ಉಪ್ಪಿನಂಗಡಿ: ಮಾಲೀಕುದ್ದೀನಾರ್ ಜುಮಾ ಮಸೀದಿ ಉಪ್ಪಿನಂಗಡಿ ಇದರ ಅಧ್ಯಕ್ಷ, ಹಾಜಿ ಮುಸ್ತಫಾ ಕೆಂಪಿ (52) ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ.
ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಕೆಲ ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇಂದು ಸಂಜೆ ಮಂಗಳೂರಿನ ಆಸ್ಪತ್ರೆಯಲ್ಲಿ ಮೃತಪಟ್ಟಿರುವುದಾಗಿ ವರದಿಯಾಗಿದೆ.
ಸಾಮಾಜಿಕ, ಧಾರ್ಮಿಕ, ಸಂಘಟನೆ ಸೇರಿದಂತೆ ಹಲವು ರಂಗಗಳಲ್ಲಿ ಸಕ್ರಿಯರಾಗಿದ್ದ ಮುಸ್ತಫಾ ಕೆಂಪಿ ರವರನ್ನು ಕಳೆದುಕೊಂಡ ಊರಲ್ಲಿ ಸ್ಮಶಾನ ಮೌನ ಅಡಗಿದೆ. ಉಪ್ಪಿನಂಗಡಿ ಗ್ರಾ.ಪಂ. ಮಾಜಿ ಸದಸ್ಯರಾಗಿ, ದ.ಕ. ಜಿಲ್ಲಾ ವಕ್ಫ್ ಸಲಹಾ ಸಮಿತಿಯ ಸದಸ್ಯರಾಗಿ, ಪುತ್ತೂರು ತಾಲೂಕು ಸಂಯುಕ್ತ ಜಮಾಅತ್ ಉಪಾಧ್ಯಕ್ಷರಾಗಿ, ಮಾಡನ್ನೂರು ನೂರುಲ್ ಹುದಾ ಇಸ್ಲಾಮಿಕ್ ಅಕಾಡೆಮಿಯ ಉಪಾಧ್ಯಕ್ಷರಾಗಿ, ಕಮ್ಮಾಡಿ ಇಸ್ಲಾಮಿಕ್ ಸೆಂಟರ್‌ನ ಉಪಾಧ್ಯಕ್ಷರಾಗಿ, ಕರ್ನಾಟಕ ಕೋಮು ಸೌಹಾರ್ದ ವೇದಿಕೆಯ ಕೇಂದ್ರ ಸಮಿತಿಯ ಸದಸ್ಯರಾಗಿ, ಇಂಡಿಯನ್ ಸ್ಕೂಲ್ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸುತ್ತಿದ್ದರು.
ಮೃತರು ಪತ್ನಿ, ಮಕ್ಕಳು ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.