';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>
ಉಡುಪಿ: ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ ನಡೆದ ವಿದ್ಯಾರ್ಥಿನಿಯರ ವೀಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪ್ರಕರಣವನ್ನು ಸಿಐಡಿಗೆ ರಾಜ್ಯ ಸರಕಾರ ನೀಡಿದ ಬೆನ್ನಲ್ಲೇ ತನಿಖೆ ಪುನರಾರಂಭಗೊಂಡಿದ್ದು, ಸಂತ್ರಸ್ತೆಯಿಂದ ಹೇಳಿಕೆ ಪಡೆದುಕೊಂಡಿದ್ದಾರೆ.
ಇಂದು ಸಿಐಡಿ ಎಡಿಜಿಪಿ ಮನೀಶ್ ಕರ್ಬೀಕರ್ ಉಡುಪಿಗೆ ಆಗಮಿಸಿದ್ದು ಸೂಕ್ತ ತನಿಖೆಗೆ ಮಾರ್ಗದರ್ಶನ ನೀಡಿದ್ದಾರೆ.ಉಡುಪಿ ಎಸ್ಪಿ ಕಚೇರಿಯಲ್ಲಿ ಮಹತ್ವದ ಸಭೆ ನಡೆಯಲಿದೆ.
ಈ ವೇಳೆ ತನಿಖಾಧಿಕಾರಿಗಳಿಂದ ಅವರು ಪ್ರಕರಣದ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಲಿದ್ದಾರೆ. ಮರು ತನಿಖೆ ನಡೆಸಲು ಸಿಐಡಿ ಅಧಿಕಾರಿಗಳು ಬೊಂಬೆಯನ್ನು ಸೃಷ್ಟಿಸಿ ತನಿಖೆ ಆರಂಭಿಸಿದ್ದಾರೆ.
ಕ್ರಿಮಿನಲ್ ಇನ್ವೆಸ್ಟಿಗೇಷನ್ ಡಿಪಾರ್ಟ್ಮೆಂಟ್ ಎಸ್ ಪಿ ರಾಘವೇಂದ್ರ ಹೆಗಡೆ ಪ್ರಕರಣದ ತನಿಖೆ ಶುರು ಮಾಡಿದ್ದಾರೆ ಎಂದು ತಿಳಿದು ಬಂದಿದೆ.