ಕರ್ನಾಟಕ ವಿಧಾನಸಭೆಯ 224 ಕ್ಷೇತ್ರಗಳಿಗೆ ಮೇ 10ರಂದು ನಡೆದಿದ್ದ ಚುನಾವಣೆಯ ಫಲಿತಾಂಶ ಇನ್ನು ಕೆಲವೇ ಕ್ಷಣಗಳಲ್ಲಿ ಪ್ರಕಟಗೊಳ್ಳಲಿದೆ. ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಈ ಬಾರಿ ಬಿಜೆಪಿ ವರ್ಸಸ್ ಹಿಂದುತ್ವ ನಡುವೆ ಭಾರೀ ಪೈಪೋಟಿ ನಡೆದಿದ್ದು, ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ ಅವರು ಮತ್ತು ಪಕ್ಷೇತರ ಅಭ್ಯರ್ಥಿ ಅರುಣ್ ಪುತ್ತಿಲ ಸ್ಪರ್ಧಿಸಿದ್ದಾರೆ. ಈ ಕ್ಷೇತ್ರದಲ್ಲಿ ಬಿಜೆಪಿಯ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ ಅವರು ಸಕ್ರೀಯ ರಾಜಕೀಯದಲ್ಲಿದ್ದು, ಈ ಬಾರಿ ಚುನಾವಣೆಯಲ್ಲಿ ಭಾರೀ ಕುತೂಹಲ ಸೃಷ್ಟಿಸಿದ್ದಾರೆ.
ಬಿಜೆಪಿ ಎಂದರೆ ಹಿಂದುತ್ವ, ಹಿಂದುತ್ವ ಎಂದರೆ ಬಿಜೆಪಿ ಎನ್ನುವ ಪರಿಸ್ಥಿತಿ ದಕ್ಷಿಣ ಕನ್ನಡದ ಪುತ್ತೂರಿನಲ್ಲಿ ಸದ್ಯದ ಸ್ಥಿತಿಯಲ್ಲಿ ಇಲ್ಲ ಎಂದು ಹೇಳಲಾಗುತ್ತಿದೆ. ಭಾರತೀಯ ಜನತಾ ಪಕ್ಷದಿಂದ ಕಣಕ್ಕಿಳಿದ ಆಶಾ ತಿಮ್ಮಪ್ಪ ಅವರ ಮುಂದೆ ಹಿಂದುತ್ವ ತತ್ವಗಳನ್ನು ಇಟ್ಟುಕೊಂಡು ಸಂಘಟನೆಯಲ್ಲಿ ಕೆಲಸ ಮಾಡಿದ ಅರುಣ ಪುತ್ತಿಲ ಸ್ಪರ್ಧಿಸಿದ್ದಾರೆ, ಆಶಾ ತಿಮ್ಮಪ್ಪ ಗೌಡ ಅವರು ಇದು ಎರಡನೇ ಬಾರಿಗೆ ಬಿಜೆಪಿಯಿಂದ ಸ್ಪರ್ಧಿಸುತ್ತಿರುವುದು. ಈ ಹಿಂದೆ ಬಿಜೆಪಿಯಿಂದ ಸ್ಪರ್ಧಿಸಿ ಸೋತಿದ್ದರು. ಇದೀಗ ಮತ್ತೆ ಸ್ಪರ್ಧಿಸಿದ್ದಾರೆ.
