ಬಂಟ್ವಾಳ: ಭೀಕರ ರಸ್ತೆ ಅಪಘಾತದಲ್ಲಿ ಯುವತಿಯೊಬ್ಬಳು ಮೃತಪಟ್ಟ ಘಟನೆ ಬಂಟ್ವಾಳ ವ್ಯಾಪ್ತಿಯ ತುಂಬೆ ಎಂಬಲ್ಲಿ ಇದೀಗ ಸಂಭವಿಸಿದೆ.

ಮೃತಪಟ್ಟ ಯುವತಿಯನ್ನು ಪುತ್ತೂರು ಕೂರ್ನಡ್ಕ ನಿವಾಸಿ ಅಬ್ದುಲ್ ಮಜೀದ್ ರವರ ಮಗಳು ಹನ(19)ಎಂದು ಗುರುತಿಸಲಾಗಿದೆ.
ಪುತ್ತೂರಿನಿಂದ ಮಂಗಳೂರು ಕಡೆ ಪ್ರಯಾಣಿಸುತ್ತಿದ್ದ ಕಾರು ತುಂಬೆ ಸಮೀಪ ಹೆದ್ದಾರಿಯಲ್ಲಿ ಅಪಘಾತಗೊಂಡಿದ್ದು, ಕಾರಿನಲ್ಲಿದ್ದ ಚಾಲಕ ಹಾಗೂ ಮೃತ ಯುವತಿಯ ತಾಯಿಗೆ ಗಾಯಗಳಾಗಿವೆ ಎನ್ನಲಾಗಿದೆ. ಗಾಯಾಳುಗಳನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿದೆ.
ಮೃತಪಟ್ಟ ಯುವತಿ ಬಿ ಬಿ ಯಂ ವಿದ್ಯಾರ್ಥಿನಿ ಎಂದು ತಿಳಿದು ಬಂದಿದೆ.


ವೇಗದಲ್ಲಿ ಸಂಚರಿಸುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ ಎನ್ನಲಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ಬರಬೇಕಿದೆ.ಜಿಲ್ಲೆಯಲ್ಲಿ ಧಾರಾಕರ ಮಳೆಯಾಗುತ್ತಿದ್ದು, ವಾಹನ ಸವಾರರು ಜಾಗೃತವಹಿಸಬೇಕಿದೆ. ರಸ್ತೆಯ ಕಾಮಗಾರಿ ಕೆಲಸ ಪ್ರಗತಿಯಲ್ಲಿದ್ದು, ಬೆಂಗಳೂರು- ಮಂಗಳೂರು ಹೆದ್ದಾರಿಯಲ್ಲಿ ಸಂಚರಿಸುವ ವಾಹನ ಸವಾರರು ಎಚ್ಚರಿಕೆಯಿಂದ ವಾಹನ ಚಲಾಯಿಸುವುದು ಉತ್ತಮ.