ಉಡುಪಿ: ಪ್ಯಾರಾ ಮೆಡಿಕಲ್ ಕಾಲೇಜಿನ ವಿಡಿಯೋ ಚಿತ್ರೀಕರಣ ಪ್ರಕರಣದ ತನಿಖೆಗೆ ಆಗ್ರಹಿಸಿ ಪ್ರತಿಭಟನೆ ನಡೆಸಿದ ವಿಶ್ವ ಹಿಂದೂ ಪರಿಷತ್, ಭಜರಂಗದಳ ಕಾರ್ಯಕರ್ತರ ಮೇಲೆ ಪ್ರಕರಣ ದಾಖಲಿಸಿಕೊಂಡ ಪೊಲೀಸರ ಕ್ರಮ ಖಂಡನೀಯ ಎಂದು ಶಾಸಕ ವಿ. ಸುನಿಲ್ ಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈಗಾಗಲೇ ಘಟನೆ ನಡೆದು ವಾರಗಳೇ ಕಳೆದರೂ ಕ್ರಮ ಜರಗಿಸಲು ಸಾದ್ಯವಾಗದ ಕಾಂಗ್ರೆಸ್ ಗೆ ಹಿಂದೂ ಸಂಘಟನೆ ಮುಖಂಡರ ಮೇಲೆ ಇಪ್ಪತ್ತನಾಲ್ಕು ಗಂಟೆಯೊಳಗೆ ಪ್ರಕರಣ ದಾಖಲಿಸುವ ಉತ್ಸಾಹ ಬಂದಿದ್ದು ಆಶ್ಚರ್ಯ.
ಇದು ಕಾಂಗ್ರೆಸ್‌ನ ಹಿಂದೂ ವಿರೋಧಿ ನೀತಿಯ ಪರಮಾವಧಿ ನಡವಳಿಕೆ ಎಂದು ಮಾಜಿ ಸಚಿವ, ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್ ಕಾಂಗ್ರೆಸ್ ಹಾಗೂ ಪೊಲೀಸರ ವಿರುದ್ದ ಕಿಡಿಕಾರಿದ್ದಾರೆ.
ಈ ಸಂದರ್ಭದಲ್ಲಿ ಕಿಡಿಕಾರಿದ ಶಾಸಕರು ಹಿಂದೂ ವಿರೋಧಿ ಕಾಂಗ್ರೆಸ್ ಸರಕಾರಕ್ಕೆ ಹಿಂದೂಗಳ ಮೇಲೆ ಯಾಕಿಷ್ಟು ದ್ವೇಷ ಎಂದು ಪ್ರಶ್ನಿಸಿದ್ದಾರೆ.ಇದಲ್ಲವನ್ನೂ ಸಹಿಸುವ ಶಕ್ತಿ ನಮ್ಮಲ್ಲಿ ಇದೆ ನೀವು ದಮನಿದ್ದಷ್ಟು ನಾವು ಮತ್ತೆ ಸಂಘಟಿತರಾಗಿ ಇದಕ್ಕೆ ತಕ್ಕ ಉತ್ತರ ನೀಡಲಿದ್ದಾರೆ ಎಂದು ಹೇಳಿದರು.