ಇನ್ನೂ ಆಶಾ ತಿಮ್ಮಪ್ಪ ಅವರಿಗೆ ಪ್ರಬಲ ಪೈಪೋಟಿ ನೀಡುತ್ತಿರುವುದು ಅರುಣ್ ಪುತ್ತಿಲ, ಚುನಾವಣೆಗೂ ಮುನ್ನ ಪ್ರಚಾರ ಸಮಯದಲ್ಲಿ ಭಾರೀ ಸದ್ದು ಮಾಡಿದ್ದರು. ಒಂದು ಸ್ವಾಭಿಮಾನದ ಹೆಜ್ಜೆ ಎಂದು ಹೇಳಲಾಗಿತ್ತು. ಹಿಂದುತ್ವಕ್ಕಾಗಿ ಈ ಬಾರಿಯ ಚುನಾವಣೆಯಲ್ಲಿ ನನ್ನ ಸ್ಪರ್ಧೆ ಎಂದು ಹೇಳಿದ್ದರು. ಹಿಂದು ಸಂಘಟನೆ ಮೂಲಕ ಬೆಳೆದು ಬಂದ ಅರುಣ್ ಪುತ್ತಿಲ ಅನೇಕ ಬಾರಿ ಬಿಜೆಪಿಯಿಂದ ಟಿಕೇಟ್ ಪಡೆಯುವ ನಿಟ್ಟಿನಲ್ಲಿ ಪ್ರಯತ್ನ ನಡೆಸಿದ್ದರು, ಆದರೆ ಹಲವು ಗೊಂದಲಗಳಿಂದ ಅರುಣ್ ಪುತ್ತಿಲ ಅವರಿಗೆ ಟಿಕೇಟ್ ಕೈತಪ್ಪಿತ್ತು. ಆದರೆ ಈ ಬಾರಿ ಅವರಿಗೆ ಟಿಕೇಟ್ ನೀಡಲಾಗುತ್ತದೆ ಎಂದು ಹೇಳಲಾಗಿತ್ತು. ಆದರೆ ಈ ಬಾರಿಯೂ ಟಿಕೇಟ್ ಕೈತಪ್ಪಿದ ಕಾರಣ, ಪಕ್ಷೇತರ ಅಭ್ಯರ್ಥಿಯಾಗಿ ನಿಲ್ಲಬೇಕು ಎಂದು ಕಾರ್ಯಕರ್ತರ ಒತ್ತಡಕ್ಕೆ ಮಣಿದು ಈ ಬಾರಿ ಪಕ್ಷೇತರ ಅಭ್ಯರ್ಥಿಯಾಗಿ ನಿಂತರು. ಇದೀಗ ಅರುಣ್ ಪುತ್ತಿಲ ಮತ್ತು ಆಶಾ ತಿಮ್ಮಪ್ಪ ನಡುವೆ ಭಾರೀ ಪೈಪೋಟಿ ನಡೆಯುತ್ತಿದೆ.
ಇನ್ನೂ ಕಾಂಗ್ರೆಸ್ನಿಂದ ಅಶೋಕ್ ರೈ ಸ್ಪರ್ಧಿಸುತ್ತಿದ್ದಾರೆ, ಅವರು ಕೂಡ ಪ್ರಬಲ ಪೈಪೋಟಿಯನ್ನು ನೀಡುತ್ತಿದ್ದಾರೆ, ಒಂದು ರೀತಿಯಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರ ಗೊಂದಲದ ಗೂಡಾಗಿದೆ. ಜನ ಯಾರಿಗೆ ಈ ಬಾರಿ ವಿಜಯಮಾಲೆ ಹಾಕಿದ್ದಾರೆ ಎಂಬುದನ್ನು ನೋಡಬೇಕಿದೆ. ಅಶೋಕ್ ರೈ ಕೂಡ ಬಿಜೆಪಿ ಟಿಕೇಟ್ ಆಕಾಂಕ್ಷಿಯಾಗಿದ್ದರು. ಆದರೆ ಈ ಬಾರಿ ಅವರಿಗೂ ಬಿಜೆಪಿಯಿಂದ ಟಿಕೆಟ್ ಸಿಗದ ಕಾರಣ ಅವರು ಕಾಂಗ್ರೆಸ್ನಿಂದ ಸ್ಪರ್ಧಿಸಿದ್ದಾರೆ. ಇದೀಗ ಬಿಜೆಪಿ ಆಶಾ ತಿಮ್ಮಪ್ಪ ಹಾಗೂ ಪಕ್ಷೇತರ ಅಭ್ಯರ್ಥಿ ಅರುಣ್ ಪುತ್ತಿಲಗೂ ಇವರು ಪೈಪೋಟಿ ನೀಡುತ್ತಿದ್ದಾರೆ. ಇನ್ನೂ ಜೆಡಿಎಸ್ನಿಂದ ದಿವ್ಯ ಪ್ರಭಾ ಸ್ಪರ್ಧಿಸುತ್ತಿದ್ದಾರೆ.
ಹೀಗಾಗಿ ಈ ಕ್ಷೇತ್ರದಲ್ಲಿ ತ್ರಿಕೋನ ಪೈಪೋಟಿ ಏರ್ಪಟ್ಟಿತ್ತು. ಬಿಜೆಪಿ, ಪಕ್ಷೇತರ ಹಾಗೂ ಕಾಂಗ್ರೆಸ್ ಅಭ್ಯರ್ಥಿಗಳ ನಡುವೆ ಜಿದ್ದಾಜಿದ್ದಿ ಏರ್ಪಟ್ಟಿತ್ತು.