dtvkannada

'; } else { echo "Sorry! You are Blocked from seeing the Ads"; } ?>

ಬೆಂಗಳೂರು: ರಾಜ್ಯದಲ್ಲಿ ಬಾರಿ ಸುದ್ದಿಯಾಗಿದ್ದ ಇಬ್ಬರು ಐಎಎಸ್ ಅಧಿಕಾರಿಗಳ ನಡುವಿನ ಕಚ್ಚಾಟಕ್ಕೆ ಇದೀಗ ನ್ಯಾಯಾಲಯ ಬ್ರೇಕ್ ಕೊಟ್ಟಿದೆ. ಅಧಿಕಾರಿ ರೋಹಿಣಿ ಸಿಂಧೂರಿ ಅವರು ಹೂಡಿದ್ದ ಮಾನನಷ್ಟ ಮೊಕದ್ದಮೆ ಪ್ರಕರಣದ ವಿಚಾರಣೆಗೆ ಮಂಗಳವಾರ ಹಾಜರಾದ ಐಪಿಎಸ್ ಅಧಿಕಾರಿ ಡಿ. ರೂಪಾ ಅವರಿಗೆ ನಗರದ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

ಐಎಎಸ್ ‘ಡಿ. ರೂಪಾ ಅವರು ನನ್ನ ವಿರುದ್ಧ ಕೀಳು ಅಭಿರುಚಿಯಿಂದ ಕೂಡಿದ ಆರೋಪ ಮಾಡಿದ್ದು ವಿದ್ಯುನ್ಮಾನ ಮಾಧ್ಯಮದಲ್ಲೂ ಹೇಳಿಕೆ ನೀಡಿದ್ದಾರೆ. ಇದರಿಂದಾಗಿ ನನ್ನ ವ್ಯಕ್ತಿತ್ವಕ್ಕೆ ಧಕ್ಕೆ ಉಂಟಾಗಿದ್ದು ನನ್ನ ಖಾಸಗಿ, ಸಾಮಾಜಿಕ ಮತ್ತು ವೃತ್ತಿ ಬದುಕಿನ ಮೇಲೆ ಗಂಭೀರ ಪರಿಣಾಮ ಬೀರಿ, ಮಾನಸಿಕವಾಗಿ ನೋವುಂಟು ಮಾಡಿದೆ’ ಎಂದು ರೋಹಿಣಿ ಸಿಂಧೂರಿ ಖಾಸಗಿ ಮೊಕದ್ದಮೆ ಹೂಡಿದ್ದರು.

'; } else { echo "Sorry! You are Blocked from seeing the Ads"; } ?>

ವಿಚಾರಣೆ ನಡೆಸಿದ್ದ ಮ್ಯಾಜಿಸ್ಟ್ರೇಟ್ ನ್ಯಾಯಾಲಯ, ಡಿ. ರೂಪಾ ವಿರುದ್ಧ ಕ್ರಿಮಿನಲ್ ಮಾನನಷ್ಟ ಪ್ರಕರಣ ದಾಖಲಿಸಲು ಆದೇಶಿಸಿತ್ತು. ಜೊತೆಗೆ, ಡಿ. ರೂಪಾ ಅವರಿಗೆ ಸಮನ್ಸ್ ಜಾರಿ ಕೂಡ ಮಾಡಿತ್ತು.

ಅದಾಗಲೇ ಸಮನ್ಸ್ ಸ್ವೀಕರಿಸಿದ್ದ ಡಿ. ರೂಪಾ ಅವರು 24ನೇ ಹೆಚ್ಚುವರಿ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಮಂಗಳವಾರ ಹಾಜರಾಗಿದ್ದು ವಿಚಾರಣೆ ನಡೆಸಿದ ನ್ಯಾಯಾಧೀಶರು, ₹ 25 ಸಾವಿರ ಮೊತ್ತದ ವೈಯಕ್ತಿಕ ಬಾಂಡ್ ಹಾಗೂ ಇತರೆ ಷರತ್ತುಗಳನ್ನು ವಿಧಿಸಿ ಜಾಮೀನು ನೀಡಿದೆ ಎಂದು ತಿಳಿದು ಬಂದಿದೆ.

'; } else { echo "Sorry! You are Blocked from seeing the Ads"; } ?>

'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!