dtvkannada

'; } else { echo "Sorry! You are Blocked from seeing the Ads"; } ?>

ಬೆಂಗಳೂರು: ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ಇಂದು 14ನೇ ಬಜೆಟ್ ಮಂಡಿಸಿದ್ದು ಇದು ಬಾರೀ ದುಬಾರಿಯ ಬಜೆಟ್ ಎಂದು ಹೇಳಲಾಗುತ್ತಿದೆ.
ಈ ಬಾರಿ ಕಾಂಗ್ರೆಸ್ ಆಡಳಿತಕ್ಕೆ ಬಂದ ನಂತರ ಮಂಡಿಸಿದ ಪ್ರಥಮ ಬಜೆಟ್ ಇದಾಗಿದೆ.
ಇನ್ನು ಸಿದ್ದರಾಮಯ್ಯರು ಬಜೆಟ್ ಮಂಡಿಸುತ್ತಿದ್ದಂತೆ ಶಾಸಕರು ಮತ್ತು ಸಚಿವರು ಮೇಜು ತಟ್ಟಿ ಬಜೆಟ್ ನ್ನು ಪ್ರಶಂಸಿಸಿದರು.

ಹಾಗಾದರೆ ಸಿದ್ದರಾಮಯ್ಯರ ಜನಪರ ಬಜೆಟ್ ನ ಸಂಪೂರ್ಣ ವಿವರಣೆಗಳನ್ನು ನೋಡಿ.

'; } else { echo "Sorry! You are Blocked from seeing the Ads"; } ?>

“ಸ್ಟಾರ್ಟ್ಅಪ್ ಗಳಿಗೆ ಉತ್ತೇಜನ”

  • ವಿಶ್ವದರ್ಜೆಯ ಪರಿಪೋಷಣ ಕೇಂದ್ರ “INNOVERSE” ಸ್ಥಾಪನೆಗೆ 10 ಕೋಟಿ ರೂ. ಅನುದಾನ.
  • ಸ್ಟಾರ್ಟಪ್‌ ನೀತಿಯಡಿಯಲ್ಲಿ ಅನುದಾನ ನೀಡಿರುವ ಸ್ಟಾರ್ಟ್‌ಅಪ್‌ಗಳ ಪರಿಹಾರಗಳ ಅಳವಡಿಕೆಯನ್ನು ವೇಗಗೊಳಿಸಲು ʻPropelʼ ಯೋಜನೆ ಅನುಷ್ಠಾನ.
  • Global Innovation Alliance- Market Access Programme (GIA-MAP) ಕಾರ್ಯಕ್ರಮ ಆಯೋಜನೆ.
  • New Age Incubation Network (NAIN) ಕೇಂದ್ರಗಳನ್ನು ಬೆಂಬಲಿಸಲು ತಂತ್ರಜ್ಞಾನ ವರ್ಗಾವಣೆ ಸಂಸ್ಥೆ ಸ್ಥಾಪನೆಗೆ 2 ಕೋಟಿ ರೂ. ಅನುದಾನ
  • ಹೊಸ Center of Excellence ಗಳ ಸ್ಥಾಪನೆ:

“ಸುರಕ್ಷತೆಗೆ ಆದ್ಯತೆ”

'; } else { echo "Sorry! You are Blocked from seeing the Ads"; } ?>
  • ಬೆಂಗಳೂರು ನಗರದಲ್ಲಿ ಹೊಸದಾಗಿ 05 ಸಂಚಾರ ಪೊಲೀಸ್‌ ಠಾಣೆಗಳನ್ನು ಮತ್ತು 06 ಮಹಿಳಾ ಪೊಲೀಸ್‌ ಠಾಣೆಗಳನ್ನು ಸ್ಥಾಪಿಸಲು ಕ್ರಮ. ಎರಡು ಹಂತಗಳಲ್ಲಿ ಒಟ್ಟು 2,454 ಹುದ್ದೆಗಳ ಸೃಜನೆ.
  • ಪೊಲೀಸ್‌ ಮೊಬಿಲಿಟಿ ಯೋಜನೆಯಡಿ ಇಲಾಖೆಯಲ್ಲಿನ ಹಳೆಯ ವಾಹನಗಳನ್ನು ಬದಲಾಯಿಸಲು 2023-24ನೇ ಸಾಲಿನಲ್ಲಿ 100 ಕೋಟಿ ರೂ. ಅನುದಾನ.
  • ಅಪರಾಧ ತನಿಖಾ ವಿಭಾಗ (CID), ಸೈಬರ್‌ ಅಪರಾಧ ಘಟಕ (CCD) ಮತ್ತು ಸೈಬರ್‌ ಎಕಾನಾಮಿಕ್ಸ್‌ ಮತ್ತು ನಾರ್ಕೋಟಿಕ್ಸ್‌ (CEN) ಪೊಲೀಸ್‌ ಠಾಣೆಗಳ ಘಟಕಗಳ ಉನ್ನತೀಕರಣಕ್ಕೆ 10 ಕೋಟಿ ರೂ.
  • ಕೆ-ಸೇಫ್‌ ಯೋಜನೆಯಡಿ ಹತ್ತು 3 ಬೇ ಅಗ್ನಿಶಾಮಕ ಠಾಣಾ (3 Bay fire stations) ಕಟ್ಟಡಗಳ ನಿರ್ಮಾಣವನ್ನು ಹಾಗೂ ಅಗತ್ಯವಿರುವ ಅಗ್ನಿಶಾಮಕ ವಾಹನಗಳನ್ನು ಒದಗಿಸಲು 100 ಕೋಟಿ ರೂ. ನೆರವು.

“ಸಣ್ಣ ಕೈಗಾರಿಕೆಗಳಿಗೆ ಉತ್ತೇಜನ”

  • ರಾಜ್ಯದ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ (KSSIDC) ವತಿಯಿಂದ ಹೊಸದಾಗಿ ಏಳು ಕೈಗಾರಿಕಾ ವಸಾಹತುಗಳ ಸ್ಥಾಪನೆ.
  • ೧೦ ಹೆಚ್.ಪಿ. ವರೆಗಿನ ವಿದ್ಯುತ್‌ ಸಂಪರ್ಕ ಹೊಂದಿರುವ ಮಗ್ಗ ಮತ್ತು ಮಗ್ಗಪೂರ್ವ ಘಟಕಗಳಿಗೆ 250 ಯುನಿಟ್‌ ವರೆಗೆ ಉಚಿತ ವಿದ್ಯುತ್‌ ಸೌಲಭ್ಯ.
  • ಮಂಡ್ಯದ ಮೈಸೂರು ಷುಗರ್‌ ಕಂಪನಿಯ ಪುನರುಜ್ಜೀವನಗೊಳಿಸಲು 50 ಕೋಟಿ ರೂ. ಬಂಡವಾಳ.

