ಬೆಂಗಳೂರು: ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ಬೆಂಗಳೂರು ವ್ಯಾಪ್ತಿಯಲ್ಲಿ ಸಾರ್ವಜನಿಕರಿಗೆ ತೊಂದರೆ ಉಂಟು ಮಾಡುವ ಝೀರೋ ಟ್ರಾಫಿಕ್ ಸೌಲಭ್ಯವನ್ನು ಹಿಂದಕ್ಕೆ ಪಡೆಯುವಂತೆ ಮಾನ್ಯ ಮುಖ್ಯಮಂತ್ರಿಗಳು ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಮನವಿ ಮಾಡಿದ್ದಾರೆ.
ಜೀರೋ ಟ್ರಾಫಿಕ್ ನಿಂದ ವಾಹನ ದಟ್ಟನೆ ಉಂಟಾಗಿ ಸಾರ್ವಜನಿಕರಿಗೆ ಬಲು ದೊಡ್ಡ ತೊಂದರೆ ಉಂಟು ಮಾಡುವುದರಿಂದ ಝೀರೋ ಟ್ರಾಫಿಕ್ ಸೇವೆಯನ್ನು ಹಿಂಪಡೆಯುವಂತೆ ಮುಖ್ಯಮಂತ್ರಿಗಳು ನಗರ ಪೊಲೀಸ್ ಆಯುಕ್ತರಿಗೆ ತಿಳಿಸಿದ್ದಾರೆ.
ಇನ್ನೂ ಸರಳತೆಯ ಪ್ರತೀಕ ಎಂಬಂತೆ ಕಾರ್ಯಕ್ರಮಗಳಲ್ಲಿ ಪುಷ್ಪ ಶಾಲು ಹಾರ ತುರಾಯಿಗಳನ್ನು ಮುಖ್ಯಮಂತ್ರಿಗಳಿಗೆ ನೀಡುವುದನ್ನೂ ಕೂಡ ಅವರು ನಿರ್ಬಂಧಿಸಿದ್ದಾರೆ.
ಇನ್ನು ಅಭಿನಂದಿಸಲೇ ಬೇಕು ಎನ್ನುವರು ಪುಸ್ತಕಗಳನ್ನು ನೀಡಿ ಸಹಕರಿಸಬಹುದು ಎಂದು ಅವರು ಹೇಳಿದ್ದಾರೆ.
ನಾಳೆಯಿಂದ ಸಾರ್ವಜನಿಕರಿಂದ ಗೌರವ-ಸನ್ಮಾನದ ರೂಪದಲ್ಲಿ ಹಾರ-ತುರಾಯಿ, ಶಾಲು-ಶಲ್ಯಗಳನ್ನು ಸ್ವೀಕರಿಸದೆ ಇರಲು ನಿರ್ಧರಿಸಿದ್ದೇನೆ.
ಇದು ನನ್ನ ಮನೆ-ಕಚೇರಿ ಮತ್ತು ಸಾರ್ವಜನಿಕ ಸಮಾರಂಭಗಳಿಗೂ ಅನ್ವಯ.
ಪ್ರೀತಿ-ಗೌರವವನ್ನು ಕಾಣಿಕೆಗಳ ಮೂಲಕವೇ ಸಲ್ಲಿಸಬೇಕೆನ್ನುವವರು ಪುಸ್ತಕಗಳನ್ನು ನೀಡಬಹುದು.
ಎಂದು ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.