dtvkannada

'; } else { echo "Sorry! You are Blocked from seeing the Ads"; } ?>

ಮಂಗಳೂರು: ದಿ.ಪ್ರವೀಣ್‌ ನೆಟ್ಟಾರು ಪತ್ನಿಗೆ ಖಾಯಂ ಉದ್ಯೋಗ ಕೊಡಿಸಲಾಗದ ಸಂಸದ ನಳಿನ್ ಕುಮಾರ್ ಕಟೀಲ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿ, ನೆಟ್ಟಾರ್ ಪತ್ನಿಗೆ ವೈಯಕ್ತಿಕ ನೆಲೆಯಲ್ಲಿ ನಾನು ಕೆಲಸ ಕೊಡಿಸುತ್ತೇನೆ ಎಂದು ಬಿಲ್ಲವ ಮುಖಂಡೆ ಕೆಪಿಸಿಸಿ ಸಂಯೋಜಕಿ ಪ್ರತಿಭಾ ಕುಳಾಯಿ ಸವಾಲು ಹಾಕಿದ್ದಾರೆ.

ಪ್ರತಿಭಾ ಕುಳಾಯಿ ಅವರು ಇಂದಿಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಹತ್ಯೆಯಾಗಿರುವ ಪ್ರವೀಣ್ ನೆಟ್ಟಾರ್ ಬಿಲ್ಲವ ಸಮಾಜಕ್ಕೆ ಸೇರಿದವರು.
ಅವರ ಪತ್ನಿಗೆ ಕೆಲಸ ಕೊಡುವುದು ದೊಡ್ಡ ಕೆಲಸವಲ್ಲ, ಆದರೆ ಬಿಜೆಪಿ ಕೊಡಿಸಿರುವ ಗುತ್ತಿಗೆ ಆಧಾರದ ಕೆಲಸದ ಅವಧಿ ಮುಗಿದಿದೆ. ಇದು ನಿಜಕ್ಕೂ ಜಿಲ್ಲೆಯ ಸಂಸದ ನಳಿನ್ ಕುಮಾರ್ ಕಟೀಲ್ ನಾಚಿಕೆ ಪಡ ಬೇಕಾದ ವಿಷಯ.

'; } else { echo "Sorry! You are Blocked from seeing the Ads"; } ?>

ಬಿಜೆಪಿ ಸರಕಾರ ಇದ್ದಾಗ ಮುಖ್ಯಮಂತ್ರಿಯವರಿಗೆ ಮತ್ತು ಎಂ.ಪಿ. ನಳಿನ್ ಕುಮಾರ್ ಕಟೀಲ್ ಅವರಿಗೆ ನೆಟ್ಟಾರ್ ಪತ್ನಿಯನ್ನು ಕೇಂದ್ರ ಅಥವಾ ರಾಜ್ಯ ಸರಕಾರಿ ಸ್ವಾಮ್ಯದ ಕಂಪೆನಿಗಳಲ್ಲಿ ಕೆಲಸಕ್ಕೆ ಸೇರಿಸಬಹುದಿತ್ತು ಅಥವಾ ಸರಕಾರದಿಂದ ಶಾಶ್ವತ ಉದ್ಯೋಗ ಕಲ್ಪಿಸ ಬಹುದಿತ್ತು. ಅದನ್ನು ಬಿಟ್ಟು ತಮ್ಮ ಪಕ್ಷದ ನಿಷ್ಠಾವಂತ ಕಾರ್ಯಕರ್ತ ಹತ್ಯೆಗೀಡಾದಾಗ ಆತನ ಕುಟುಂಬದ ಸದಸ್ಯರಿಗೆ ತಾತ್ಕಾಲಿಕ ನೆಲೆಯಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ನೀಡಲಾಗಿದೆ. ಇದು ನಮ್ಮ ಬಿಲ್ಲವ ಸಮಾಜ ಖಂಡಿತಾ ಒಪ್ಪುವುದಿಲ್ಲ. ನಳಿನ್ ಕುಮಾರ್ ಕಟೀಲ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿ.ನೆಟ್ಟಾರ್ ಪತ್ನಿಗೆ ವೈಯಕ್ತಿಕ ನೆಲೆಯಲ್ಲಿ ನಾನು ಕೆಲಸ ಕೊಡಿಸುತ್ತೇನೆ ಎಂದು ತಿಳಿಸಿದರು.

ಹಿಂದೂ ಸಂಘಟನೆಯ ಬಿಲ್ಲವ ಯುವಕರನ್ನು ಬಿಜೆಪಿ ನಾಯಕರು ತಮಗೆ ಬೇಕಾದಂತೆ ಬಳಸಿಕೊಂಡು ಕೊನೆಗೆ ಕೈಬಿಡುತ್ತಾರೆ. ನೆಟ್ಟಾರ್ ಕುಟುಂಬ ನಮ್ಮ ಬಿಲ್ಲವ ಸಮಾಜಕ್ಕೆ ಸೇರಿದ್ದು, ಕಾಂಗ್ರೆಸ್ ಸರಕಾರದ ಅವಧಿಯಲ್ಲಿ ನೆಟ್ಟಾರ್ ಅವರ ಪತ್ನಿಗೆ ಉದ್ಯೋಗ ಕೊಡಲು ನಾವೆಲ್ಲರೂ ಒಂದಾಗಿ ಪ್ರಾಮಾಣಿಕ ಪ್ರಯತ್ನ ಮಾಡಲಿದ್ದೇವೆ ಎಂದರು.

'; } else { echo "Sorry! You are Blocked from seeing the Ads"; } ?>

ಬಿಲ್ಲವ ಸಮಾಜದ ಹಿರಿಯ ಕಾಂಗ್ರೆಸ್ ನಾಯಕರಾದ ಬಿ.ಕೆ. ಹರಿಪ್ರಸಾದ್, ಹರೀಶ್ ಕುಮಾರ್ ಇಬ್ಬರು ಎಂ.ಎಲ್.ಸಿ.ಗಳಿದ್ದು ಅವರಿಗೆ ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ನೀಡಬೇಕೆಂದು ಒತ್ತಾಯಿಸಿದರು

'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!