';
}
else
{
echo "Sorry! You are Blocked from seeing the Ads";
}
?>
ಕಡಬ: ಉದ್ಯಮಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕುದ್ಮಾರು ಗ್ರಾಮದ ಶಾಂತಿಮೊಗರು ಬಳಿ ನಡೆದಿದೆ.
ಆತ್ಮಹತ್ಯೆ ಗೆಯ್ಯುವ ಸಂದರ್ಭದಲ್ಲಿ ಬಲೂನ್ ಕಟ್ಟಿಕೊಂಡು ಕುಮಾರಧಾರ ನದಿಗೆ ಹಾರಿದ ವ್ಯಕ್ತಿಯನ್ನು ಚಂದ್ರಶೇಖರ ಎಂದು ತಿಳಿದು ಬಂದಿದೆ.
ಚಂದ್ರಶೇಖರ ಅವರು ಬಲೂನ್ ಕಟ್ಟಿಕೊಂಡು ಶಾಂತಿಮೊಗರು ಸೇತುವೆಯ ಮೇಲಿಂದ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತದೇಹ ಬೇಗ ಸಿಗಲಿ ಎಂಬ ಉದ್ದೇಶದಿಂದ ಬಲೂನ್ ಕಟ್ಟಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಅಂದಾಜಿಸಲಾಗಿದೆ. ಸದ್ಯ ತೇಲುತ್ತರಿರುವ ಬಲೂನ್ ನೋಡಿ ಅನುಮಾನಿಸಿದ ಸ್ಥಳೀಯರು ನದಿಗೆ ಹಾರಿ ಪರಿಶೀಲಿಸಿದಾಗ ಮೃತದೇಹ ಪತ್ತೆಯಾಗಿದ್ದು, ಅದನ್ನು ಹೊರತಂದಿದ್ದಾರೆ. ಉದ್ಯಮಿ ಚಂದ್ರಶೇಖರ ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಸ್ಥಳಕ್ಕೆ ಭೇಟಿ ನೀಡಿದ ಕಡಬ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ.
';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>