';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>
ಕಾಂಗ್ರೆಸ್ ಅಭ್ಯರ್ಥಿ ಹಾಗೂ ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿ ಭರ್ಜರಿ ಗೆಲುವು ಸಾಧಿಸಿದ್ದಾರೆ. ಟಿಕೆಟ್ ನಿರಾಕರಿಸುವ ಬಿಜೆಪಿ ನಿರ್ಧಾರದಿಂದ ಸವದಿ ಅಸಮಾಧಾನಗೊಂಡು ಕಾಂಗ್ರೆಸ್ ಸೇರಿದ್ದರು.
ಬೆಳಗಾವಿ ಜಿಲ್ಲೆಯ ಅಥಣಿ ವಿಧಾನಸಭಾ ಕ್ಷೇತ್ರದಲ್ಲಿ ಪ್ರಸ್ತುತ ಬಿಜೆಪಿ ನಾಯಕ ಮಹೇಶ್ ಈರನಗೌಡ ಕುಮಟಳ್ಳಿ ಶಾಸಕರಾಗಿದ್ದರು. 2018 ರಲ್ಲಿ ಕಾಂಗ್ರೆಸ್ ಟಿಕೆಟ್‌ನಲ್ಲಿ ಗೆದ್ದ ನಂತರ ಬಿಜೆಪಿಗೆ ಹಾರಿದ್ದ ಕಮಟಳ್ಳಿ 2019 ರ ಉಪಚುನಾವಣೆಯಲ್ಲಿ ಗೆದ್ದು ಬೀಗಿದ್ದರು.
ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಹಾಗೂ ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿ ಹಾಗೂ ಹಾಲಿ ಶಾಸಕ ಹಾಗೂ ಬಿಜೆಪಿ ಅಭ್ಯರ್ಥಿ ಮಹೇಶ್ ಕುಮಟಳ್ಳಿ ನಡುವೆ ಜಿದ್ದಾಜಿದ್ದಿನ ಪೈಪೋಟಿ ನಡೆದಿತ್ತು.