“ಸುಗಮ ಸಂಚಾರಕ್ಕೆ ಪ್ರಾಶಸ್ತ್ಯ “

  • ರಾಯಚೂರು ಬಳಿಯ ಕಲ್ಮಲಾ ಜಂಕ್ಷನ್‌ ನಿಂದ ಸಿಂಧನೂರು ಬಳಿಯ ಬಳ್ಳಾರಿ – ಲಿಂಗಸುಗೂರು ರಸ್ತೆ ವೃತ್ತದವರೆಗೆ 1,696 ಕೋಟಿ ರೂ.ಗಳ ಮೊತ್ತದಲ್ಲಿ ಒಟ್ಟು 78 ಕಿ.ಮೀ. ಉದ್ದದ ರಸ್ತೆ ಅಭಿವೃದ್ಧಿ.
  • ದೇವನಹಳ್ಳಿ – ವಿಜಯಪುರ – ಹೆಚ್.ಕ್ರಾಸ್ – ವೇಮಗಲ್ – ಮಾಲೂರು – ತಮಿಳುನಾಡು ಗಡಿಯವರೆಗೆ 1,826 ಕೋಟಿ ರೂ.ಗಳ ಅಂದಾಜು ಮೊತ್ತದಲ್ಲಿ ನಾಲ್ಕು ಮತ್ತು ಆರು ಪಥದ 123 ಕಿ.ಮೀ. ಉದ್ದದ ರಸ್ತೆ ನಿರ್ಮಾಣ ಕಾಮಗಾರಿ ಕೈಗೊಳ್ಳಲು ಕ್ರಮ.
  • 2023-24ನೇ ಸಾಲಿನಲ್ಲಿ ಸಾರ್ವಜನಿಕರ ಸಂಚಾರ ಮತ್ತು ವಾಣಿಜ್ಯ ಚುಟುವಟಿಕೆಗಳ ಉತ್ತೇಜನಕ್ಕೆ 4,083 ಕೋಟಿ ರೂ. ಮೊತ್ತದಲ್ಲಿ ಪ್ರಗತಿಯಲ್ಲಿರುವ ಒಟ್ಟು 2,000 ಕಿ.ಮೀ. ಉದ್ದದ ರಾಜ್ಯ ಹೆದ್ದಾರಿಗಳನ್ನು ಮತ್ತು ರಾಜ್ಯದಲ್ಲಿನ ಅಂತರ್‌ಜಿಲ್ಲಾ ಸಂಪರ್ಕಕ್ಕಾಗಿ ಒಟ್ಟಾರೆಯಾಗಿ 2400 ಕಿ. ಮೀ ಉದ್ದದ ಜಿಲ್ಲಾ ರಸ್ತೆಗಳ ಅಭಿವೃದ್ಧಿ ಗುರಿ.

“ನಗರಾಭಿವೃದ್ಧಿಗೆ ಒತ್ತು”

  • ಬೆಂಗಳೂರು ಮತ್ತು ಇತರ ನಗರಗಳಲ್ಲಿ ಇಂದಿರಾ ಕ್ಯಾಂಟೀನ್‌ ಗಳ ಪುನರಾರಂಭಕ್ಕೆ 100 ಕೋಟಿ ರೂ. ಅನುದಾನ.
  • ನಮ್ಮ ಮೆಟ್ರೋ ಯೋಜನೆಯಡಿ ಮುಂದಿನ ಮೂರು ವರ್ಷಗಳಲ್ಲಿ ಈಗಿರುವ 70 ಕಿ.ಮೀ.ನ ಸಂಪರ್ಕಜಾಲವನ್ನು 176 ಕಿ.ಮೀ.ಗೆ ವಿಸ್ತರಿಸಲು ಕ್ರಮ. ವಿಮಾನ ನಿಲ್ದಾಣ ಮಾರ್ಗ 2026 ರಲ್ಲಿ ಪೂರ್ಣ.
  • ಮೆಟ್ರೋ 3ನೇ ಹಂತದಡಿ 15,000 ಕೋಟಿ ರೂ. ಅಂದಾಜು ವೆಚ್ಚದ, ಹೆಬ್ಬಾಳದಿಂದ ಸರ್ಜಾಪುರದವರೆಗಿನ 37 ಕಿ.ಮೀ. ಉದ್ದದ ಯೋಜನೆ ಪ್ರಸ್ತಾವನೆ ಕೇಂದ್ರಕ್ಕೆ ಸಲ್ಲಿಕೆ.
  • ಅಮೃತ್ 2.0 ಯೋಜನೆಯಡಿ 287 ಪಟ್ಟಣಗಳಲ್ಲಿ ನೀರು ಸರಬರಾಜು ಯೋಜನೆ ಮತ್ತು ಜಲಮೂಲಗಳ ಸಂರಕ್ಷಣೆಗಾಗಿ ಪ್ರಸ್ತಕ ಸಾಲಿನಲ್ಲಿ ಒಟ್ಟು 800 ಕೋಟಿ ರೂ. ಅನುದಾನ.

“ಬೆಂಗಳೂರು ನಗರಾಭಿವೃದ್ಧಿ”

  • ಬಿಬಿಎಂಪಿ ವ್ಯಾಪ್ತಿಯಲ್ಲಿನ 20 ತ್ಯಾಜ್ಯ ನೀರು ಸಂಸ್ಕರಣಾ ಘಟಕಗಳನ್ನು ಮೇಲ್ದರ್ಜೆಗೇರಿಸಲು 1,411 ಕೋಟಿ ರೂ. ಮೊತ್ತದ ಯೋಜನೆಗಳಿಗೆ ಅನುಮೋದನೆ; 2023 ರೊಳಗೆ ಯೋಜನೆ ಪೂರ್ಣಗೊಳಿಸಲು ಕ್ರಮ.
  • ಬೈಯ್ಯಪ್ಪನಹಳ್ಳಿಯ ಸರ್‌ ಎಂ. ವಿಶ್ವೇಶ್ವರಯ್ಯ ಟರ್ಮಿನಲ್‌ಗೆ ಸಂಪರ್ಕ ಕಲ್ಪಿಸಲು 263 ಕೋಟಿ ರೂ.ಗಳ ವೆಚ್ಚದಲ್ಲಿ ಹೊಸ ಮೇಲ್ಸೇತುವೆ ನಿರ್ಮಾಣ.
  • ಬೆಂಗಳೂರು ನಗರದಲ್ಲಿ 800 ಕೋಟಿ ರೂ. ವೆಚ್ಚದಲ್ಲಿ 100 ಕಿ.ಮೀ. ಉದ್ದದ ಮುಖ್ಯ ರಸ್ತೆಗಳನ್ನು ವೈಟ್‌ ಟಾಪ್ ರಸ್ತೆಗಳಾಗಿ‌ ಅಭಿವೃದ್ಧಿಪಡಿಸಲು ಕ್ರಮ.
  • 2023-24ನೇ ಸಾಲಿನಲ್ಲಿ 273 ಕೋಟಿ ರೂ. ವೆಚ್ಚದಲ್ಲಿ 83 ಕಿ.ಮೀ. ಉದ್ದದ ಹೈ ಡೆನ್ಸಿಟಿ ಕಾರಿಡಾರ್ ರಸ್ತೆಗಳ‌ ಅಭಿವೃದ್ಧಿ.

