dtvkannada

'; } else { echo "Sorry! You are Blocked from seeing the Ads"; } ?>

ಬೆಂಗಳೂರು: ಜಿಲ್ಲಾ ಉಸ್ತುವಾರಿ ಸಚಿವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಐತಿಹಾಸಿಕ ಗೆಲುವು ಸಾಧಿಸಿದ್ದ ಕಾಂಗ್ರೆಸ್‌ ಸರ್ಕಾರ ರಚನೆಯಲ್ಲಿಯ ಆರಂಭದಲ್ಲೇ ಮುಖ್ಯಮಂತ್ರಿ ಸ್ಥಾನಕ್ಕಾಗಿ ತೀವ್ರ ಪೈಪೋಟಿ ಏರ್ಪಟ್ಟಿದ್ದು, ಹೈಕಮಾಂಡ್‌ ನಾಯಕರ ಸಮ್ಮುಖದಲ್ಲಿ ಎಲ್ಲಾ ಗೊಂದಲಗಳಿಗೂ ತೆರೆ ಬಿದ್ದಿತ್ತು. ಬಳಿಕ ನೂತನ ಸಚಿವರಿಗೆ ಖಾತೆ ಹಂಚಿಕೆಯನ್ನೂ ಸಹ ಹೈಕಮಾಂಡ್​ ಮಟ್ಟದಲ್ಲಿ ಚರ್ಚಿಸಿ ಹಂಚಲಾಗಿತ್ತು. ಇದೀಗ ತೀವ್ರ ಕುತೂಹಲ ಮೂಡಿಸಿದ್ದ ಜಿಲ್ಲಾ ಉಸ್ತುವಾರಿ ಸಚಿವರ ನೇಮಕ ಮಾಡಲಾಗಿದೆ.

ಉಪ ಮುಖ್ಯಮಂತ್ರಿ ಸೇರಿ 31 ಶಾಸಕರನ್ನು ಜಿಲ್ಲಾ ಉಸ್ತುವಾರಿಯಾಗಿ ಆಯ್ಕೆ ಮಾಡಲಾಗಿದೆ.
ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿಯಾಗಿ ದಿನೇಶ್ ಗುಂಡೂರಾವ್ ಹಾಗು ಉಡುಪಿ ಜಿಲ್ಲಾ ಉಸ್ತುವಾರಿಯಾಗಿ ಲಕ್ಷೀ ಹೆಬ್ಬಾಳ್ಕಾರ್ ರವರನ್ನು ನೇಮಕ ಮಾಡಲಾಗಿದೆ.

'; } else { echo "Sorry! You are Blocked from seeing the Ads"; } ?>

ಯಾರಿಗೆ ಯಾವ ಜಿಲ್ಲೆಯ ಉಸ್ತುವಾರಿ ನೀಡಲಾಗಿದೆ ಎನ್ನುವ ಪಟ್ಟಿ ಈ ಕೆಳಗಿನಂತಿದೆ ನೋಡಿ:
ಬೆಂಗಳೂರು ನಗರ ಉಸ್ತುವಾರಿ ಸಚಿವರಾಗಿ ಡಿ.ಕೆ.ಶಿವಕುಮಾರ್, ತುಮಕೂರು ಜಿಲ್ಲಾ ಉಸ್ತುವಾರಿ-ಡಾ.ಜಿ.ಪರಮೇಶ್ವರ್
ಗದಗ ಜಿಲ್ಲಾ ಉಸ್ತುವಾರಿ ಸಚಿವರಾಗಿ ಹೆಚ್.ಕೆ.ಪಾಟೀಲ್, ಬೆಂಗಳೂರು ಗ್ರಾಮಾಂತರ-ಕೆ.ಹೆಚ್.ಮುನಿಯಪ್ಪ, ರಾಮಲಿಂಗಾರೆಡ್ಡಿ-ರಾಮನಗರ, ಕೆ.ಜೆ.ಜಾರ್ಜ್-ಚಿಕ್ಕಮಗಳೂರು
ಎಂ.ಬಿ.ಪಾಟೀಲ್-ವಿಜಯಪುರ.
ದಿನೇಶ್ ಗುಂಡೂರಾವ್-ದಕ್ಷಿಣ ಕನ್ನಡ
ಹೆಚ್.ಸಿ.ಮಹದೇವಪ್ಪ-ಮೈಸೂರು, ಸತೀಶ್ ಜಾರಕಿಹೊಳಿ-ಬೆಳಗಾವಿ
ಪ್ರಿಯಾಂಕ್ ಖರ್ಗೆ-ಕಲಬುರಗಿ, ಶಿವಾನಂದಪಾಟೀಲ್-ಹಾವೇರಿ
ಜಮೀರ್ ಅಹ್ಮದ್ ಖಾನ್-ವಿಜಯನಗರ
ಶರಣಬಸಪ್ಪ ದರ್ಶನಾಪುರ-ಯಾದಗಿರಿ
ಈಶ್ವರ್ ಖಂಡ್ರೆ-ಬೀದರ್,
ಚಲುವರಾಯಸ್ವಾಮಿ-ಮಂಡ್ಯ
ಎಸ್.ಎಸ್.ಮಲ್ಲಿಕಾರ್ಜುನ್-ದಾವಣಗೆರೆ
ಸಂತೋಷ್ ಲಾಡ್-ಧಾರವಾಡ
ಶರಣಪ್ರಕಾಶ್ ಪಾಟೀಲ್-ರಾಯಚೂರು
ಆರ್.ಬಿ.ತಿಮ್ಮಾಪುರ-ಬಾಗಲಕೋಟೆ
ಕೆ.ವೆಂಕಟೇಶ್-ಚಾಮರಾಜನಗರ
ಕೊಪ್ಪಳ-ಶಿವರಾಜ್ ತಂಗಡಗಿ ಯವರನ್ನು ಜಿಲ್ಲಾ ಉಸ್ತುವಾರಿಗಳಾಗಿ ಆಯ್ಕೆ ಮಾಡಲಾಗಿದೆ

'; } else { echo "Sorry! You are Blocked from seeing the Ads"; } ?>

'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!