ಕರ್ನಾಟಕ: ವಿಧಾನಸಭಾ ಚುನಾವಣೆ ಫಲಿತಾಂಶದ ಬೆನ್ನಲ್ಲೇ ಬಿಜೆಪಿಗೆ ಮುಖಭಂಗವಾಗಿದ್ದು, ಈ ಹಿನಾಯ ಸೋಲಿನ ಹೊಣೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೊತ್ತುಕೊಂಡು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡಲು ನಿರ್ಧರಿಸಿದ್ದಾರೆ.

ಈಗಾಗಲೇ ನಳೀನ್ ಕುಮಾರ್ ಕಟೀಲ್ ಬಗ್ಗೆ ಕರವಾಳಿಯಲ್ಲಿ ಹಲವು ರೀತಿಯಲ್ಲಿ ಚರ್ಚೆ ನಡೆಯುತ್ತಿದ್ದು, ಈ ಭಾಗದ ಹಿಂದೂ ಕಾರ್ಯಕರ್ತರ ಮತ್ತು ಯುವಕರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಇದಕ್ಕೆ ಮುಖ್ಯ ಕಾರಣ ಪ್ರವೀಣ್ ನೆಟ್ಟಾರ್ ಕೊಲೆ ಪ್ರಕರಣ ಹಾಗೂ ಪುತ್ತೂರಿನಲ್ಲಿ ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲರಿಗೆ ಬಿಜೆಪಿಯಲ್ಲಿ ಟಿಕೆಟ್ ನೀಡಿದೆ ಇದ್ದದ್ದು. ಇಂತಹ ಬೇರೆ ಬೇರೆ ರೀತಿಯ ಅಂತಂತ್ರ ರೀತಿಯ ನಿರ್ಧಾರಗಳನ್ನು ತೆಗೆದುಕೊಂಡಿದ್ದ ಕಟೀಲ್ ಇದೀಗ ಕೈ ಸುಟ್ಟುಕೊಂಡಿದ್ದಾರೆ.

ಈಗಾಗಲೇ ಅವರು ಆಪ್ತರಿಂದ ಬಂದ ಮಾಹಿತಿ ಪ್ರಕಾರ ನಳೀನ್ ಕುಮಾರ್ ಕಟೀಲ್ ರಾಜಿನಾಮೆಗೆ ಸಿದ್ದತೆ ನಡೆಸಿದ್ದು ಇಂದು ಸಂಜೆಯ ಒಳಗೆ ಅಥವಾ ನಾಳೆಯೊಳಗೆ ರಾಜಿನಾಮೆ ಸಲ್ಲಿಸುವ ಸಾಧ್ಯತೆಗಳಿವೆ ಎಂದು ತಿಳಿದು ಬಂದಿದೆ.
224 ಕ್ಷೇತ್ರಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ 135, ಬಿಜೆಪಿ 65, ಜೆಡಿಎಸ್ 19 ಮತ್ತು ಇತರರು 4 ಕ್ಷೇತ್ರಗಳಲ್ಲಿ ಗೆಲುವು ದಾಖಲಿಸಿದ್ದಾರೆ.