ಪುತ್ತೂರು: ರಾಜ್ಯ ವಿಧಾನಸಭೆಯ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲೆಯ 8 ವಿಧಾನಸಭಾ ಕ್ಷೇತ್ರಗಳಲ್ಲಿ ಇಂದು ಬೆಳಗ್ಗೆ 7 ಗಂಟೆಗೆ ಮತದಾನ ಅರಂಭಗೊಂಡಿದ್ದು, ಮತದಾರರು ಅತೀ ಉತ್ಸಾಹದಿಂದ ಸರತಿ ಸಾಲಿನಲ್ಲಿ ನಿಂತು ಮತದಾನ ಮಾಡಿದರು.
ಪುತ್ತೂರು ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಅವರು ಕೋಡಿಂಬಾಡಿಯ ಮತದಾನ ಕೇಂದ್ರದಲ್ಲಿ ಮತ ಚಲಾಯಿಸಿದರು. ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ ರವರು ಕುಂತೂರಿನ ಮತಗಟ್ಟೆಯಲ್ಲಿ ಬೆಳ್ಳಂ ಬೆಳಗ್ಗೆಯೇ ತಮ್ಮ ಹಕ್ಕನ್ನು ಚಲಾಯಿಸಿದರು.
ಪುತ್ತೂರು ಜೆಡಿಎಸ್ ಅಭ್ಯರ್ಥಿ ದಿವ್ಯಪ್ರಭಾ ಗೌಡ ರವರು ಗುತ್ತಿಗಾರು ಮೆಟ್ಟಿನಡ್ಕ ಹಿರಿಯ ಪ್ರಾಥಮಿಕ ಶಾಲಾ ಮತಗಟ್ಟೆಯಲ್ಲಿ ಮತ ಚಲಾಯಿಸಿದರು. ಹಾಗೂ ಸುಳ್ಯ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಿ.ಕೃಷ್ಣಪ್ಪ ರವರು ಸುಳ್ಯದ ಮತಗಟ್ಟೆ ಸಂಖ್ಯೆ 08, ರಾಮಕುಂಜ ಗ್ರಾಮ ಪಂಚಾಯಿತಿ ಕಛೇರಿಯಲ್ಲಿನ ಮತಗಟ್ಟೆಯಲ್ಲಿ ಸರತಿ ಸಾಲಿನಲ್ಲಿ ನಿಂತು ತಮ್ಮ ಹಕ್ಕನ್ನು ಚಲಾಯಿಸಿದರು.
ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮದ್ಯಾಹ್ನ 1 ಗಂಟೆಯವರೆಗೆ 44.16% ಉಡುಪಿಯಲ್ಲಿ 47.79% ಮತದಾನವಾಗಿದೆ ಎಂದು ಚುನಾವನಾಧಿಕಾರಿಗಳು ತಿಳಿಸಿದ್ದಾರೆ.
ಬೈಂದೂರು – 45.43ಕುಂದಾಪುರ – 49.5%, ಉಡುಪಿ -46.49%, ಕಾಪು – 49%ಕಾರ್ಕಳ – 49.13% ರಷ್ಟು ಮತದಾನವಾಗಿದೆ. ಬೆಳ್ತಂಗಡಿ 44.82%, ಮಂಗಳೂರು 43.85%, ಮಂಗಳೂರು ಉತ್ತರ 43.43%, ಮಂಗಳೂರು ದಕ್ಷಿಣ 38.44ಮೂಡುಬಿದಿರೆ,44.45%ಬಂಟ್ವಾಳ 46.53% , ಸುಳ್ಯ 45.1% ಮತದಾನವಾಗಿದೆ.
ಪುತ್ತೂರಿನಲ್ಲಿ 3:00 ಗಂಚೆಯ ವೇಳೆಗೆ 61.45% ರಷ್ಟು ಮತದಾನವಾಗಿದೆ ಎಂದು ವರದಿಯಾಗಿದೆ.
ಜಿಲ್ಲೆಯಲ್ಲಿ ಮತದಾನವು ಸುಸೂತ್ರವಾಗಿ ನಡೆಯಲು ಜಿಲ್ಲೆಯಲ್ಲಿ ಪೊಲೀಸ್/ಅರೆಸೇನಾ ಪಡೆಯ ಅಧಿಕಾರಿ, ಸಿಬ್ಬಂದಿ ಸಹಿತ 4,500ಕ್ಕೂ ಮಂದಿಯನ್ನು ನಿಯೋಜಿಸಲಾಗಿದೆ.
ಜಿಲ್ಲೆಯಲ್ಲಿ 8,70,991 ಪುರುಷ ಮತ್ತು 9,10,314 ಮಹಿಳಾ ಹಾಗೂ 84 ತೃತೀಯ ಲಿಂಗಿಗಳ ಸಹಿತ 17,81,389 ಮಂದಿ ತಮ್ಮ ಹಕ್ಕು ಚಲಾಯಿಸಲು ಹೆಸರು ನೋಂದಾಯಿಸಿದ್ದಾರೆ. ಅದಕ್ಕಾಗಿ ಜಿಲ್ಲೆಯಲ್ಲಿ 1,860 ಮತಗಟ್ಟೆಗಳನ್ನು ತೆರೆಯಲಾಗಿದೆ. ಅದರಲ್ಲಿ ಗ್ರಾಮೀಣ ವ್ಯಾಪ್ತಿಯಲ್ಲಿ 1,184 ಮತ್ತು ನಗರ, ಪಟ್ಟಣ ಪ್ರದೇಶದಲ್ಲಿ 676 ಮತಗಟ್ಟೆ ಕೇಂದ್ರಗಳು ಸೇರಿವೆ.
ಚುನಾವಣಾ ಆಯೋಗದ ಸೂಚನೆಯಂತೆ ಜಿಲ್ಲೆಯ 939 ಮತಗಟ್ಟೆಗಳಲ್ಲಿ ವೆಬ್ ಕ್ಯಾಸ್ಟಿಂಗ್ ವ್ಯವಸ್ಥೆ ಮಾಡಲಾಗಿದೆ. 164 ಮತಗಟ್ಟೆಗಳಲ್ಲಿ ಮೈಕ್ರೋ ವೀಕ್ಷಕರನ್ನು, ಉಳಿದ ಮತಗಟ್ಟೆಗಳಲ್ಲಿ ಸಿಪಿಎಂಎಫ್‌ಗಳನ್ನು ನಿಯೋಜಿಸಲಾಗಿದೆ.
ಶಾಂತಿಯುತವಾಗಿ ಮತದಾನ ಜರುಗಿಸಲು ಜಿಲ್ಲಾಡಳಿತ ಸಕಲ ರೀತಿಯಲ್ಲಿ ಸಿದ್ಧತೆ ಮಾಡಿಕೊಂಡಿವೆ. ಇಂದು ಸಂಜೆ 6ರವರೆಗೆ ಮತದಾನಕ್ಕೆ ಅವಕಾಶವಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ತಿಳಿಸಿದ್ದಾರೆ.