ಮಂಗಳೂರು: ಮಹಿಳೆಯೊಬ್ಬರು ಬಚ್ಚಲು ಕೋಣೆಯಲ್ಲಿ ಸ್ನಾನ ಮಾಡುವುದನ್ನು ಮೊಬೈಲ್ ನಲ್ಲಿ ಚಿತ್ರೀಕರಿಸುತ್ತಿದ್ದ ನೆರೆಮನೆಯ ಹಿಂದೂ ಸಂಘಟನಾ ಕಾರ್ಯಕರ್ತನೊಬ್ಬನನ್ನು ಸ್ಥಳೀಯರು ಹಿಡಿದು ಮುಲ್ಕಿ ಪೊಲೀಸರಿಗೆ ಒಪ್ಪಿಸಿದ ಘಟನೆ ಬುಧವಾರ ವರದಿಯಾಗಿದೆ.

ಆರೋಪಿ ಸುಮಂತ್ ತನ್ನ ನೆರೆ ಮನೆಯ ಬಚ್ಚಲು ಕೋಣೆಯಲ್ಲಿ ಮಹಿಳೆಯೊಬ್ಬರು ಸ್ನಾನ ಮಾಡುವುದನ್ನು ವೀಡಿಯೊ ಮಾಡುತ್ತಿದ್ದ ಎನ್ನಲಾಗಿದೆ.ಈ ವೇಳೆ ಮೊಬೈಲ್ ಕ್ಯಾಮರಾ ಗಮನಿಸಿದ ಮಹಿಳೆ ಕಿರುಚಾಡಿದ್ದು, ಈ ವೇಳೆ ನೆರೆಮನೆಯವರು ಸುಮಂತ್ ನನ್ನು ಹಿಡಿದು ಥಳಿಸಿದ್ದಾರೆ ಎನ್ನಲಾಗಿದೆ.
ಬಳಿಕ ಮುಲ್ಕಿ ಪೊಲೀಸರಿಗೆ ಸ್ಥಳೀಯರು ಮಾಹಿತಿ ನೀಡಿದ್ದು, ಸ್ಥಳಕ್ಕೆ ಬಂದ ಪೊಲೀಸರು ಮಹಿಳೆ ಸ್ನಾನ ಮಾಡುವ ವೀಡಿಯೊ ಮಾಡಿದ್ದ ಮೊಬೈಲ್ ಸಹಿತ ಆತನನ್ನು ವಶಕ್ಕೆ ಪಡೆದು ಠಾಣೆಗೆ ಕರೆದೊಯ್ದಿದ್ದಾರೆ ಎಂದು ತಿಳಿದು ಬಂದಿದೆ.ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಪ್ರಜ್ವಲ್ ಎಂಬವರು ನೀಡಿದ ದೂರಿನನ್ವಯ ಮೂಲ್ಕಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ ಎಂದು ತಿಳಿದು ಬಂದಿದೆ.
ಘಟನೆಯ ಆರೋಪಿಯನ್ನು ಸುಮಂತ್ ಪೂಜಾರಿ (22) ಎಂದು ತಿಳಿದು ಬಂದಿದೆ.ಕೆಮ್ರಾಲ್ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಕ್ಷಿಕೆರೆ ಹೊಸಕಾಡು ಎಂಬಲ್ಲಿ ಬುಧವಾರ ರಾತ್ರಿ 11 ಗಂಟೆಗೆ ಈ ಘಟನೆ ನಡೆದಿದ್ದು, ತಡವಾಗಿ ಶುಕ್ರವಾರದಂದು ಬೆಳಕಿಗೆ ಬಂದಿದೆ.