';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>
ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು ಶನಿವಾರ ಮಧ್ಯಾಹ್ನ ಪ್ರಮಾಣವಚನ ಸ್ವೀಕರಿಸಿದರು. ಅವರೊಂದಿಗೆ ಉಪ ಮುಖ್ಯಮಮತ್ರಿಯಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರೂ ಪ್ರತಿಜ್ಞಾವಿಧಿ ಸ್ವೀಕರಿಸಿದರು.
ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ಅದ್ದೂರಿ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರತಿಜ್ಞಾವಿಧಿ ಬೋಧಿಸಿದರು. ಜತೆಗೆ ಎಂಟು ಮಂದಿ ಶಾಸಕರು ಸಚಿವರಾಗಿಯೂ ಪದಗ್ರಹಣ ಮಾಡಿದರು.
ಇದರೊಂದಿಗೆ, ರಾಜ್ಯದಲ್ಲಿ ಹೊಸ ಸರ್ಕಾರ ಅಧಿಕೃತವಾಗಿ ಅಸ್ತಿತ್ವಕ್ಕೆ ಬಂದಂತಾಗಿದೆ. ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು, ಕಾಂಗ್ರೆಸ್ ನಾಯಕರು, ರಾಜ್ಯ ಕಾಂಗ್ರೆಸ್ ನಾಯಕರು, ಕಾರ್ಯಕರ್ತರು, ಬೆಂಬಲಿಗರು ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಸಾಕ್ಷಿಯಾದರು.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಕೆ.ಸಿ.ವೇಣುಗೋಪಾಲ್, ರಣದೀಪ್ ಸುರ್ಜೇವಾಲ ಹಾಗೂ ಇತರರ ಉಪಸ್ಥಿತಿಯಲ್ಲಿ ಪ್ರಮಾಣವಚನ ಸ್ವೀಕಾರ ಸಮಾರಂಭ ನೆರವೇರಿತು.