮನರಂಜನಾ ದೋಣಿ ಮುಳುಗಿ 15 ಮಂದಿ ಸಾವನ್ನಪ್ಪಿರುವ ದಾರುಣ ಘಟನೆ ಸಂಭವಿಸಿದೆ.
ಇದುವರೆಗೆ 15 ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಮೃತರಲ್ಲಿ ಆರು ಮಕ್ಕಳು ಮತ್ತು ನಾಲ್ವರು ಮಹಿಳೆಯರು ಸೇರಿದ್ದಾರೆ.
ಸ್ಥಳೀಯ ಪೊಲೀಸರ ಪ್ರಕಾರ, ಬೋಟ್‌ನಲ್ಲಿ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ 40 ಕ್ಕೂ ಹೆಚ್ಚು ಮಂದಿ ಪ್ರಯಾಣಿಸುತ್ತಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ.
ಸಂಜೆ 7 ಗಂಟೆ ಸುಮಾರಿಗೆ ಘಟನೆ ನಡೆದಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಪೊಲೀಸ್, ಅಗ್ನಿಶಾಮಕ ಮತ್ತು ರಕ್ಷಣಾ ಸೇವೆಗಳು, ಮೀನುಗಾರರು ಮತ್ತು ಸ್ಥಳೀಯರು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಮಗುಚಿ ಬಿದ್ದ ದೋಣಿಯನ್ನು ಮೇಲೆತ್ತುವ ಯತ್ನ ಮುಂದುವರಿದಿದೆ.
ಸಚಿವ ಪಿಎ ಮುಹಮ್ಮದ್ ರಿಯಾಸ್ ಮತ್ತು ವಿ ಅಬ್ದುಲ್ ರಹಿಮಾನ್ ರಕ್ಷಣಾ ಕಾರ್ಯಾಚರಣೆಯನ್ನು ಸ್ಥಳದಲ್ಲೇ ಇದ್ದು ಮೇಲ್ವಿಚಾರಣೆ ನಡೆಸುತ್ತಿದ್ದಾರೆ.
ಸದ್ಯ ಲಭ್ಯವಾಗಿರುವ ಮಾಹಿತಿ ಪ್ರಕಾರ ಇದುವರೆಗೆ ಸುಮಾರು 10 ಮಂದಿಯನ್ನು ರಕ್ಷಿಸಲಾಗಿದ್ದು, ಅವರನ್ನು ಹತ್ತಿರದ ಆಸ್ಪತ್ರೆಗಳಿಗೆ ರವಾನಿಸಲಾಗಿದೆ.ವೀಡಿಯೋ ನೋಡಿ👇