dtvkannada

'; } else { echo "Sorry! You are Blocked from seeing the Ads"; } ?>

ಬೆಳ್ಳಾರೆ: ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ವಿಚಾರಣೆ ವೇಳೆ ಆರೋಪಿಗಳಿಗೆ ಕಿರುಕುಳ ನೀಡಿ ತಪ್ಪೊಪ್ಪಿಗೆ ಹೇಳಿಕೆ ದಾಖಲಿಸಿದ್ದಾರೆ ಎಂಬ ಆರೋಪದಿಂದ ಅದಕ್ಕೆ ಸಂಬಂಧಪಟ್ಟ ಎಫ್‍ಎಸ್‍ಎಲ್ ಮತ್ತು ಎನ್‍ಐಎ ಕಚೇರಿಯಲ್ಲಿನ ಸಿಸಿಟಿವಿ ದೃಶ್ಯಾವಳಿ ಪರಿಶೀಲಿಸಲು ತನ್ನ ಕೇಂದ್ರ ಯೋಜನಾ ಸಂಚಾಲಕರು ಮತ್ತು ತಾಂತ್ರಿಕ ತಂಡಕ್ಕೆ ಹೈಕೋರ್ಟ್‌ ನಿರ್ದೇಶಿಸಿದೆ.

ಪ್ರಕರಣದ ಪ್ರಮುಖ ಆರೋಪಿ ಮೊಹಮ್ಮದ್ ಜಾಬಿರ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್‌ನ ವಿಭಾಗೀಯ ಪೀಠ, ಎಫ್‍ಎಸ್‍ಎಲ್ ಮತ್ತು ಎನ್‍ಎಐ ಕಚೇರಿಗಳಲ್ಲಿ 2022ರ ನವೆಂಬರ್ ತಿಂಗಳ ಸಿಸಿಟಿವಿ ದೃಶ್ಯಾವಳಿ ಲಭ್ಯವಿದ್ದರೆ ಅದನ್ನು ವಿಶೇಷ ಕೋರ್ಟ್‍ಗೆ ಸಲ್ಲಿಸಬೇಕು ಎಂದು ವಿಧಿ ವಿಜ್ಞಾನ ಪ್ರಯೋಗಾಲಯ ಮತ್ತು ಎನ್‍ಐಎ ಕಂಪ್ಯೂಟರ್ ಕೋಶ ಮತ್ತು ಸಿಬ್ಬಂದಿಗೆ ಆದೇಶಿಸಿತ್ತು ಎಂದು ವರದಿಯಾಗಿದೆ.

ಎನ್‌ಐಎ ಅಧಿಕಾರಿಗಳ ಕರೆ ದಾಖಲೆ, ಎನ್‌ಐಎ ಮತ್ತು ವಿಧಿ ವಿಜ್ಞಾನ ಪ್ರಯೋಗಾಲಯ ಸಂಸ್ಥೆಯ ಅಧಿಕಾರಿಗಳ ಸಿಸಿಟಿವಿ ತುಣುಕುಗಳನ್ನು ಸಲ್ಲಿಸಲು ಆದೇಶಿಸುವಂತೆ ಕೋರಿ ಪ್ರಕರಣದ ಪ್ರಧಾನ ಆರೋಪಿ ಮೊಹಮ್ಮದ್‌ ಶಿಯಾಬ್‌ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಶ್ರೀನಿವಾಸ್‌ ಹರೀಶ್‌ ಕುಮಾರ್‌ ಮತ್ತು ಜಿ ಬಸವರಾಜ ಅವರ ನೇತೃತ್ವದ ವಿಭಾಗೀಯ ಪೀಠವು ಈ ನಿರ್ದೇಶನ ನೀಡಿದೆ.

'; } else { echo "Sorry! You are Blocked from seeing the Ads"; } ?>

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ಹಲವು ಮಂದಿಯನ್ನು ಎನ್‍ಐಎ ಅಧಿಕಾರಿಗಳು ಬಂಧಿಸಿದ್ದರು. ಅವರಲ್ಲಿ 18ನೆ ಆರೋಪಿ ಮೊಹಮ್ಮದ್ ಜಾಬೀರ್‌ಗೆ ಎನ್‍ಐಎ ಅಧಿಕಾರಿಗಳು ತಪ್ಪು ಒಪ್ಪಿಕೊಳ್ಳುವಂತೆ ಬಲವಂತ ಮಾಡಿ ಕಿರುಕುಳ ನೀಡಿದ್ದರೆಂದು ಕೋರ್ಟಿನಲ್ಲಿ ಹೇಳಿಕೆ ಕೊಟ್ಟಿದ್ದರು.

ಹೀಗಾಗಿ, ಅಂದಿನ ಸಿಸಿಟಿವಿ ಕ್ಯಾಮೆರಾ ದೃಶ್ಯಾವಳಿ ಮತ್ತು ಎನ್‍ಎಐ ಅಧಿಕಾರಿಗಳ ಕರೆ ದಾಖಲೆಗಳ ವಿವರಗಳನ್ನು ಒದಗಿಸುವಂತೆ ಸಮನ್ಸ್ ಜಾರಿಗೊಳಿಸಬೇಕು ಎಂದು ಕೋರಲಾಗಿತ್ತು. ಆದರೆ, ವಿಶೇಷ ನ್ಯಾಯಾಲಯ ಈ ಮನವಿಯನ್ನು ತಿರಸ್ಕರಿಸಿದೆ.

'; } else { echo "Sorry! You are Blocked from seeing the Ads"; } ?>
'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!