“ದುರ್ಬಲ ವರ್ಗಗಳ ಕಲ್ಯಾಣ”

  • SCSP/TSP ಯೋಜನೆಗೆ ಒಟ್ಟು 34,294 ಕೋಟಿ ರೂ. ಹಂಚಿಕೆ. 2023-24ರ ಫೆಬ್ರವರಿ ಆಯವ್ಯಯಕ್ಕಿಂತ 4079 ಕೋಟಿ ರೂ. ಹೆಚ್ಚಳ.
  • SCSP/TSP ಅಧಿನಿಯಮ, 2013ರಡಿ ಹಂಚಿಕೆಯಾಗುವ ಅನುದಾನ ಆ ಸಮುದಾಯಗಳಿಗೇ ಬಳಕೆಯಾಗುವುದನ್ನು ಖಾತರಿ ಪಡಿಸಲು ಕಾಯ್ದೆಯ ಸೆಕ್ಷನ್‌ 7(ಡಿ) ಅನ್ನು ಕೈಬಿಡಲು ಕ್ರಮ.
  • ಪರಿಶಿಷ್ಟ ಜಾತಿ / ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಗೆ ವಿಶ್ವದಲ್ಲಿ 250 ರೊಳಗೆ University Ranking ಹೊಂದಿರುವ ಪ್ರತಿಷ್ಠಿತ ವಿಶ್ವವಿದ್ಯಾನಿಲಯಗಳಲ್ಲಿ ಪದವಿ ಮತ್ತು ಸ್ನಾತಕೋತ್ತರ ಉನ್ನತ ಶಿಕ್ಷಣದ ವೆಚ್ಚ ಭರಿಸಲು 36 ಕೋಟಿ ರೂ. ಅನುದಾನ.

“ಗ್ರಾಮ ಸ್ವರಾಜ್ಯ”

  • ಜಲ್‌ ಜೀವನ್‌ ಮಿಷನ್‌ ಯೋಜನೆಯಡಿ ಸುಸ್ಥಿರ ಜಲಮೂಲ ಆಧರಿಸಿ 118 ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳ ಅನುಷ್ಠಾನದ ಮೂಲಕ 25 ಲಕ್ಷ ಮನೆಗಳಿಗೆ ನಳಸಂಪರ್ಕ ಒದಗಿಸುವ ಗುರಿ.
  • 4,000 ಗ್ರಾಮ ಪಂಚಾಯಿತಿಗಳಲ್ಲಿ ʻಕೂಸಿನ ಮನೆʼ ಎಂಬ ಹೆಸರಿನಲ್ಲಿ ಶಿಶುಪಾಲನಾ ಕೇಂದ್ರಗಳ ಪ್ರಾರಂಭ.
  • ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ 400 ಸಮುದಾಯ ಶೌಚಾಲಯ ಸಂಕೀರ್ಣಗಳ ನಿರ್ಮಾಣಕ್ಕೆ 100 ಕೋಟಿ ರೂ. ಅನುದಾನ.
  • ಕಲ್ಯಾಣ ಕರ್ನಾಟಕ ಪ್ರದೇಶದ ಸಮಗ್ರ ಅಭಿವೃದ್ಧಿಗೆ 5,000 ಕೋಟಿ ರೂ. ವೆಚ್ಚದ ಕಾಮಗಾರಿ ಕೈಗೆತ್ತಿಕೊಳ್ಳಲು ಕ್ರಮ.
  • ಅಭಿವೃದ್ಧಿ ಆಕಾಂಕ್ಷಿ ತಾಲ್ಲೂಕುಗಳಲ್ಲಿ ಅಭಿವೃದ್ಧಿಯ ಬಹು ಆಯಾಮ ಸೂಚ್ಯಂಕಗಳ ಸುಧಾರಣೆಗೆ 3,000 ಕೋಟಿ ರೂ. ವೆಚ್ಚ.

“ಬ್ರಾಂಡ್‌ ಬೆಂಗಳೂರು”

  • ಬೆಂಗಳೂರು ನಗರವನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ ಏರಿಸಲು ʻಬ್ರಾಂಡ್‌ ಬೆಂಗಳೂರುʼ ಪರಿಕಲ್ಪನೆ ಜಾರಿ, ನಗರದ ಸಂಚಾರ ವ್ಯವಸ್ಥೆ, ಪರಿಸರ, ಘನತ್ಯಾಜ್ಯ ನಿರ್ವಹಣೆ, ಸಾರ್ವಜನಿಕ ಸ್ಥಳಗಳ ಸದ್ಬಳಕೆ, ಸಾರ್ವಜನಿಕರ ಆರೋಗ್ಯ, ಪ್ರಾಣಿಗಳ ಆರೋಗ್ಯ, ಜನಸ್ನೇಹಿ ಇ-ಆಡಳಿತ, ನೀರಿನ ಭದ್ರತೆ ಹಾಗೂ ಪ್ರವಾಹ ನಿರ್ವಹಣೆಯ ಸವಾಲುಗಳನ್ನು ಎದುರಿಸಲು ಕ್ರಮ.
  • ಬೆಂಗಳೂರು ಹಾಗೂ ಇತರ ಪಟ್ಟಣಗಳಲ್ಲಿ 3,400 ಕೋಟಿ ರೂ. ವೆಚ್ಚದಲ್ಲಿ ಪಾರಂಪರಿಕ ಮತ್ತು ದ್ರವ ತ್ಯಾಜ್ಯದ ಸಮರ್ಪಕ ನಿರ್ವಹಣೆ ಹಾಗೂ ಒಳಚರಂಡಿ ನೀರು ಸಂಸ್ಕರಿಸುವ ಆಧುನಿಕ ಪದ್ಧತಿಗಳ ಅಳವಡಿಕೆ.
  • ಬೆಂಗಳೂರು ನಗರದ 97 ಲಕ್ಷ ಟನ್‌ನಷ್ಟು ಹಳೆ ತ್ಯಾಜ್ಯ ಸಂಸ್ಕರಣೆ ಹಾಗೂ ಇಂತಹ 256 ಎಕರೆ ಭೂಮಿಯನ್ನು ಉದ್ಯಾನವನಗಳಾಗಿ ಪರಿವರ್ತಿಸಲು ಕ್ರಮ.
  • ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ಸಂಸ್ಥೆಯ (BSWMCL) ಪರಿಣಾಮಕಾರಿ ಕಾರ್ಯಾಚರಣೆಗೆ 100 ಕೋಟಿ ರೂ. ಅನುದಾನ.

