ಬಂಟ್ವಾಳ: ಬಂಟ್ವಾಳದ ಬಡಗಬೆಳ್ಳೂರು ಪ್ರಕರಣವೊಂದರಲ್ಲಿ ಬಿಜೆಪಿ ಕಾರ್ಯಕರ್ತನೋರ್ವನಿಗೆ ಮಾರಣಾಂತಿಕ ಹಲ್ಲೆ ನಡೆಸಿ ಜೈಲು ಶಿಕ್ಷೆ ಅನುಭವಿಸಿದ ಬಳಿಕ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ ಆರೋಪಿಯೋರ್ವ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದು, ಆತನನ್ನು ಬಂಟ್ವಾಳ ಗ್ರಾಮಾಂತರ ಪೋಲೀಸರು ಬಂಧಿಸಿದ್ದಾರೆ.
ಪುತ್ತೂರು ತಾಲೂಕಿನ ಕುದ್ಮಾರ್ ಬಾರೆಪಾಡಿ ನಿವಾಸಿ ರೋಷನ್ (32) ಬಂಧಿತ ಆರೋಪಿ.ಕಳೆದ ಮೂರು ವರ್ಷಗಳ ಹಿಂದೆ ಈತ ಬಿಜೆಪಿ ಕಾರ್ಯಕರ್ತನ ಮೇಲೆ ಮಾರಣಾಂತಿಕವಾಗಿ ಹಲ್ಲೆಯನ್ನು ನಡೆಸಿದ್ದ ಆ ಬಳಿಕ ಆರೋಪಿಯನ್ನು ಬಂಧಿಸಲಾಗಿತ್ತು.
ನ್ಯಾಯಾಲಯ ಈತನನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಿತ್ತು.ಆದರೆ ಆ ಬಳಿಕ ಆರೋಪಿ ಮೂರು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ.
ನ್ಯಾಯಾಲಯದ ಆದೇಶದಂತೆ ಬಂಟ್ವಾಳ ಗ್ರಾಮಾಂತರ ಎಸ್.ಐ.ಹರೀಶ್ ಅವರ ನೇತ್ರತ್ವದಲ್ಲಿ ಸಿಬ್ಬಂದಿ ಗಳಾದ ಗಣೇಶ್ ಪ್ರಸಾದ್, ಯೋಗೀಶ್, ಹಾಗೂ ವಿಜಯ್ ಅವರು ಈತನ ಮಾಹಿತಿ ಸಂಗ್ರಹಿಸಿ ಮಂಗಳೂರಿನಲ್ಲಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.ನ್ಯಾಯಾಲಯ ಈತನಿಗೆ ನ್ಯಾಯಾಂಗ ಬಂಧನ ವಿಧಿಸಿದೆ.