dtvkannada

'; } else { echo "Sorry! You are Blocked from seeing the Ads"; } ?>

ಬೆಂಗಳೂರು: ಕೆಲಸ ಕೊಡಿಸುವ ನೆಪದಲ್ಲಿ ಯುವತಿಯರನ್ನ ಕರೆತಂದು ವೇಶ್ಯಾವಾಟಿಕೆಗೆ ದೂಡಿದ್ದ ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಸಿಸಿಬಿ ಪೊಲೀಸರು ಒಟ್ಟು 26 ಯುವತಿಯರನ್ನು ರಕ್ಷಣೆ ಮಾಡಿದ್ದು, 9 ಜನ ಆರೋಪಿಗಳನ್ನು ಬಂಧಸಿದ್ದಾರೆ.

'; } else { echo "Sorry! You are Blocked from seeing the Ads"; } ?>

ಆರೋಪಿಗಳು ಕೆಲಸ ಕೊಡಸುವ ನೆಪದಲ್ಲಿ ಹೊರ ರಾಜ್ಯದಿಂದ ಯುವತಿಯರನ್ನ ಕರೆತರುತ್ತಿದ್ದರು. ಯುವತಿಯರನ್ನು ನಗರದ ಪಿಜಿಗಳಲ್ಲಿ ಇರಿಸಿ ಆರೋಪಿಗಳು ವೇಶ್ಯಾವಾಟಿಕೆಗೆ ದೂಡುತ್ತಿದ್ದರು. ಈ ವಿಷಯ ತಿಳಿದ ಸಿಸಿಬಿ ಪೊಲೀಸರು ಜ್ಞಾನಭಾರತಿ ಪೊಲೀಸ್ ಠಾಣಾ ವ್ಯಾಪ್ತಿಯ ಹಲವು ಕಡೆ ದಾಳಿ ಮಾಡಿದ್ದಾರೆ.

ದಾಳಿಯಲ್ಲಿ ದೆಹಲಿ ಮೂಲದ ನಾಲ್ವರು, ಮುಂಬೈ ಮೂಲದ 9, ಪಶ್ಚಿಮ ಬಂಗಾಳ ಮೂಲದ 8 ಹಾಗೂ ಛತ್ತೀಸ್ಗಡ ಮೂಲದ ಓರ್ವ ಯುವತಿಯನ್ನು ಸಿಸಿಬಿ ಪೊಲೀಸರು ರಕ್ಷಣೆ ಮಾಡಿದ್ದಾರೆ. ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

'; } else { echo "Sorry! You are Blocked from seeing the Ads"; } ?>
'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!