';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>
ಬೆಂಗಳೂರು: ಅಧಿವೇಶನದಲ್ಲಿ ನಡೆಯುತ್ತಿರುವ ಕಲಾಪದ ಸಂದರ್ಭ ವಿಧಾನಸಭೆ ಉಪಾಧ್ಯಕ್ಷರ ಮೇಲೆ ಕಾಗದ ಚೂರುಗಳನ್ನು ಎಸೆದ ಘಟನೆಗೆ ಸಂಬಂಧಿಸಿದಂತೆ ಹತ್ತು ಮಂದಿ ಬಿಜೆಪಿ ಶಾಸಕರನ್ನು ಬುಧವಾರ ಅಮಾನತು ಮಾಡಲಾಗಿದೆ.
ಈಗ ನಡೆಯುತ್ತಿರುವ ಪ್ರಸಕ್ತ ಅಧಿವೇಶನದ ಅವಧಿ ಮುಗಿಯುವ ವರೆಗೂ ಶಾಸಕರನ್ನು ಅಮಾನತು ಮಾಡಲಾಗಿದೆ. ಡಾ. ಅಶ್ವತ್ಥನಾರಾಯಣ, ವೇದವ್ಯಾಸ ಕಾಮತ್, ಅರವಿಂದ ಬೆಲ್ಲದ್, ಧೀರಜ್ ಮುನಿರಾಜು, ಯಶಪಾಲ್ ಸುವರ್ಣ, ಸುನೀಲ್ ಕುಮಾರ್, ಆರ್. ಅಶೋಕ್, ಉಮಾನಾಥ್ ಕೋಟ್ಯಾನ್, ಅರಗ ಜ್ಞಾನೇಂದ್ರ ಹಾಗೂ ಭರತ್ ಶೆಟ್ಟಿ ಅವರ ಹೆಸರನ್ನು ಉಲ್ಲೇಖಿಸಿದ ಸ್ಪೀಕರ್ ಯು.ಟಿ ಖಾದರ್ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.