';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>
ಮಂಗಳೂರು: ಯುವಕನೊಬ್ಬ ತಲೆಗೆ ಕೋವಿಯಿಂದ ಗುಂಡು ಹಾರಿಸಿಕೊಂಡು ಮೃತಪಟ್ಟ ಘಟನೆ ಸುಳ್ಯ ತಾಲೂಕಿನ ಉಬರಡ್ಕ ಎಂಬಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಅರಂತೋಡು ನಿವಾಸಿ ರವಿ (32) ಎಂದು ಗುರುತಿಸಲಾಗಿದೆ.
ಬೆಳ್ರಂಪಾಡಿಯಲ್ಲಿ ತೋಟದ ಕೆಲಸಕ್ಕೆ ಬಂದಿದ್ದ ಯುವಕ ಮಂಗಳವಾರ ರಾತ್ರಿ ಮನೆಯಿಂದ ಕೋವಿ ಹಿಡಿದು ಗುಡ್ಡಕ್ಕೆ ಹೋಗಿ ಈ ಕೃತ ಎಸಗಿದ್ದಾರೆ. ಕೆಲಸಮಯದಿಂದ ಬೆಳ್ರಂಪಾಡಿಯ ಮನೆಯೊಂದರಲ್ಲಿ ಕೆಲಸ ಮಾಡುತ್ತಿದ್ದ ರವಿ ಕುಡಿತದ ಚಟ ಹೊಂದಿದ್ದರು ಎನ್ನಲಾಗಿದೆ. ಸ್ಥಳಕ್ಕೆ ರಾತ್ರಿಯೇ ಪೊಲೀಸರು ಬಂದು ಮಹಜರು ನಡೆಸಿದ್ದು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೇಲ್ನೋಟಕ್ಕೆ ಆತ್ಮಹತ್ಯೆ ಪ್ರಕರಣ ಎಂದು ಶಂಕಿಸಲಾಗಿದ್ದು ತನಿಖೆ ನಡೆಸಲಾಗುತ್ತಿದೆ ಎಂದು ತಿಳಿದು ಬಂದಿದೆ.