ಮಂಗಳೂರು: ಈಗೀಗ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅನೈತಿಕ ಪೊಲೀಸ್ ಗಿರಿ ಹೆಚ್ಚಾಗುತ್ತಿದ್ದು ಇದನ್ನು ಹದ್ದು ಬಸ್ತಿನಲ್ಲಿಡಲು ಈಗಾಗಲೇ ಸರ್ಕಾರ ಹೊಸ ಕಾನೂನು ರಚನೆ ಮಾಡಿದ್ದು ಅದನ್ನು ಕ್ಯಾರೆ ಅನ್ನದ ಒಂದಷ್ಟು ಮಂದಿ ಮತ್ತೆ ಅನೈತಿಕ ಪೊಲೀಸ್ ಗಿರಿ ನಡೆಸುತ್ತಿದ್ದು ಈ ವಿಚಾರದಲ್ಲಿ ಕಠಿಣ ಕ್ರಮ ಕೈಗೊಳ್ಳಬೇಕು ಯಾವುದೇ ಗುಂಪು ಯಾವುದೇ ಸಿದ್ದಾಂತದವರು ಕಾನೂನು ಕೈಗೆತ್ತಿಕೊಂಡು ಅನೈತಿಕ ಪೊಲೀಸ್ ಗಿರಿ ನಡೆಸಿದ್ದು ಕಂಡು ಬಂದಲ್ಲಿ ಅಂತಹವರ ವಿರುದ್ಧ ಮುಲಾಜಿಲ್ಲದೆ ಕಾನೂನು ಕ್ರಮ ಕೈಗೊಳ್ಳಬೇಕೆಂದು ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಪೊಲೀಸರಿಗೆ ಸ್ಪಷ್ಟ ಸೂಚನೆ ನೀಡಿದ್ದಾರೆ.

ಅವರು ಮಂಗಳವಾರ ದಕ್ಷಿಣ ಕನ್ನಡ ಜಿಲ್ಲೆಯ ಪ್ರಗತಿ ಪರೀಶೀಲನೆ ನಡೆಸಿ ಮಾತನಾಡಿದರು ಮಾದಕ ವಸ್ತು ಹಾವಳಿ ಮಂಗಳೂರಿನಲ್ಲಿ ವಿಪರೀತ ಹೆಚ್ಚಾಗುತ್ತಿದೆ. ಇದರಲ್ಲಿ ಭಾಗಿಯಾದವರನ್ನು ಗೂಂಡಾಕಾಯ್ದೆ ಅಡಿಯಲ್ಲಿ ಅವರನ್ನು ಬಂಧಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಲು ಸೂಚನೆ ನೀಡಿದರು.
ಮಳೆಯಿಂದ ಪೂರ್ತಿಹಾನಿಯಾದ ಮನೆಗಳಿಗೆ 5 ಲಕ್ಷ ಪರಿಹಾರಕ್ಕೆ ಇಂದೇ ಆದೇಶ ಹೊರಡಿಸಿದ್ದು, ಮೊದಲಿದ್ದ ರೀತಿಯಲ್ಲೇ ಎ, ಬಿ, ಸಿ ಕೆಟಗರಿಯಲ್ಲಿ ವಿಂಗಡಿಸಿ ಪರಿಹಾರ ನೀಡಲು ಸೂಚನೆ ನೀಡಿದರು. ಕಡಲ ಕೊರೆತಕ್ಕೆ ಶಾಶ್ವತ ಪರಿಹಾರಕ್ಕೆ ಕ್ರಮ ವಹಿಸಲು ತೀರ್ಮಾನಿಸಿದ್ದೇವೆ. ಕಡಲ ಕೊರೆತದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದೇನೆ.ಸಂಬಂಧಪಟ್ಟ ಎಲ್ಲಾ ಇಲಾಖೆಗಳ ಅಧಿಕಾರಿಗಳನ್ನು ಸೇರಿಸಿ ಸಮಗ್ರ ಚರ್ಚೆ ಮಾಡಿ ಶಾಶ್ವತ ಪರಿಹಾರಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಈ ಸಂದರ್ಭದಲ್ಲಿ ತಿಳಿಸಿದರು.