ಶಿವಮೊಗ್ಗ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ಸೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಪ್ರಯಾಣಿಕರಿಗೆ ವಿದ್ಯುತ್ ಶಾಕ್ ಹರಿದ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಗೆಣಸಿನಕುಣಿ ಗ್ರಾಮದ ಬಳಿ ನಡೆದಿದೆ.

ಈ ಒಂದು ಘಟನೆಯಲ್ಲಿ ಬಸ್ಸಿನಲ್ಲಿದ್ದ 45 ಕ್ಕೂ ಪ್ರಯಾಣಿಕರಿಗೆ ವಿದ್ಯುತ್ ಶಾಕ್ ತಗುಲಿದ್ದು, ಶಾಕ್‌ನಿಂದ 35 ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯಗಳಾಗಿವೆ. ಕೂಡಲೇ ಅವರನ್ನ ಸಾಗರ ತಾಲೂಕು ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಇಬ್ಬರ ಸ್ಥಿತಿ ಗಂಭೀರವಾದ ಹಿನ್ನಲೆ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.
ಬಸ್ಸಿನಲ್ಲಿದ್ದ 45 ಪ್ರಯಾಣಿಕರಲ್ಲಿ 35ಮಂದಿ ಕಾಲೇಜು ವಿದ್ಯಾರ್ಥಿಗಳು: ಇನ್ನು ಈ ಖಾಸಗಿ ಬಸ್ ಸಾಗರ ತಾಲೂಕಿನ ಹೊಳೆಬಾಗಿಲಿನಿಂದ ಸಾಗರಕ್ಕೆ ಹೊರಟಿತ್ತು. ಬಸ್ಸಿನಲ್ಲಿ 45 ಕ್ಕೂ ಹೆಚ್ಚು ಪ್ರಯಾಣಿಕರಿದ್ದು, ಅದರಲ್ಲಿ 35 ಮಂದಿ ಕಾಲೇಜು ಹೋಗುವ ವಿದ್ಯಾರ್ಥಿಗಳಾಗಿದ್ದಾರೆ. ಈ ಕುರಿತು ಸಾಗರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ ಎಂದು ವರದಿಯಾಗಿದೆ.