ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಿಗೆ ವಿಷ ಜಂತುವೊಂದು ಕಚ್ಚಿದ ಪರಿಣಾಮ ಆಸ್ಪತ್ರೆಗೆ ದಾಖಲಾದ ಬಗ್ಗೆ ವರದಿಯಾಗಿದೆ.

ಮಾಜಿ ಶಾಸಕ ಸಂಜೀವ ಮಠಂದೂರವರಿಗೆ ಹಾವು ಕಚ್ಚಿದ ಪರಿಣಾಮ ಅವರನ್ನು ತಕ್ಷಣ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು ನಿಗಾ ಘಟಕದಲ್ಲಿದ್ದಾರೆ ಎಂದು ತಿಳಿದು ಬಂದಿದೆ.
ಸಂಜೆ ಸಮಯ ವಾಕಿಂಗ್ ಮಾಡುತ್ತಿದ್ದ ಸಂದರ್ಭ ಈ ಘಟನೆ ನಡೆದಿದ್ದು ಇದೀಗ ಚೇತರಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.