';
}
else
{
echo "Sorry! You are Blocked from seeing the Ads";
}
?>
ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿಗಳನ್ನು ತಡೆದು ಹಣ ವಸೂಲಿ ಮಾಡುತ್ತಿದ್ದ ಓರ್ವ ಎಎಸ್ಐ ಸೇರಿ ಇಬ್ಬರು ಪೊಲೀಸರನ್ನು ಅಮಾನತು ಮಾಡಿದ ಬಗ್ಗೆ ವರದಿಯಾಗಿದೆ.
ತುಮಕೂರಿನ ಕಳ್ಳಂಬೆಳ್ಳ ಠಾಣೆಯ ಎಎಸ್ಐ ಚಿದಾನಂದ ಸ್ವಾಮಿ ಹಾಗೂ ಪೊಲೀಸ್ ಜೀಪ್ ಚಾಲಕ ಚಿಕ್ಕಹನುಮಯ್ಯ ಅವರನ್ನು ಅಮಾನತು ಮಾಡಿ ತುಮಕೂರು ಎಸ್.ಪಿ ರಾಹುಲ್ ಕುಮಾರ್ ಶಹಪುರ್ ವಾಡ್ ಆದೇಶ ಹೊರಡಿಸಿದ್ದಾರೆ.
ಶಿರಾ ಟು ತುಮಕೂರಿನ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಲಾರಿಗಳನ್ನು ತಡೆದು 200, 300 ರೂಪಾಯಿ ಹಣ ವಸೂಲಿ ಮಾಡುತ್ತಿದ್ದರು. ಈ ವೇಳೆ ಲಾರಿ ಚಾಲಕರಿಂದ ಪೊಲೀಸರು ಹಣ ಪಡೆಯುವ ದೃಶ್ಯ ಮೊಬೈಲ್ ನಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.
ಈ ಬಗ್ಗೆ ವರದಿ ಕೊಡುವಂತೆ ತುಮಕೂರು ಎಸ್.ಪಿ ರಾಹುಲ್ ಕುಮಾರ್ ಶಹಾಪುರ್ ವಾಡ್ ಶಿರಾ ಪೊಲೀಸ್ ಇನ್ಸ್ ಪೆಕ್ಟರ್ಗೆ ಸೂಚನೆ ನೀಡಿದ್ದರು. ವರದಿಯಲ್ಲಿ ಪೊಲೀಸರು ಹಣ ಪಡೆಯುವುದು ಸಾಬೀತಾದ ಹಿನ್ನೆಲೆ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ ಎಂದು ತಿಳಿದು ಬಂದಿದೆ.
';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>