dtvkannada

'; } else { echo "Sorry! You are Blocked from seeing the Ads"; } ?>

ಉಡುಪಿ: ಎರಡು ಶಾಲಾ ವಾಹನಗಳ ನಡುವೆ ಅಪಘಾತ ನಡೆದಿದ್ದು ಶಾಲಾ ಮಕ್ಕಳನ್ನು ಕೊಂಡೊಯುತ್ತಿದ್ದ ರಿಕ್ಷಾ ಮತ್ತು ಬಸ್ ನಡುವೆ ಮುಖಾ ಮುಖಿ ಡಿಕ್ಕಿಯಾದ ಘಟನೆ ಆ.10ರಂದು ಉಡುಪಿಯ ಕಾಪು ಸಮೀಪ ಇನ್ನಂಜೆಯಲ್ಲಿ ನಡೆದಿದೆ.

ಇಂದು ಬೆಳಗ್ಗೆ 9 ಗಂಟೆಗೆ ಇನ್ನಂಜೆ ಕಲ್ಲುಗುಡ್ಡೆ ಬ್ರಹ್ಮ ಬೈದರ್ಕಳ ಗರಡಿ ಬಳಿಯ ಇಕ್ಕಟ್ಟಾದ ರಸ್ತೆಯಲ್ಲಿ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ.

ರಿಕ್ಷಾದಲ್ಲಿದ್ದ 5 ಮಕ್ಕಳು ಗಾಯಗೊಂಡಿದ್ದು, ಉಡುಪಿಯ ಅಜ್ಜರಕಾಡು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

'; } else { echo "Sorry! You are Blocked from seeing the Ads"; } ?>

ಗಾಯಾಳು ಮಕ್ಕಳನ್ನು ಸ್ಥಳೀಯ ಸಮಾಜ ಸೇವಕ ನಾಗರಾಜ್ ರವರು ಅಂಬುಲೆನ್ಸ್‌ನಲ್ಲಿ ಉಡುಪಿ ಅಜ್ಜರಕಾಡು ಸರಕಾರಿ ಆಸ್ಪತ್ರೆಗೆ ಕೊಂಡೊಯ್ದು ದಾಖಲಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ.ಶಿರ್ವ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ಕೂಡ ದಾಖಲಾಗಿದೆ ಎಂದು ತಿಳಿದು ಬಂದಿದೆ.

'; } else { echo "Sorry! You are Blocked from seeing the Ads"; } ?>

'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!