“ಅಲ್ಪಸಂಖ್ಯಾತರ ಕಲ್ಯಾಣ”

  • ನೆನೆಗುದಿಗೆ ಬಿದ್ದಿರುವ 126 ಶಾದಿ ಮಹಲ್‌ ಮತ್ತು ಸಮುದಾಯ ಭವನಗಳ ನಿರ್ಮಾಣ ಕಾರ್ಯಗಳನ್ನು 54 ಕೋಟಿ ರೂ. ವೆಚ್ಚದಲ್ಲಿ ಪೂರ್ಣಗೊಳಿಸಲು ಕ್ರಮ.
  • ಮುಖ್ಯಮಂತ್ರಿಗಳ ವಿಶೇಷ ಅಭಿವೃದ್ಧಿ ಯೋಜನೆ ಹಾಗೂ ಅಲಸಂಖ್ಯಾತರ ಕಾಲೋನಿ ಅಭಿವೃದ್ಧಿ ಕಾರ್ಯಕ್ರಮಗಳಡಿ ಅಲ್ಪಸಂಖ್ಯಾತರ ಸಮುದಾಯಗಳಿಗೆ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಒಟ್ಟು 360 ಕೋಟಿ ರೂ. ಅನುದಾನ.
  • ಜೈನರ ಪ್ರಮುಖ ಪುಣ್ಯಕ್ಷೇತ್ರಗಳ ಅಭಿವೃದ್ಧಿಗಾಗಿ 25 ಕೋಟಿ ರೂ. ಅನುದಾನ.
  • ಕರ್ನಾಟಕ ಕ್ರಿಶ್ಚಿಯನ್‌ ಅಭಿವೃದ್ಧಿ ನಿಗಮ ಸ್ಥಾಪನೆಗೆ ಕ್ರಮ. ೧೦೦ ಕೋಟಿ ರೂ. ಅನುದಾನ.
  • ರಾಜ್ಯದಲ್ಲಿರುವ ವಕ್ಛ್‌ ಆಸ್ತಿಗಳ ಸಂರಕ್ಷಣೆ ಮತ್ತು ಅಭಿವೃದ್ಧಿಗಾಗಿ 50 ಕೋಟಿ ರೂ. ನೆರವು.

“ಶೋಷಿತ ಸಮುದಾಯಗಳ ಶಿಕ್ಷಣಕ್ಕೆ ಒತ್ತು”

  • ರಾಜ್ಯದ 62 ಅಲ್ಪಸಂಖ್ಯಾತ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳನ್ನು ೩೦ ಕೋಟಿ ರೂ. ವೆಚ್ಚದಲ್ಲಿ 6 ರಿಂದ 12ನೇ ತರಗತಿಯವರೆಗೆ Integrated ಶಾಲೆಗಳನ್ನಾಗಿ ಉನ್ನತೀಕರಣ; 13,000 ವಿದ್ಯಾರ್ಥಿಗಳಿಗೆ ಅನುಕೂಲ.
  • 50 ಮೊರಾರ್ಜಿ ದೇಸಾಯಿ ವಸತಿ ಶಾಲೆಗಳ ವಿದ್ಯಾರ್ಥಿಗಳ ದಾಖಲಾತಿಯನ್ನು 23 ಕೋಟಿ ರೂ. ವೆಚ್ಚದಲ್ಲಿ ದ್ವಿಗುಣಗೊಳಿಸಲು ಕ್ರಮ. ಹೆಚ್ಚುವರಿಯಾಗಿ 12,500 ವಿದ್ಯಾರ್ಥಿಗಳಿಗೆ ಅವಕಾಶ. ಹೊಸದಾಗಿ 10 ಅಲ್ಪಸಂಖ್ಯಾತ ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರಾರಂಭ.
  • ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಅರಿವು ಶೈಕ್ಷಣಿಕ ಸಾಲ ಯೋಜನೆಗೆ 75 ಕೋಟಿ ರೂ. ಅನುದಾನ.
  • ಕೇಂದ್ರ ಸರ್ಕಾರ ಸ್ಥಗಿತಗೊಳಿಸಿರುವ ಮೆಟ್ರಿಕ್‌ ಪೂರ್ವ ವಿದ್ಯಾರ್ಥಿ ವೇತನ ಯೋಜನೆಯನ್ನು ರಾಜ್ಯ ಸರ್ಕಾರ ಮುಂದುವರೆಸಲು 60 ಕೋಟಿ ರೂ. ಅನುದಾನ.

“ದುರ್ಬಲ ವರ್ಗಗಳ ಕಲ್ಯಾಣ”

  • ಪರಿಶಿಷ್ಟ ಪಂಗಡದ ಅಲೆಮಾರಿ ಹಾಗೂ ಅರೆ ಅಲೆಮಾರಿ ಸಮುದಾಯಗಳ ಸಮಗ್ರ ಅಭಿವೃದ್ಧಿಗೆ 50 ಕೋಟಿ ರೂ. ಅನುದಾನ ಹಾಗೂ ರಾಜ್ಯದ 8 ಜಿಲ್ಲೆಗಳಲ್ಲಿ ವಾಸಿಸುತ್ತಿರುವ 11 ಬುಡಕಟ್ಟು ಸಮುದಾಯಗಳ ಜನರಿಗೆ ನೀಡುವ ಪೌಷ್ಟಿಕ ಆಹಾರ ಯೋಜನೆಯನ್ನು 12 ತಿಂಗಳಿಗೆ ಹೆಚ್ಚಿಸಲು 48 ಕೋಟಿ ರೂ. ಅನುದಾನ.
  • ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಒಂದು ಲಕ್ಷ ಯುವಜನರಿಗೆ ಕೌಶಲ್ಯಾಭಿವೃದ್ಧಿ ತರಬೇತಿ ಮತ್ತು ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪರೀಕ್ಷಾ ಪೂರ್ವ ತರಬೇತಿ ನೀಡಲು ಕ್ರಮ.
  • ಹಿಂದುಳಿದ ವರ್ಗಗಳ ಅಲೆಮಾರಿ ಮತ್ತು ಅರೆ ಅಲೆಮಾರಿ ಜಾತಿಗಳ ಕುಲಶಾಸ್ತ್ರೀಯ ಅಧ್ಯಯನ ಕೈಗೊಳ್ಳಲು 2 ಕೋಟಿ ರೂ.
  • ಹಿಂದುಳಿದ ವರ್ಗಗಳ ಪ್ರವರ್ಗ-1 ಮತ್ತು ಪ್ರವರ್ಗ-2ಎ ನಲ್ಲಿ ಬರುವ ಸಮುದಾಯದ ಗುತ್ತಿಗೆದಾರರಿಗೆ ಒಂದು ಕೋಟಿ ರೂ. ವರೆಗಿನ ಸಿವಿಲ್‌ ಕಾಮಗಾರಿಗಳಲ್ಲಿ ಮೀಸಲಾತಿ ಸೌಲಭ್ಯ.

