';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>
ಪುತ್ತೂರು: ರಾಜ್ಯ ವಿಧಾನ ಸಭಾ ಚುನಾವಣೆಯ ಸಂದರ್ಭದಲ್ಲಿ ಸಂಬಂಧ ಹಳಸಿದ್ದ ಪ್ರಖರ ಹಿಂದೂ ಮುಖಂಡರಾದ ಕಲ್ಲಡ್ಕ ಡಾ. ಪ್ರಭಾಕರ್ ಭಟ್ ಮತ್ತು ಅರುಣ್ ಕುಮಾರ್ ಪುತ್ತಿಲ ಅವರು ಇಂದು ಪರಸ್ಪರ ಮುಖಾಮುಖಿಯಾದ ಪ್ರಸಂಗ ನಡೆದಿದೆ.
ಪೆರಾಜೆಯ ಮಾಣಿ ಶ್ರೀರಾಮಚಂದ್ರಾಪುರ ಮಠದಲ್ಲಿ ನಡೆದ ವಿವಾಹ ಸಮಾರಂಭವೊಂದರಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದ ಅರುಣ್ ಕುಮಾರ್ ಪುತ್ತಿಲ ಮತ್ತು ಕಲ್ಲಡ್ಕ ಡಾ. ಪ್ರಭಾಕರ್ ಭಟ್ ಅವರಿಬ್ಬರೂ ಬಂದಿದ್ದು, ಈ ಸಂದರ್ಭದಲ್ಲಿ ಪರಸ್ಪರ ಮುಖಾಮುಖಿಯಾಗಿದ್ದಾರೆ.
ಈ ಸಂದರ್ಭದಲ್ಲಿ ಕೈ ಮುಗಿದು ನಮಸ್ಕರಿಸಿದ ಅರುಣ್ ಕುಮಾರ್ ಪುತ್ತಿಲ ಅವರು ಡಾ. ಪ್ರಭಾಕರ್ ಭಟ್ ಅವರ ಕಾಲಿಗೆರಗಿ ಆಶೀರ್ವಾದ ಪಡೆದು ಕುತೂಹಲ ಮೂಡಿಸಿದ್ದಾರೆ.
ಬೆನ್ನು ತಟ್ಟಿ ಅನುಗ್ರಹಿಸಿದ ಪ್ರಭಾಕರ್ ಭಟ್ ಊಟ ಆಯ್ತಾ ಎಂದು ಕೇಳುವ ಮೂಲಕ ಕುಶಲ ವಿಚಾರಿಸಿ ಮುಂದೆ ಹೆಜ್ಜೆ ಹಾಕಿದರು. ಈ ಘಟನೆಯ ವೀಡಿಯೊ ಸಾಮಾಜಿಕ ಜಾಲ ತಾಣದಲ್ಲಿ ವೈರಲ್ ಆಗಿದ್ದಲ್ಲದೆ ಇದಕ್ಕೆ ವೈವಿಧ್ಯಮಯ ಕಮೆಂಟ್‌ಗಳೂ ವ್ಯಕ್ತವಾಗಿವೆ.