ಪುತ್ತೂರು: ಎರಡು ಅಪ್ರಾಪ್ತ ಬಾಲಕಿಯರಿಗೆ ಕಾಲೇಜಿಗೆ ತೆರಳುತ್ತಿದ್ದ ಸಂದರ್ಭ ಅಪರಿಚಿತ ವ್ಯಕ್ತಿ ಬಂದು ಅಸಭ್ಯವಾಗಿ ವರ್ತಿಸಿದ್ದು ಲೈಂಗಿಕ ಕಿರುಕುಳ ನೀಡಿದ ದೂರಿನಂತೆ ಆರೋಪಿಯನ್ನು ದಸ್ತಗಿರಿ ಮಾಡಿದ ಘಟನೆ ದ.ಕ ಜಿಲ್ಲೆಯ ಪುತ್ತೂರಿನಲ್ಲಿ ನಡೆದಿದೆ.

ಬಂಧಿತ ಆರೋಪಿಯನ್ನು ಸೀತಾರಾಮ ಯಾನೆ ಪ್ರವೀಣ್ ಎಂದು ಗುರುತಿಸಲಾಗಿದೆ.ಆರೋಪಿಯು ನಿನ್ನೆ ಬೆಳಿಗ್ಗೆ ಅಪ್ರಾಪ್ತ ಪ್ರಾಯದ ಇಬ್ಬರು ಬಾಲಕಿಯರು ತಮ್ಮ ಮನೆ ಕಡೆಯಿಂದ ಕಾಲೇಜು ಕಡೆ ತೆರಳುತ್ತಿದ್ದ ಸಂದರ್ಭ ಅಪರಿಚಿತ ವ್ಯಕ್ತಿ ಬಂದು ಇಬ್ಬರು ಬಾಲಕಿಯರ ಜೊತೆ ಅಸಭ್ಯವಾಗಿ ವರ್ತಿಸಿ ಲೈಂಗಿಕ ಕಿರುಕುಳ ನೀಡಿದ ಬಗ್ಗೆ ಆರೋಪಿಸಲಾಗಿದೆ.
ಈ ಸಂದರ್ಭದಲ್ಲಿ ಬಾಲಕಿಯರು ಆರೋಪಿಯ ಕೈಯಿಂದ ತಪ್ಪಿಸಿಕೊಂಡು ಕಾಲೇಜಿಗೆ ತಲುಪಿ ಘಟನೆಯ ಬಗ್ಗೆ ಉಪನ್ಯಾಸಿಕಿಗೆ ತಿಳಿಸಿದ್ದು ತಕ್ಷಣವೇ ಕಾರ್ಯಪ್ರವೃತ್ತರಾದ ಉಪನ್ಯಾಸಕಿ ಪೊಲೀಸರಿಗೆ ದೂರು ನೀಡಿದ್ದು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಬಳಿಕ ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿ ಸೀತಾರಾಮ ಯಾನೆ ಪ್ರವೀಣ್ ಎಂಬಾತನನ್ನು ಬಂಧಿಸಿದ್ದು ಪ್ರಕರಣದ ಬಗ್ಗೆ ತನಿಖೆ ನಡೆಸುತ್ತಿದ್ದಾರೆ ಎಂದು ವರದಿಯಾಗಿದೆ.