“ಮಹಿಳಾ ಸಬಲೀಕರಣ”

  • ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆಯ ಮೂಲಕ ಮಹಿಳಾ ಉದ್ಯಮಿಗಳಿಗೆ ಶೇ.4 ರ ಬಡ್ಡಿ ದರದಲ್ಲಿ ನೀಡಲಾಗುವ ಸಾಲದ ಮಿತಿ ಐದು ಕೋಟಿ ರೂ.ಗಳಿಗೆ ಹೆಚ್ಚಳ.
  • ಏಳು ಜಿಲ್ಲೆಗಳಲ್ಲಿ 2 ಕೋಟಿ ರೂ. ವೆಚ್ಚದಲ್ಲಿ 10 ಬುದ್ಧಿಮಾಂದ್ಯ ಮಕ್ಕಳ ವಸತಿ ಶಾಲೆಗಳ ಪ್ರಾರಂಭ.
  • 4,000 ವಿಶೇಷಚೇತನರಿಗೆ 30 ಕೋಟಿ ರೂ. ವೆಚ್ಚದಲ್ಲಿ ಯಂತ್ರಚಾಲಿತ ದ್ವಿಚಕ್ರ ವಾಹನ ಒದಗಿಸಲು ಕ್ರಮ.
  • ಆಸಿಡ್‌ ದಾಳಿ ಸಂತ್ರಸ್ತ ಮಹಿಳೆಯರಿಗೆ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಮೂಲಕ ಐದು ಲಕ್ಷ ರೂ.ಗಳವರೆಗೆ ಬಡ್ಡಿ ರಹಿತ ಸಾಲ ಸೌಲಭ್ಯ ಮತ್ತು ರಾಜೀವ್ ಗಾಂಧಿ ವಸತಿ ನಿಗಮದ ಮೂಲಕ ವಸತಿ ಸೌಲಭ್ಯ.

“ಆರೋಗ್ಯವೇ ಭಾಗ್ಯ”

  • ರಾಮನಗರ ಜಿಲ್ಲೆಯ ಕನಕಪುರ ತಾಲ್ಲೂಕಿನಲ್ಲಿ ಒಂದು ಹೊಸ ವೈದ್ಯಕೀಯ ಕಾಲೇಜು ಸ್ಥಾಪನೆ.
  • ಕಲಬುರಗಿಯ ಗುಲ್ಬರ್ಗಾ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ (GIMS) 70 ಕೋಟಿ ರೂ. ವೆಚ್ಚದಲ್ಲಿ 200 ಹಾಸಿಗೆಯ ಹೊಸ ತಾಯಿ ಮತ್ತು ಮಕ್ಕಳ ಆಸ್ಪತ್ರೆ ನಿರ್ಮಾಣ.
  • ಮೈಸೂರು, ಕಲಬುರಗಿ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳನ್ನು ಕಾರ್ಯಾರಂಭಿಸಲು ಮತ್ತು ಸುಟ್ಟ ಗಾಯಗಳ ಘಟಕ ಸ್ಥಾಪನೆಗೆ 155 ಕೋಟಿ ರೂ. ನೆರವು.
  • NIMHANS ಸಂಸ್ಥೆಯ ಆವರಣದಲ್ಲಿ 146 ಕೋಟಿ ರೂ.ಗಳ ವೆಚ್ಚದಲ್ಲಿ ಅಂಗಾಂಗ ಜೋಡಣೆಗೆ ಮೀಸಲಾದ ದೇಶದ ಪ್ರಥಮ ಸಾರ್ವಜನಿಕ ಆಸ್ಪತ್ರೆ ಸ್ಥಾಪನೆ

“ಆರೋಗ್ಯವೇ ಭಾಗ್ಯ”

  • ಕ್ಷಯ ರೋಗ ಪತ್ತೆಗೆ ಕೈಚಾಲಿತ-ಕ್ಷ-ಕಿರಣ (Hand Held X-Ray) ಉಪಕರಣ ಒದಗಿಸಲು 3 ಕೋಟಿ ರೂ. ಅನುದಾನ.
  • ಮಧುಮೇಹ ಮತ್ತು ರಕ್ತದೊತ್ತಡ ತಪಾಸಣೆ, ಮನೆಬಾಗಿಲಿಗೆ ಔಷಧ ವಿತರಣೆ-ಪ್ರಾಯೋಗಿಕವಾಗಿ 8 ಜಿಲ್ಲೆಗಳಲ್ಲಿ ಜಾರಿ.
  • ಆಶಾಕಿರಣ ಕಾರ್ಯಕ್ರಮದಡಿ ರಾಜ್ಯದ 4 ಜಿಲ್ಲೆಗಳಲ್ಲಿ ನೇತ್ರ ಚಿಕಿತ್ಸೆ-21 ಕೋಟಿ ರೂ. ಅನುದಾನ.
  • ರಾಜ್ಯದ ಎಲ್ಲಾ ಜಿಲ್ಲಾ ಆಸ್ಪತ್ರೆಗಳಲ್ಲಿ ಸಿ.ಟಿ.ಸ್ಕ್ಯಾನಿಂಗ್ ಮತ್ತು
    ಎಂ.ಆರ್.ಐ. ಸ್ಕ್ಯಾನಿಂಗ್‌ ಸೌಲಭ್ಯ ವಿಸ್ತರಣೆಗೆ ಕ್ರಮ.
  • ಕರ್ನಾಟಕ ರತ್ನ ಡಾ|| ಪುನೀತ್‌ ರಾಜ್‌ಕುಮಾರ್‌ ರವರ ಸ್ಮರಣಾರ್ಥ ಹಠಾತ್ ಹೃದಯ ಸಂಬಂಧಿ ಸಾವುಗಳನ್ನು ತಡೆಗಟ್ಟಲು Automated External Defibrillators ಗಳನ್ನು ಜಿಲ್ಲಾ ಆಸ್ಪತ್ರೆ ಮತ್ತು ತಾಲ್ಲೂಕು ಆಸ್ಪತ್ರೆಗಳಲ್ಲಿ ಅಳವಡಿಸಲು ಕ್ರಮ.

