dtvkannada

'; } else { echo "Sorry! You are Blocked from seeing the Ads"; } ?>

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯನ್ನೇ ಬೆಚ್ಚಿ ಬೀಳಿಸಿ ಕೋಮು ಗಲಭೆಗೆ ಸಾಥ್ ಕೊಟ್ಟಿದ್ದ ಕಳಂಜದ ಮಸೂದ್ ಕೊಲೆ ಪ್ರಕರಣದ ಓರ್ವ ಆರೋಪಿಯನ್ನು ಹೈಕೋರ್ಟ್ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದ ಬಗ್ಗೆ ವರದಿಯಾಗಿದೆ.

ಕಳೆದ ವರ್ಷ ಜು.೧೯-೨೦೨೨ ರಂದು ಪರಿಚಯಸ್ಥ ಇಬ್ಬರು ಯುವಕರ ನಡುವೆ ಕ್ಷುಲ್ಲಕ ವಿಚಾರದಲ್ಲಿ ಉಂಟಾದ ಜಗಳದ ಬಳಿಕ ರಾಜಿಯಲ್ಲಿ ಇತ್ಯರ್ಥ ಮಾಡಲು ಕರೆಸಿಕೊಂಡಿದ್ದು ನಂತರ ಅಲ್ಲಿ ಸೇರಿದ ಹಿಂದೂ ಯುವಕರ ಗುಂಪು ಮಸೂದ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಕೊಲೆ ಮಾಡಿದ್ದರು.

'; } else { echo "Sorry! You are Blocked from seeing the Ads"; } ?>

ಮಸೂದ್ ಕೊಲೆ ಆರೋಪಿಗಳಲ್ಲಿ ಎಂಟನೇ ಆರೋಪಿಯಾಗಿರುವ ಭಾಸ್ಕರ ಕೆ.ಎಂ ಎಂಬಾತ ಜಾಮೀನು ಕೋರಿ ಹೈಕೋರ್ಟ್ ಅರ್ಜಿ ಸಲ್ಲಿಸಿದ್ದು ಅರ್ಜಿಯನ್ನು ಪರಿಶೀಲಿಸಿದ ಹೈಕೋರ್ಟ್ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ ಎಂದು ತಿಳಿದು ಬಂದಿದೆ.

ಈ ಒಂದು ಕೊಲೆಯಲ್ಲಿ ಎಂಟು ಮಂದಿ ಭಾಗಿಯಾಗಿದ್ದು ಅಭಿಲಾಷ್, ಶಿವಪ್ರಸಾದ್,ಸುನಿಲ್ ಕೆ, ಸುಧೀರ್, ರಂಜಿತ್ ಬಿ, ಸದಾಶಿವ ಪೂಜಾರಿ, ರಂಜಿತ್, ಭಾಸ್ಕರ ಕೆ ಎಂ ಆರೋಪಿಗಳನ್ನು ಬಂಧಿಸಲಾಗಿತ್ತು ಅದರಲ್ಲಿ ಓರ್ವ ಆರೋಪಿಗೆ ಜಾಮೀನು ಮಂಜೂರು ಮಾಡಲಾಗಿದೆ.

'; } else { echo "Sorry! You are Blocked from seeing the Ads"; } ?>
'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!