dtvkannada

'; } else { echo "Sorry! You are Blocked from seeing the Ads"; } ?>

ಹಾಸ್ಟೆಲ್‌ನಲ್ಲಿರುವ ಕಾಲೇಜು ವಿದ್ಯಾರ್ಥಿನಿಯೊಬ್ಬಳನ್ನು ಅತ್ಯಾಚಾರ ಎಸಗಿ, ಕೊಲೆಗೈದಿದ್ದು, ಅದೇ ಹಾಸ್ಟೆಲಿನ ಸೆಕ್ಯುರಿಟಿ ಗಾರ್ಡ್ ಮೃತದೇಹ ಹಾಸ್ಟೇಲ್ ಸಮೀಪದ ರೈಲ್ವೆ ಟ್ರಾಕ್ ಬಳಿ ಪತ್ತೆಯಾಗಿರುವ ರೋಚಕ ಘಟನೆ ಮುಂಬೈನಲ್ಲಿ ನಡೆದಿದೆ.

ಹಾಸ್ಟೆಲ್ ವಿದ್ಯಾರ್ಥಿನಿಯೊಬ್ಬಳು ಮಂಗಳವಾರ ಸಂಜೆ ನಾಪತ್ತೆಯಾಗಿದ್ದ ಕುರಿತು ಪೊಲೀಸರಿಗೆ ದೂರು ನೀಡಿದ್ದು
ಬಳಿಕ ಆಕೆಯನ್ನು ಹುಡುಕಾಡಿದಾಗ ಹಾಸ್ಟೆಲ್ ನ ನಾಲ್ಕನೇ ಮಹಡಿಯ ಕೊಠಡಿಯೊಂದರಲ್ಲಿ ವಿದ್ಯಾರ್ಥಿನಿಯ ಮೃತಪಟ್ಟ ರೀತಿಯಲ್ಲಿ ಮೃತದೇಹ ಪತ್ತೆಯಾಗಿತ್ತು.

ಪೊಲೀಸ್ ಪರಿಶೀಲನೆ ನಡೆಸಿದಾಗ ಆಕೆಯನ್ನು ಬಟ್ಟೆಯ ತುಂಡಿನಿಂದ ಕತ್ತು ಹಿಸುಕಿ ಕೊಲೆ ಮಾಡಿರುವ ಬಗ್ಗೆ ತಿಳಿದು ಬಂದಿದ್ದು ಸಾಕ್ಷ್ಯಧಾರದ ಮೂಲಕ ವಿದ್ಯಾರ್ಥಿನಿಯ ಸಂಬಂಧಿಕರ ದೂರಿನಂತೆ ಕಾಣೆಯಾಗಿದ್ದ ಸೆಕ್ಯುರಿಟಿ ಗಾರ್ಡ್ ವಿರುದ್ಧ ಎಫ್ಐಆರ್ ದಾಖಲಾಗಿತ್ತು.

ಪೊಲೀಸರು ತನಿಖೆ ನಡೆಸಿದಾಗ ಹಾಸ್ಟೆಲ್ ಸೆಕ್ಯುರಿಟಿ ಗಾರ್ಡ್ ಓಂ ಪ್ರಕಾಶ್ ಕನೌಜಿಯಾ ಎಂಬಾತ ನಾಪತ್ತೆಯಾಗಿರುವುದು ತಿಳಿದು ಬಂದಿದ್ದು ಆತನ ಪತ್ತೆಗಾಗಿ ತನಿಖೆ ನಡೆಸಿದಾಗ ಚಾರ್ನಿ ರೋಡ್ ಸ್ಟೇಷನ್‌ನ ಟ್ರಾಕ್ ಬಲಿ ಮೃತದೇಹ ಪತ್ತೆಯಾಗಿದ್ದು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಮುಂದಿನ ತನಿಖೆ ನಡೆಸಿ ವರದಿಗಾಗಿ ಕಾಯುತ್ತಿದ್ದಾರೆ ಎಂದು ತಿಳಿದು ಬಂದಿದೆ.

'; } else { echo "Sorry! You are Blocked from seeing the Ads"; } ?>
'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!