“ಶಕ್ತಿ ಯೋಜನೆ”

  • ಸರ್ಕಾರಿ ಬಸ್‌ ಗಳಲ್ಲಿ ರಾಜ್ಯದ ಮಹಿಳೆಯರು ಮತ್ತು ಲಿಂಗತ್ವ ಅಲ್ಪಸಂಖ್ಯಾತರಿಗೆ ಉಚಿತ ಪ್ರಯಾಣ
  • ವಾರ್ಷಿಕ ಅಂದಾಜು 4,000 ಕೋಟಿ ರೂ. ವೆಚ್ಚದ ನಿರೀಕ್ಷೆ
  • ಮಹಿಳೆಯರಿಗೆ ಶಿಕ್ಷಣ, ಉದ್ಯೋಗ, ಪ್ರವಾಸ ಮುಂತಾದ ಚ ಟುವಟಿಕೆ ಕೈಗೊಳ್ಳಲು ಅವಕಾಶ
  • ಮಹಿಳೆಯರಿಗೆ ಪ್ರಯಾಣ ವೆಚ್ಚದ ಉಳಿತಾಯ ಹಾಗೂ ಸುರಕ್ಷಿತ ಪ್ರಯಾಣದ ವಾತಾವರಣ
  • ಪ್ರತಿ ದಿನ ಸುಮಾರು 50 – 60 ಲಕ್ಷ ಮಹಿಳೆಯರು ಈ ಯೋಜನೆಯ ಲಾಭ ಪಡೆಯುತ್ತಿದ್ದಾರೆ

“ಅನ್ನ ಭಾಗ್ಯ”

  • ಹಸಿವು ಮುಕ್ತ ಕರ್ನಾಟಕಕ್ಕೆ ಸರ್ಕಾರದ ಪಣ
  • ಎಲ್ಲಾ ಅರ್ಹ ಫಲಾನುಭವಿಗಳಿಗೆ 5 ಕೆ.ಜಿ ಹೆಚ್ಚುವರಿಯಾಗಿ ಅಕ್ಕಿ ವಿತರಣೆ
  • ಆಹಾರಧಾನ್ಯ ಲಭ್ಯವಾಗುವ ವರೆಗೆ ಪ್ರತಿ ಫಲಾನುಭವಿಗೆ 170 ರೂ. ನಂತೆ ಡಿಬಿಟಿ ಮೂಲಕ ನಗದು ವರ್ಗಾವಣೆ
  • ಅಂದಾಜು 4.42 ಕೋಟಿ ಫಲಾನುಭವಿಗಳಿಗೆ ಅನುಕೂಲ
  • ಈ ಯೋಜನೆಗೆ 10,275 ಕೋಟಿ ರೂ. ಅನುದಾನ

“ಯುವ ನಿಧಿ”

  • 2023ರಲ್ಲಿ ಪದವಿ ಪಡೆದು 6 ತಿಂಗಳ ವರೆಗೂ ಉದ್ಯೋಗ ಲಭಿಸದ ಯುವ ಜನರಿಗೆ 2 ವರ್ಷಗಳ ವರೆಗೆ ಅಥವಾ ಉದ್ಯೋಗ ಸಿಗುವ ವರೆಗೆ ನಿರುದ್ಯೋಗ ಭತ್ಯೆ
  • ಪದವೀಧರರಿಗೆ ಪ್ರತೀ ತಿಂಗಳು 3,000 ರೂಪಾಯಿ
  • ಡಿಪ್ಲೊಮಾ ಪದವೀಧರರಿಗೆ ಪ್ರತೀ ತಿಂಗಳು 1,500 ರೂಪಾಯಿ
  • ನಾಡಿನ ಯುವ ಜನತೆಗೆ ಆರ್ಥಿಕ ನೆರವು ನೀಡಿ ಆತ್ಮವಿಶ್ವಾಸ ತುಂಬಿ ಬದುಕಿನಲ್ಲಿ ನೆಲೆ ಕಂಡುಕೊಳ್ಳಲು ಸಹಾಯ
  • ಸುಮಾರು 3.7 ಲಕ್ಷ ಯುವ ಜನರಿಗೆ ಈ ಯೋಜನೆಯ ಲಾಭ

“ಗೃಹ ಜ್ಯೋತಿ”

  • ಪ್ರತಿ ಮನೆಗೆ ಪ್ರತಿ ತಿಂಗಳಿಗೆ ಅವರ ಸರಾಸರಿ ಬಳಕೆಯ ಜೊತೆಗೆ ಶೇ. 10 ರಷ್ಟು ಹೆಚ್ಚುವರಿ ಯುನಿಟ್‌ ವಿದ್ಯುತ್‌ ಉಚಿತ. ಗರಿಷ್ಠ 200 ಯುನಿಟ್‌ ವರೆಗೆ
  • ವಾರ್ಷಿಕ ಅಂದಾಜು 13,910 ಕೋಟಿ ರೂ. ವೆಚ್ಚದಲ್ಲಿ ಜಾರಿ
  • 2 ಕೋಟಿಗಿಂತ ಅಧಿಕ ಗೃಹ ಬಳಕೆದಾರರಿಗೆ ಈ ಯೋಜನೆಯಿಂದ ಅನುಕೂಲ
  • ಪ್ರತಿ ಕುಟುಂಬಕ್ಕೆ ಪ್ರತಿ ವ್ಯಕ್ತಿಗೆ ಇಂಧನ ಖಾತರಿ ನೀಡುವ ಯೋಜನೆ

ಸಹಕಾರ ಮತ್ತು ರೇಷ್ಮೆ:

  • 30 ಲಕ್ಷಕ್ಕೂ ಹೆಚ್ಚು ರೈತರಿಗೆ 25,000 ಕೋಟಿ ರೂ. ಸಾಲ ವಿತರಣೆ ಗುರಿ
  • ಎಪಿಎಂಸಿ ಕಾಯ್ದೆ ತಿದ್ದುಪಡಿ ಹಿಂಪಡೆಯಲು ಕ್ರಮ
  • ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳ ರೈತರಿಗೆ ಸರಕು ಸಾಗಾಣಿಕೆಗೆ ಪಿಕ್‌ಅಪ್‌ ವ್ಯಾನ್‌ ಖರೀದಿಗೆ ಶೇ.4 ರ ಬಡ್ಡಿ ದರದಲ್ಲಿ 7 ಲಕ್ಷ ರೂ. ವರೆಗಿನ ಸಾಲ ಸೌಲಭ್ಯ.
  • ರಾಜ್ಯದ ಆಯ್ದ 50 ತರಕಾರಿ ಮಾರುಕಟ್ಟೆಗಳಲ್ಲಿ ಮಿನಿ ಶೀತಲಗೃಹಗಳ ಸ್ಥಾಪನೆ.

