ಪುತ್ತೂರು : ಕರ್ನಾಟಕ ಮುಸ್ಲಿಂ ಜಮಾಅತ್ ದಕ್ಷಿಣ ಕನ್ನಡ ಈಸ್ಟ್ ಜಿಲ್ಲಾ ಸಮಿತಿ ರಚನಾ ಸಭೆಯು ದಿನಾಂಕ 20.07.2023 ರಂದು ರೋಟರಿ ಮನಿಷಾ ಹಾಲ್ ಪುತ್ತೂರಿನಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಕರ್ನಾಟಕ ಮುಸ್ಲಿಂ ಜಮಾಅತ್ ರಾಜ್ಯ ಉಪಾಧ್ಯಕ್ಷರಾದ ಸಯ್ಯದ್ ಇಸ್ಮಾಯಿಲ್ ತಂಙಳ್ ಉಜಿರೆಯವರು ವಹಿಸಿ ದುವಾ ನೆರವೇರಿಸುವ ಮೂಲಕ ಸಭೆಗೆ ಚಾಲನೆ ನಡೆಸಿದರು.



ಕರ್ನಾಟಕ ಮುಸ್ಲಿಂ ಜಮಾಅತ್ ರಾಜ್ಯ ಪ್ರದಾನ ಕಾರ್ಯದರ್ಶಿ ಅಬೂ ಸುಫ್ಯಾನ್ ಎಚ್. ಐ. ಇಬ್ರಾಹಿಂ ಮದನಿ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು. ರಾಜ್ಯ ಜಂಇಯ್ಯತುಲ್ ಉಲಮಾ ಕಾರ್ಯದರ್ಶಿ ಎಸ್. ಪಿ. ಹಂಝ ಸಖಾಫಿ ಉಸ್ತಾದರು ನೇತೃತ್ವ ವಹಿಸಿ ಹದಿನಾಲ್ಕು ಪದಾಧಿಕಾರಿಗಳನ್ನೊಳಗೊಂಡ 31 ಸದಸ್ಯರ ನೂತನವಾಗಿ ಅಸ್ತಿತ್ವಕ್ಕೆ ಬಂದ ಈಸ್ಟ್ ಜಿಲ್ಲಾ ಸಮಿತಿಯನ್ನು ರಚಿಸಿದರು. ಅಧ್ಯಕ್ಷರಾಗಿ ಈ ಮೊದಲು ಪುತ್ತೂರು ತಾಲೂಕಿನ ಕರ್ನಾಟಕ ಮುಸ್ಲಿಂ ಜಮಾಅತ್ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದ ಸಂಘಟನಾ ಚತುರ ಅಬ್ದುರಹ್ಮಾನ್ ಹಾಜಿ ಅರಿಯಡ್ಕ ಅವರನ್ನು ಆಯ್ಕೆ ಮಾಡಲಾಯಿತು. ಪ್ರಧಾನ ಕಾರ್ಯದರ್ಶಿಯಾಗಿ ಜಿ. ಮುಹಮ್ಮದ್ ಕಾಮಿಲ್ ಸಖಾಫಿ, ಕೋಶಾಧಿಕಾರಿಯಾಗಿ ಬಿ.ಪಿ. ಇಸ್ಮಾಯಿಲ್ ಹಾಜಿ ಬೈತಡ್ಕರವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು.


