dtvkannada

'; } else { echo "Sorry! You are Blocked from seeing the Ads"; } ?>

ನವದೆಹಲಿ: ಮೋದಿ ಉಪನಾಮ ಹೇಳಿಕೆಗೆ ಸಂಬಂಧಿಸಿದಂತೆ ರಾಹುಲ್ ಗಾಂಧಿಗೆ ವಿಧಿಸಿದ ಎರಡು ವರ್ಷ ಜೈಲು ಶಿಕ್ಷೆಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿ ಮಧ್ಯಂತರ ಆದೇಶ ಹೊರಡಿಸಿದೆ.

ಮಾನಹಾನಿ ಪ್ರಕರಣದಲ್ಲಿ ಶಿಕ್ಷೆಗೀಡಾಗಿದ್ದ ರಾಹುಲ್ ಗಾಂಧಿ ಅವರಿಗೆ ಸುಪ್ರೀಂ ಕೋರ್ಟ್ ಬಿಗ್ ರಿಲೀಫ್ ನೀಡಿದ್ದು ಇದರಿಂದಾಗಿ ಲೋಕಸಭೆ ಸದಸ್ಯತ್ವದಿಂದಲೇ ಅನರ್ಹಗೊಂಡಿದ್ದ ರಾಹುಲ್ ಗಾಂಧಿ ನಿಟ್ಟುಸಿರು ಬಿಟ್ಟಿದ್ದು ಸಂಸತ್ ಸದಸ್ಯತ್ವ ಸ್ಥಾನವೀಗ ಮತ್ತೆ ಮರಳಿ ಸಿಕ್ಕಿದೆ.

ರಾಹುಲ್ ಗಾಂಧಿ ಲೋಕಸಭೆ ಸದಸ್ವತ್ವದಿಂದ ಅನರ್ಹವಾಗಲು ಕಾರಣವಾಗಿರುವ ಗರಿಷ್ಠ ಎರಡು ವರ್ಷಗಳ ಶಿಕ್ಷೆಯನ್ನು ಸಮರ್ಥಿಸಲು ವಿಚಾರಣಾ ನ್ಯಾಯಾಲಯವು ಕಾರಣವನ್ನು ನೀಡಲಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದ್ದು ವಿಚಾರಣಾ ನ್ಯಾಯಾಲಯದ ಆದೇಶದ ಪರಿಣಾಮಗಳು ವ್ಯಾಪಕವಾಗಿವೆ.

'; } else { echo "Sorry! You are Blocked from seeing the Ads"; } ?>

ರಾಹುಲ್ ಗಾಂಧಿ ಅವರು ಸಾರ್ವಜನಿಕ ಜೀವನದಲ್ಲಿ ಮುಂದುವರಿಯುವ ಹಕ್ಕು ಮಾತ್ರವಲ್ಲದೆ ಅವರನ್ನು ಆಯ್ಕೆ ಮಾಡಿದ ಮತದಾರರ ಮೇಲೂ ಪರಿಣಾಮ ಬೀರಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಸುಪ್ರೀಂ ಕೋರ್ಟ್ ತಡೆ ಒಡ್ಡಿದ ಬಳಿಕ ಎಐಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಂಭ್ರಮಾಚರಣೆಯು ಮುಗಿಲು ಮುಟ್ಟಿದೆ.

'; } else { echo "Sorry! You are Blocked from seeing the Ads"; } ?>

'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!