ಶಿಕ್ಷಣಕ್ಕೆ ಆದ್ಯತೆ:

  • ಸಮಾಜದ ಸ್ವಾಸ್ಥ್ಯ ಕಾಪಾಡುವ ಆಶಯದಿಂದ ಪಠ್ಯಪುಸ್ತಕ ಮರುಪರಿಷ್ಕರಣೆಗೆ ಕ್ರಮ.
  • ಸ್ಥಳೀಯವಾದ ಸಾಮಾಜಿಕ, ಸಾಂಸ್ಕೃತಿಕ ಮತ್ತು ಆರ್ಥಿಕ ವಾಸ್ತವಿಕತೆಯನ್ನು ಆಧರಿಸಿ ಹೊಸ ಶಿಕ್ಷಣ ನೀತಿ ರೂಪಿಸಲು ಕ್ರಮ.
  • 1 ರಿಂದ 10ನೇ ತರಗತಿ ವರೆಗಿನ ವಿದ್ಯಾರ್ಥಿಗಳಿಗೆ ವಾರದಲ್ಲಿ ಎರಡು ದಿನ ನೀಡುವ ಪೂರಕ ಪೌಷ್ಟಿಕ ಆಹಾರ; 60 ಲಕ್ಷ ಮಕ್ಕಳಿಗೆ ಅನುಕೂಲ; 280 ಕೋಟಿ ರೂ. ಅನುದಾನ.
  • ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ನಿರ್ವಹಣಾ ವೆಚ್ಚ ಗರಿಷ್ಠ 45,000 ರೂ.ಗಳ ವರೆಗೆ ಹೆಚ್ಚಳ. 153 ಕೋಟಿ ರೂ. ಅನುದಾನ.
  • ಶಾಲೆ, ಕಾಲೇಜುಗಳ ಕೊಠಡಿಗಳ ನಿರ್ಮಾಣ, ದುರಸ್ತಿಗೆ 650 ಕೋಟಿ ರೂ. ಹಾಗೂ ಶೌಚಾಲಯ ಘಟಕ ನಿರ್ಮಾಣಕ್ಕೆ 200 ಕೋಟಿ ರೂ. ಅನುದಾನ.

ನೀರಾವರಿಗೆ ಉತ್ತೇಜನ:

  • ಪ್ರಗತಿಯಲ್ಲಿರುವ 940 ಕೋಟಿ ರೂ. ಬಾಕಿ ಮೊತ್ತದ 10 ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸಲು ಆದ್ಯತೆ.
  • 770 ಕೋಟಿ ರೂ. ವೆಚ್ಚದಲ್ಲಿ 899 ಕೆರೆ ತುಂಬಿಸುವ 19 ಯೋಜನೆಗಳನ್ನು ಪೂರ್ಣಗೊಳಿಸಲು ಕ್ರಮ.
  • ಎತ್ತಿನಹೊಳೆ ಯೋಜನೆ ಬಾಕಿ ಕಾಮಗಾರಿ ಪೂರ್ಣಗೊಳಿಸಲು, ಮೇಕೆದಾಟು ಯೋಜನೆಗೆ ಅರಣ್ಯ ಭೂಮಿ ಸ್ವಾಧೀನ, ಭೂಸ್ವಾಧೀನಕ್ಕೆ ಕ್ರಮ.

ಅನ್ನದಾತನಿಗೆ ಸಾಲ ಸೌಲಭ್ಯ

  • ಶೂನ್ಯ ಬಡ್ಡಿ ದರದಲ್ಲಿ ನೀಡುವ ಅಲ್ಪಾವಧಿ ಸಾಲದ ಮಿತಿ 5 ಲಕ್ಷ ರೂ. ಗಳಿಗೆ ಹೆಚ್ಚಳ.
  • ಶೇ. 3ರ ಬಡ್ಡಿ ದರದಲ್ಲಿ ಮಧ್ಯಮಾವಧಿ ಮತ್ತು ದೀರ್ಘಾವಧಿ ಸಾಲದ ಮಿತಿ 10 ಲಕ್ಷ ರೂ. ಗಳಿಂದ 15 ಲಕ್ಷ ರೂ. ಗಳಿಗೆ ಹೆಚ್ಚಳ.

ಮೀನುಗಾರಿಕೆಗೆ ಉತ್ತೇಜನ:

  • ಮೀನುಗಾರ ಮಹಿಳೆಯರಿಗೆ ಬ್ಯಾಂಕುಗಳಲ್ಲಿ ಬಡ್ಡಿರಹಿತವಾಗಿ ನೀಡುವ ಸಾಲದ ಮಿತಿ 50,000 ರೂ. ಗಳಿಂದ 3 ಲಕ್ಷ ರೂ. ಗಳಿಗೆ ಹೆಚ್ಚಳ.
  • ಮೀನುಗಾರರ ದೋಣಿಗಳಿಗೆ ರಿಯಾಯಿತಿ ದರದ ಡೀಸೆಲ್‌ ಮಿತಿ
    2 ಲಕ್ಷ ಕಿಲೋ ಲೀಟರ್‌ಗಳವರೆಗೆ ಹೆಚ್ಚಿಸಲು 250 ಕೋಟಿ ರೂ. ನೆರವು.
  • ಮೀನುಗಾರಿಕಾ ದೋಣಿಗಳ ಸೀಮೆ ಎಣ್ಣೆ ಇಂಜಿನ್‌ಗಳನ್ನು ಪೆಟ್ರೋಲ್‌ ಇಂಜಿನ್‌ಗಳಾಗಿ ಬದಲಾಯಿಸಲು ತಲಾ 50,000 ರೂ. ಸಹಾಯಧನ; 5ಕೋಟಿ ರೂ. ನೆರವು.

ಕೃಷಿ ಮತ್ತು ಪೂರಕ ಚಟುವಟಿಕೆಗಳಿಗೆ ಬೆಂಬಲ:

•ಕೃಷಿ ಭಾಗ್ಯ ಯೋಜನೆ 100 ಕೋಟಿ ರೂ. ವೆಚ್ಚದಲ್ಲಿ ಮರುಜಾರಿ.

  • ರೇಷ್ಮೆ ನೂಲು ಬಿಚ್ಚಾಣಿಕೆದಾರರಿಗೆ ಐದು ಲಕ್ಷ ರೂ. ವರೆಗೆ ಶೂನ್ಯ ಬಡ್ಡಿದರದಲ್ಲಿ ಸಾಲ ಸೌಲಭ್ಯ.
  • ಜಾನುವಾರುಗಳ ಆಕಸ್ಮಿಕ ಸಾವಿನ ಸಂಕಷ್ಟ ನಿವಾರಣೆಗೆ ಅನುಗ್ರಹ ಯೋಜನೆ ಮರುಜಾರಿ.

“ಕನ್ನಡ ಚಿತ್ರೋದ್ಯಮಕ್ಕೆ ಉತ್ತೇಜನ”

  • ಮೈಸೂರು ಜಿಲ್ಲೆಯಲ್ಲಿ ಖಾಸಗಿ ಸಹಭಾಗಿತ್ವದಲ್ಲಿ ಚಿತ್ರನಗರಿ ನಿರ್ಮಾಣ.
  • ಕನ್ನಡದ ಗುಣಾತ್ಮಕ ಚಿತ್ರಗಳಿಗೆ ಸಹಾಯಧನ ನೀಡುವ ಯೋಜನೆಗೆ ಮರು ಚಾಲನೆ.
  • ಬೆಂಗಳೂರಿನಲ್ಲಿರುವ ಡಾ. ರಾಜ್‌ಕುಮಾರ್ ಸ್ಮಾರಕದ ಬಳಿ ಕನ್ನಡ ಚಿತ್ರರಂಗ ಬೆಳೆದು ಬಂದ ಇತಿಹಾಸವನ್ನು ದಾಖಲಿಸುವ ವಸ್ತು ಸಂಗ್ರಹಾಲಯ ನಿರ್ಮಾಣ.

