dtvkannada

'; } else { echo "Sorry! You are Blocked from seeing the Ads"; } ?>

ಧಾರವಾಡ: ಉದ್ಯಮಿ ಸೇರಿ ಇಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಗರದ ಧಾರವಾಡದ ಕಮಲಾಪುರದಲ್ಲಿ ನಡೆದಿದೆ.

ಘಟನೆಯಲ್ಲಿ ರಿಯಲ್ ಎಸ್ಟೇಟ್ ಉದ್ಯಮಿ ಮಹಮ್ಮದ್ ಕುಡಚಿ ಹಾಗೂ ಮತ್ತೊರ್ವ ವ್ಯಕ್ತಿಯನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದ ಬಗ್ಗೆ ವರದಿಯಾಗಿದೆ.
ಮಹಮ್ಮದ್ ಮನೆ ಎದುರು ಕುಳಿತುಕೊಂಡಿದ್ದ ಸಂದರ್ಭದಲ್ಲಿ ದುಷ್ಕರ್ಮಿಗಳ ಗುಂಪು ಅವರ ಮೇಲೆ ದಾಳಿ ನಡೆಸಿ ಹತ್ಯೆ ಮಾಡಿದೆ ಎಂದು ತಿಳಿದು ಬಂದಿದೆ.

ಕುಡಚಿ ಅವರ ಮನೆಯಿಂದ ಒಂದಷ್ಟು ದೂರದಲ್ಲಿ ಮತ್ತೊಂದು ಶವ ಪತ್ತೆಯಾಗಿದ್ದು ಆ ಶವ ಕೂಡ ರಕ್ತಸಿಕ್ತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಕುಡಚಿ ಅವರ ಮನೆಯಿಂದಲೇ ಆ ವ್ಯಕ್ತಿ ಕೂಡ ಜೀವ ಉಳಿಸಿಕೊಳ್ಳಲು ಓಡಿ ಹೋಗಿದ್ದು ದುಷ್ಕರ್ಮಿಗಳು ಆತನನ್ನೂ ಅಟ್ಟಾಡಿಸಿಕೊಂಡು ಹತ್ಯೆ ಮಾಡಿದ್ದಾರೆಂದು ತಿಳಿದು ಬಂದಿದೆ. ಸ್ಥಳಕ್ಕೆ ಪೊಲೀಸ್ ಆಯುಕ್ತ ರಮಣ್ ಗುಪ್ತಾ ಸೇರಿದಂತೆ ಉಪನಗರ ಠಾಣೆ ಪೊಲೀಸರು ಭೇಟಿ ನೀಡಿದ್ದು ತನಿಖೆಯನ್ನು ಕೈಗೆತ್ತಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

'; } else { echo "Sorry! You are Blocked from seeing the Ads"; } ?>
'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!