ಒಡಿಶಾ: ಬಹನಾಗಾ ರೈಲು ನಿಲ್ದಾಣದ ಬಳಿ ಎರಡು ರೈಲುಗಳು ಪರಸ್ಪರ ಮುಖಾಮುಖಿ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದ್ದು ನೂರಕ್ಕೂ ಅಧಿಕ ಮಂದಿ ಗಾಯಗೊಂಡಿದ್ದು ಒಂದಷ್ಟು ಮಂದಿ ಸಾವಿಗೀಡಾಗಿರುವ ಸಾಧ್ಯತೆಯೂ ಇದೆ ಎನ್ನಲಾಗಿದೆ.

ಹೌರಾದಿಂದ ಚೆನ್ನೈಗೆ ತೆರಳುತ್ತಿದ್ದ ಕೋರಮಂಡಲ್ ಎಕ್ಸ್‌ಪ್ರೆಸ್ ರೈಲು ಬಾಲಸೋರ್‌ನಿಂದ ಸುಮಾರು 40 ಕಿಲೋಮೀಟರ್ ದೂರದಲ್ಲಿ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದಿದೆ. ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದ ನಂತರ 3 ಫೀಪರ್ ಕೋಚ್‌ಗಳನ್ನು ಬಿಟ್ಟು ಉಳಿದ ಬೋಗಿಗಳು ಹಳಿತಪ್ಪಿದವು.

ಬೋಗಿಗಳಲ್ಲಿ ಹೆಚ್ಚಿನ ಸಂಖ್ಯೆಯ ಪ್ರಯಾಣಿಕರು ಸಿಕ್ಕಿಹಾಕಿಕೊಂಡಿದ್ದು, ಅವರನ್ನು ರಕ್ಷಿಸಲು ಸ್ಥಳೀಯ ಜನರು ಜಮಾಯಿಸಿದ್ದಾರೆ ಎಂದು ತಿಳಿದುಬಂದಿದೆ. ಈ ರೈಲು ಚೆನ್ನೈ ಸೆಂಟ್ರಲ್‌ನಿಂದ ಕೋಲ್ಕತ್ತಾದ ಶಾಲಿಮಾರ್ ರೈಲು ನಿಲ್ದಾಣಕ್ಕೆ ಹೋಗುತ್ತಿತ್ತೆನ್ನಲಾಗಿದೆ.
ಎರಡೂ ರೈಲುಗಳು ಒಂದೇ ಮಾರ್ಗದಲ್ಲಿ ಬಂದಿದ್ದರಿಂದ ಈ ಭೀಕರ ಅಪಘಾತ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ಸಿಗ್ನಲ್ ವೈಫಲ್ಯದಿಂದ ಎರಡೂ ರೈಲುಗಳು ಒಂದೇ ಹಳಿಯಲ್ಲಿ ಬಂದು ಡಿಕ್ಕಿ ಹೊಡೆದಿದೆ ಎಂದು ತಿಳಿದು ಬಂದಿದೆ.