dtvkannada

'; } else { echo "Sorry! You are Blocked from seeing the Ads"; } ?>

ಬೆಂಗಳೂರು: ಪೊಲೀಸ್ ಇಲಾಖೆಯನ್ನು ಕೇಸರಿಕರಣ ಮಾಡಲು ಹೊರಟಿದ್ದೀರಾ ನೀವು? ಎಂದು ಹಿರಿಯ ಪೊಲೀಸ್ ಅಧಿಕಾರಿಗಳ ಸಭೆಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಗರಂ ಆಗಿದ್ದಾರೆ. ವಿಧಾನಸೌಧದಲ್ಲಿ ಮಂಗಳವಾರ ನಡೆದ ಹಿರಿಯ ಪೊಲೀಸ್ ಅಧಿಕಾರಿಗಳ ಸಭೆಯಲ್ಲಿ, ಪೊಲೀಸ್ ಅಧಿಕಾರಿಗಳನ್ನು ತರಾಟೆ ಡಿಸಿಎಂ ತೆಗೆದುಕೊಂಡರು.

ಡಿಜಿಪಿ ಅಲೋಕ್ ಮೋಹನ್, ಬೆಂಗಳೂರು ನಗರ ಪೊಲೀಸ್ ಆಯುಕ್ತರು ಸೇರಿ ಹಿರಿಯ ಪೊಲೀಸ್ ಅಧಿಕಾರಿಗಳು ಭಾಗಿಯಾಗಿದ್ದರು. ಸಭೆಯಲ್ಲಿ ಮಾತನಾಡಿದ ಡಿಕೆ ಶಿವಕುಮಾರ್ ಹಿರಿಯ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ಪೊಲೀಸ್ ಇಲಾಖೆಯನ್ನು ಕೇಸರಿಕರಣ ಮಾಡಲು ಹೊರಟಿದ್ದೀರಾ ನೀವು? ನಮ್ಮ ಸರ್ಕಾರದಲ್ಲಿ ಇದಕ್ಕೆ ಅವಕಾಶ ಕೊಡುವುದಿಲ್ಲ. ಮಂಗಳೂರು, ವಿಜಯಪುರ, ಬಾಗಲಕೋಟೆಯಲ್ಲಿ ನೀವು ಹೇಗೆ ಕೇಸರಿ ಬಟ್ಟೆ ಹಾಕೊಂಡು ಇಲಾಖೆಗೆ ಅವಮಾನ ಮಾಡಿದ್ರಿ ಅಂತಾ ಗೊತ್ತಿದೆ ಎಂದು ತರಾಟೆಗೆ ತೆಗೆದುಕೊಂಡರು.

ಈ‌ ಸಭೆಗೂ ಕೇಸರಿ ಶಾಲು ಹಾಕಿಕೊಂಡು ಬರಬೇಕಾಗಿತ್ತು. ದೇಶದ ಬಗ್ಗೆ ಗೌರವ ಇದ್ರೆ ರಾಷ್ಟ್ರ ಧ್ವಜ ಹಾಕೊಂಡು ಕೆಲಸ ಮಾಡಬೇಕಿತ್ತು. ನಮ್ಮ ಸರಕಾರದಲ್ಲಿ ಪೊಲೀಸ್ ಇಲಾಖೆಯನ್ನು ಕೇಸರಿಕರಣ ಮಾಡಲು ನಾವು ಬಿಡುವುದಿಲ್ಲ ಎಂದು ಗರಂ ಆಗಿದ್ದಾರೆ.

