';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>
ಕಲಬುರಗಿ: ಮಾರಕಾಸ್ತ್ರದಿಂದ ಇರಿದು ಯುವಕನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ನಗರದ ಆಜಾದಪುರ್ ರಸ್ತೆಯಲ್ಲಿ ನಡೆದಿದೆ.
ಉಮ್ಮರ್ (23) ಕೊಲೆಯಾದ ಯುವಕ. ಉಮರ್, ಕಲಬುರಗಿ ನಗರದ ಬಿಲಾಲಾಬಾದ್ ಕಾಲೋನಿ ನಿವಾಸಿಯಾಗಿದ್ದಾನೆ.
ನಿನ್ನೆ (ಜೂ.05) ರಾತ್ರಿ ಹನ್ನೊಂದು ಮೂವತ್ತರ ಸುಮಾರಿಗೆ ದುಷ್ಕರ್ಮಿಗಳು ಚಾಕುವಿನಿಂದ ದೇಹದ ವಿವಿಧೆಡೆ ಇರಿದು ಪರಾರಿಯಾಗಿದ್ದಾರೆ. ರಕ್ತದ ಮಡುವಿನಲ್ಲಿ ಬಿದ್ದು ನರಳಾಡುತ್ತಿದ್ದ ಉಮರ್ನನ್ನು ಸ್ಥಳೀಯರು ಕೂಡಲೇ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ.
ಹಳೆ ವೈಷಮ್ಯದ ಹಿನ್ನೆಲೆಯಲ್ಲಿ ಕೊಲೆ ಮಾಡಲಾಗಿದೆ ಎಂಬ ಶಂಕೆ ವ್ಯಕ್ತವಾಗಿದೆ. ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.