“ಧಾರ್ಮಿಕ ಕೇಂದ್ರಗಳ ಸಂರಕ್ಷಣೆ”

  • ಮೈಸೂರಿನ ಶ್ರೀ ಚಾಮುಂಡೇಶ್ವರಿ ದೇವಾಲಯ ಹಾಗೂ ಚಾಮುಂಡಿ ಬೆಟ್ಟದ ಸಮಗ್ರ ಅಭಿವೃದ್ಧಿಗಾಗಿ ಶ್ರೀ ಚಾಮುಂಡೇಶ್ವರಿ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ಕ್ರಮ.
  • ನಮ್ಮ ರಾಜ್ಯದಲ್ಲಿಯೂ ದೇವಾಲಯಗಳ ನಿರ್ಮಾಣಕ್ಕಾಗಿ ನುರಿತ ಶಿಲ್ಪಿಗಳನ್ನು ತಯಾರಿಸಲು ಕೋಲಾರ ಜಿಲ್ಲೆಯಲ್ಲಿ ಶಿಲ್ಪಕಲಾ ತರಬೇತಿ ಕೇಂದ್ರ ಪ್ರಾರಂಭ.
  • “ಸಿ” ವರ್ಗದ ಒಟ್ಟು 121 ಮುಜರಾಯಿ ದೇವಸ್ಥಾನಗಳಿಗೆ ಸಮಾನವಾಗಿ 15,000 ರೂ.ಗಳ ಸಹಾಯಾನುದಾನವನ್ನು ನೀಡಲು ಕ್ರಮ.
  • ನಾನ್ ಇನಾಂ ಜಮೀನುಗಳು ಸರ್ಕಾರದಲ್ಲಿ ವಿಹಿತವಾಗಿರುವುದಕ್ಕೆ ಪರಿಹಾರಾರ್ಥವಾಗಿ ಒಟ್ಟು 3,721 ಸಂಸ್ಥೆಗಳಿಗೆ ನೀಡುವ ವರ್ಷಾಸನ ಮೊತ್ತವನ್ನು 48,000 ರೂ.ಗಳಿಂದ 60,000 ರೂ.ಗಳಿಗೆ ಹೆಚ್ಚಳ. 22 ಕೋಟಿ ರೂ. ಅನುದಾನ.

“ಪರಿಸರ ಸಂರಕ್ಷಣೆ”

  • ಮಾನವ – ಕಾಡಾನೆ ಸಂಘರ್ಷವನ್ನು ನಿಯಂತ್ರಿಸಲು ರಾಮನಗರ ಮತ್ತು ಬನ್ನೇರುಘಟ್ಟ ಪ್ರದೇಶಗಳಲ್ಲಿ ಎರಡು ಹೊಸ ಆನೆ ಕಾರ್ಯಪಡೆ ರಚನೆ.
  • ಬೀದರ್‌ನಲ್ಲಿ ಹೆಚ್ಚಾಗಿ ಕಂಡುಬರುವ ಕೃಷ್ಣಮೃಗಗಳ ಸಂರಕ್ಷಣೆಗೆ ಕೃಷ್ಣಮೃಗ ಸಂರಕ್ಷಣಾ ಮೀಸಲು ಪ್ರದೇಶವನ್ನಾಗಿ ಘೋಷಣೆ; ಈ ಪ್ರದೇಶದ ರಕ್ಷಣೆ ಮತ್ತು ನಿರ್ವಹಣೆಗೆ 2 ಕೋಟಿ ರೂ.
  • ಬಯಲು ಸೀಮೆಯ 17 ಜಿಲ್ಲೆಗಳಲ್ಲಿ ಮುಂದಿನ 5 ವರ್ಷಗಳಲ್ಲಿ 500 ಕೋಟಿ ರೂ. ವೆಚ್ಚದಲ್ಲಿ ಹಸಿರೀಕರಣ ಕಾರ್ಯಕ್ರಮ.
  • Green House Gases (GHG) ಹೊರಸೂಸುವಿಕೆಯನ್ನು ನಿಯಂತ್ರಿಸಲು ಹಾಗೂ ಮೇಲ್ವಿಚಾರಣೆ ಮಾಡಲು ಹೊಸ ನೀತಿ ಜಾರಿ.

“ಕನ್ನಡ ಮತ್ತು ಸಂಸ್ಕೃತಿ”

  • ಖ್ಯಾತ ಸಾಹಿತಿ ಕೆ.ಪಿ. ಪೂರ್ಣಚಂದ್ರ ತೇಜಸ್ವಿ ಅವರ ಹೆಸರಿನಲ್ಲಿ ಸ್ಥಾಪಿಸಿರುವ ಪ್ರತಿಷ್ಠಾನದ ಚಟುವಟಿಕೆಗೆ ನೆರವು ಹಾಗೂ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಡಾ. ಎಂ. ಎಂ. ಕಲಬುರಗಿ ಅವರ ಹೆಸರಿನಲ್ಲಿ ಟ್ರಸ್ಟ್ ಸ್ಥಾಪನೆಗೆ ಕ್ರಮ.
  • ರಾಮನಗರದ ಜಾನಪದ ಲೋಕಕ್ಕೆ 2 ಕೋಟಿ ರೂ. ಅನುದಾನ. ಕೊಪ್ಪಳ ಜಿಲ್ಲೆಯಲ್ಲಿ ಜಾನಪದ ಲೋಕ ಸ್ಥಾಪನೆಗೆ ಕ್ರಮ.
  • ಮೈಸೂರು ರಾಜ್ಯವು ಕರ್ನಾಟಕ ಎಂದು ಮರುನಾಮಕರಣವಾಗಿ 50 ವರ್ಷ ಪೂರ್ಣಗೊಳ್ಳಲಿರುವ ಹಿನ್ನೆಲೆಯಲ್ಲಿ ವಿಶೇಷ ಕಾರ್ಯಕ್ರಮಗಳ ಆಯೋಜನೆ.
  • ಬಂಜಾರ ಸಮುದಾಯ ಹಾಗೂ ಬುಡಕಟ್ಟು ಸಮುದಾಯಗಳ ಸಾಂಸ್ಕೃತಿಕ ಮತ್ತು ಜಾನಪದ ನೃತ್ಯ ಕಲೆಗಳ ಪ್ರೋತ್ಸಾಹಕ್ಕೆ ವಿಶೇಷ ಕಾರ್ಯಕ್ರಮ.
'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!