';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>
ಮೈಸೂರು: ನಿಂತಿದ್ದ ಟ್ರ್ಯಾಕ್ಟರ್ಗೆ ಕಾರು ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಕಂಪ್ಲಾಪುರ ಬಳಿ ನಡೆದಿದೆ.
ಪಿರಿಯಾಪಟ್ಟಣದಿಂದ ಹುಣಸೂರಿಗೆ ತೆರಳುವಾಗ ಕಂಪ್ಲಾಪುರ ಬಳಿ ಇಂದು( ಜುಲೈ 18) ಮುಂಜಾನೆ 4.30ಕ್ಕೆ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.
ಭೀಕರ ಅಪಘಾತದಲ್ಲಿ ಮೃತಪಟ್ಟವರನ್ನು ಮುದಾಸೀರ್, ಮುಜಾಯಿದ್, ಅಹ್ಮದ್ ಪಾಷಾ ಎಂದು ಗುರುತಿಸಲಾಗಿದೆ.
ಇನ್ನುಳಿದ ಮೂವರಿಗೆ ಗಾಯಗಳಾಗಿದ್ದು, ಸ್ಥಳದಲ್ಲಿದ್ದ ಪುತ್ತೂರು ಮೂಲದ ಯುವಕರು ರಕ್ಷಣಾ ಕಾರ್ಯಾಚರಣೆಯಲ್ಲಿ ಪಾಲ್ಗೊಂಡು ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸುವಲ್ಲಿ ನೆರವಾಗಿದ್ದಾರೆ ಎಂದು ತಿಳಿದು ಬಂದಿದೆ.
ಸ್ಥಳಕ್ಕೆ ಪಿರಿಯಾಪಟ್ಟಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ವರದಿಯಾಗಿದೆ.