'; } else { echo "Sorry! You are Blocked from seeing the Ads"; } ?>

ಪಿಎಸ್‌ಐ ನೇಮಕಾತಿ ಅಕ್ರಮದಲ್ಲಿ ಒಬ್ಬ ಎಡಿಜಿಪಿ ಒಎಂಆರ್‌ ಶೀಟ್‌ ತಿದ್ದುತ್ತಾರೆ ಅಂದರೆ ಇಲಾಖೆ ಎಷ್ಟು ಕೆಟ್ಟು ಹೋಗಿದೆ ನೋಡಿ. ಪ್ರೆಸ್ ಕಾನ್ಫರೆನ್ಸ್ ಮಾಡಿ ಪ್ರಕರಣ ಬಯಲಿಗೆ ತಂದವರಿಗೆ ಕಿರುಕುಳ ನೀಡಿದ್ದೀರಾ. ಪ್ರಿಯಾಂಕ್ ಖರ್ಗೆ ಅವರಿಗೆ ಕಾಟ ಕೊಟ್ಟಿದ್ದೀರಾ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇಡೀ ದೇಶದಲ್ಲಿ ಕರ್ನಾಟಕ ಪೊಲೀಸ್ ಇಲಾಖೆಗೆ ಒಳ್ಳೆಯ ಹೆಸರಿತ್ತು. ಆ ಗೌರವ, ಘನತೆಯನ್ನ ಹಾಳು‌ ಮಾಡಿದ್ದೀರಾ ನೀವು.‌ ಎಲ್ಲಿ ನೋಡಿದ್ರು ಬರೀ ಕಾಸು, ಕಾಸು, ಕಾಸು. ನಮ್ಮ ಸರ್ಕಾರದಲ್ಲಿ ಎಲ್ಲವೂ ಕ್ಲೀನ್ ಆಗಬೇಕು ಎಂದು‌ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಜನ ಈ ಸರಕಾರದಿಂದ ಬಹುದೊಡ್ಡ ಬದಲಾವಣೆಯನ್ನು ನಿರೀಕ್ಷೆ ಮಾಡಿದ್ದಾರೆ.‌ ಅದು ಪೊಲೀಸ್ ಇಲಾಖೆಯಿಂದಲೇ ಶುರು ಆಗಬೇಕು.
ಈ ಸರ್ಕಾರದಿಂದ ಬದಲಾವಣೆ ಸಂದೇಶ ಜನರಿಗೆ ಹೋಗಬೇಕು ಎಂದು ಹೇಳಿದ್ದಾರೆ.

ನಮ್ಮನ್ನೇ ಬಿಡದವರು ಜನಸಾಮಾನ್ಯರನ್ನು ಬಿಡ್ತೀರಾ?
ನಿಮ್ಮಿಂದ ನಮಗೆ ನಯಾಪೈಸೆ ಹಣ ಬೇಕಿಲ್ಲ. ನೀವು ಯಾರಿಗೂ ಹಣ ಕೊಡೋದು ಬೇಡ. ಜನಕ್ಕೆ ತೊಂದರೆಯಾಗದಂತೆ ಉತ್ತಮವಾಗಿ ಕೆಲಸ ಮಾಡಿದ್ರೆ ಸಾಕು. ಉರಿಗೌಡ, ನಂಜೇಗೌಡ ಪ್ರಕರಣದಲ್ಲಿ ‌ಏನಾಯ್ತು ಗೊತ್ತಿದೆ, ಹಿಂದೆ ಪೇ ಸಿಎಂ ಅಭಿಯಾನ ಮಾಡಿದಾಗ ನನ್ನ ಮತ್ತು ಸಿದ್ದರಾಮಯ್ಯರ ಜೊತೆ ಹೇಗೆ ನಡೆದುಕೊಂಡಿದ್ದೀರಾ ಗೊತ್ತಿದೆ. ಸಿದ್ದರಾಮಯ್ಯ ಅವರನ್ನು ಹೊಡೆದು ಹಾಕಬೇಕು ಅಂದವರ ಮೇಲೆ ಕೂಡ ಕೇಸ್ ಹಾಕಿಲ್ಲ, ನಮ್ಮ ಮೇಲೆ ಕೇಸ್ ಹಾಕಿದ್ರಿ, ನಮ್ಮ ಕಾರ್ಯಕರ್ತರ ಮೇಲೆ ಸುಳ್ಳು, ಸುಳ್ಳು ಸಾವಿರಾರು ಕೇಸ್ ಹಾಕಿದ್ರಿ, ಅವರಿಗೆ ತೊಂದರೆ ಕೊಟ್ಟಿದ್ದೀರಾ, ನನ್ನನ್ನು, ಸಿದ್ದರಾಮಯ್ಯ ಅವರನ್ನೇ ಬಿಡದ ನೀವು, ಜನ ಸಾಮಾನ್ಯರನ್ನು ಬಿಡ್ತೀರಾ? ಎದುರು ಪಾರ್ಟಿ ವಿರುದ್ಧ ಮಾತ್ರ ಯಾವ ಕೇಸ್ ಹಾಕಿಲ್ಲ, ಅವರ ಜೊತೆ ಶಾಮೀಲಾಗಿ ಕುಣಿದ್ರಿ ಎಂದು ತರಾಟೆಗೆ ತೆಗೆದುಕೊಂಡರು.

'; } else { echo "Sorry! You are Blocked from seeing the Ads"; } ?>

'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

You missed

error: Content is protected !!