ಸೌಜನ್ಯ ಕೊಲೆ ಪ್ರಕರಣ: ನ್ಯಾಯ ಸಿಗುವವರೆಗೂ ಧರ್ಮಸ್ಥಳ ಮಂಜುನಾಥನ ದರ್ಶನ ಮಾಡಕೂಡದು ಅನ್ನಿಸುತ್ತಿದೆ- ನಟ ದುನಿಯಾ ವಿಜಯ್
ಬೆಂಗಳೂರು: ಕಳೆದ ಹನ್ನೊಂದು ವರ್ಷಗಳ ಹಿಂದೆ ನಡೆದ ಧರ್ಮಸ್ಥಳದ ಮಣ್ಣಸಂಕ ಬಳಿ ಸೌಜನ್ಯ ಕೊಲೆ ಪ್ರಕರಣಕ್ಕೆ ನ್ಯಾಯ ಸಿಗುವವರೆಗೂ ಧರ್ಮಸ್ಥಳ ಮಂಜುನಾಥನ ದರ್ಶನ ಮಾಡಕೂಡದು ಅನಿಸುತ್ತಿದೆ ಎಂದು ನಟ ದುನಿಯಾ ವಿಜಯ್ ಅಭಿಪ್ರಾಯ ತಮ್ಮ ಖಾತೆ ಮೂಲಕ ದುಃಖ ವ್ಯಕ್ತಪಡಿಸಿದ್ದಾರೆ.
ದುನಿಯಾ ವಿಜಯ್ ಈ ಬಗ್ಗೆ ತಮ್ಮ ಫೇಸ್ ಬುಕ್ ನಲ್ಲಿ ಬರೆದುಕೊಂಡಿರುವ ಅವರು, ಪ್ರತಿ ವರ್ಷ ಧರ್ಮಸ್ಥಳದ ದರ್ಶನ ಪಡೆಯುವುದು ವಾಡಿಕೆಯಾಗಿತ್ತು, ಆದರೆ ಸೌಜನ್ಯಳ ಪ್ರಕರಣದ ಇಂದಿನ ಬೆಳವಣಿಗೆ ನೋಡಿ ಸೌಜನ್ಯ ಮತ್ತು ಕುಟುಂಬಸ್ಥರಿಗೆ ನ್ಯಾಯ ಸಿಗುವವರೆಗೂ ಮಂಜುನಾಥನ ದರ್ಶನ ಮಾಡಕೂಡದು ಅನಿಸುತ್ತಿದೆ.ಸತ್ಯ ಎಂಬುದು ಸೂರ್ಯನ ಬೆಳಕಿದಂತೆ ಯಾರು ಹೆಚ್ಚು ಸಮಯ ಮರೆಮಾಚಲಾಗದು – ಬುದ್ಧ ಎಂದು ಹೇಳಿದ್ದಾರೆ ಎನ್ನುವ ಬರಹದಡಿ ಇಟ್ಟು ಶೇರ್ ಮಾಡಿದ್ದು ಇದೀಗ ವೈರಲ್ ಆಗುತ್ತಿದೆ.