ಉಪಾಧ್ಯಕ್ಷರಾಗಿ ಮುಹಮ್ಮದ್ ಕುಂಞ ಗೂನಡ್ಕ, ಎ. ಕೆ. ಅಹ್ಮದ್ ಪರಪ್ಪು, ಅಬ್ದುಲ್ ಹಮೀದ್ ಸಖಾಫಿ ಕೊಡಂಗಾಯಿ, ಕೆ.ಬಿ. ಖಾಸಿಂ ಹಾಜಿ ಮಿತ್ತೂರು, ಕಾರ್ಯದರ್ಶಿಯಾಗಿ ಕೆ. ಇ. ಅಬೂಬಕ್ಕರ್ ನೆಲ್ಯಾಡಿ, ಇಸ್ಮಾಯಿಲ್ ಮಾಸ್ಟರ್ ಮಂಗಳಪದವು, ಅಬ್ದುಲ್ ಕರೀಂ ಹಾಜಿ ಚೆನ್ನಾರ್, ಕಾಸಿಂ ಪದ್ಮುಂಜ, ಅಬ್ಬೋನ್ ಮದ್ದಡ್ಕ, ಅಬ್ದುಲ್ ಹಮೀದ್ ಸುಣ್ಣಮೂಲೆ ಹಾಗೂ ಮಾಧ್ಯಮ ಕಾರ್ಯದರ್ಶಿ ಹಾಜಿ ಯೂಸುಫ್ ಸಯೀದ್ ಪುತ್ತೂರುರವನ್ನು ಆರಿಸಲಾಯಿತು. ಉಳಿದಂತೆ ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ಉಮರ್ ಮುಸ್ಲಿಯಾರ್ ಮರ್ಧಾಳ, ಅಶ್ರಫ್ ಸಖಾಫಿ ಸವಣೂರು, ಕೆ. ಎಂ. ಮುಸ್ತಫಾ ಸುಳ್ಯ, ಹನೀಫ್ ಹಾಜಿ ಇಂದ್ರಾಜೆ, ಅಬ್ಬಾಸ್ ಮದನಿ ಬಂಡಾಡಿ, ಅಬ್ಬಾಸ್ ಬಟ್ಲಡ್ಕ, ಇನ್ಸಾಲ್ ಬಪ್ಪಳಿಗೆ, ಅಬ್ದುಲ್ಲಾ ಮುಸ್ಲಿಯಾರ್ ಬನ್ನೂರು, ಯು. ಕೆ. ಹನೀಫ್ ಉಜಿರೆ, ಪಿ. ಯು. ಅಬ್ದುರಹ್ಮಾನ್ ಮುಸ್ಲಿಯಾರ್ ನಾವೂರು, ಇಬ್ರಾಹಿಂ ಮುಸ್ಲಿಯಾರ್ ಕೊಡಂಗಾಯಿ, ಅಬ್ದುಲ್ ಖಾದಿರ್ ಸಖಾಫಿ ಕಡಂಬು, ಉಸ್ಮಾನ್ ಹಾಜಿ ಸರ್ಕಲ, ಉಸ್ಮಾನ್ ಮುಸ್ಲಿಯಾರ್ ಕುಂಬ್ರ, ಮುಹಮ್ಮದ್ ರಫೀ ಕಾಜೂರು, ಎಸ್‌ವೈಎಸ್ ಈಸ್ಟ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸ್ವಾಲಿಹ್ ಮುರ ಹಾಗೂ ಎಸ್ಸೆಸ್ಸೆಫ್ ಈಸ್ಟ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಹಕೀಂ ಕಳಂಜಿಬೈಲ್ ರವರನ್ನು ಆಯ್ಕೆ ಮಾಡಲಾಯಿತು.
ಸಭೆಯಲ್ಲಿ ಸಯ್ಯದ್ ಎಸ್. ಎಂ. ತಂಬಳ್ ಬೆಳ್ತಂಗಡಿ, ಎಸ್‌ವೈಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ. ಬಿ. ಸ್ವಾದಿಖ್ ಮಾಸ್ಟರ್ ಮಲೆಬೆಟ್ಟು, ಕರ್ನಾಟಕ ಮುಸ್ಲಿಂ ಜಮಾಅತ್ ವೆಸ್ಟ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಬ್ದುರಹೀಂ ಸಅದಿ ಉಪಸ್ಥಿತರಿದ್ದರು. ಈಸ್ಟ್ ಜಿಲ್ಲಾ ವ್ಯಾಪ್ತಿಯಿಂದ ಜಿಲ್ಲಾ ಪ್ರತಿನಿಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದರು.
ಕರ್ನಾಟಕ ಮುಸ್ಲಿಂ ಜಮಾಅತ್ ರಾಜ್ಯ ಕಾರ್ಯದರ್ಶಿ ಅಶ್ರಫ್ ಕಿನಾರರವರು ಕಾರ್ಯಕ್ರಮ ನಿರ್ವಹಿಸಿದರು. ನೂತನ ಪ್ರಧಾನ ಕಾರ್ಯದರ್ಶಿ ಜಿ. ಮುಹಮ್ಮದ್ ಕಾಮಿಲ್ ಸಖಾಫಿರವರು ಮೊದಲಿಗೆ ಸ್ವಾಗತಿಸಿ, ಧನ್ಯವಾದಗೈದರು ಎಂದು ತಿಳಿದು ಬಂದಿದೆ.