dtvkannada

ಮಂಗಳೂರು: ಸುಮಾರು ನಲ್ವತ್ತು ಕೊಲೆ ಪ್ರಕರಣದ ಆರೋಪ ಹೊತ್ತಿರುವ ಕುಖ್ಯಾತ ಕ್ರಿಮಿನಲ್ ಎಂದೇ ಖ್ಯಾತಿ ಪಡೆದಿದ್ದ ರಶೀದ್ ಕಾಲಿಯಾನನ್ನು ಉತ್ತರ ಪ್ರದೇಶದ ವಿಶೇಷ ಕಾರ್ಯಪಡೆ ಎನ್‌ಕೌಂಟರ್ ಮಾಡುವ ಮೂಲಕ ಹತ್ಯೆಗೆಯ್ದಿದೆ.

ಝಾನ್ಸಿ ಜಿಲ್ಲೆಯಲ್ಲಿ ನ.18ರಂದು ನಡೆದ ಎನ್ ಕೌಂಟರ್ ನಲ್ಲಿ ರಶೀದ್ ಕಾಲಿಯಾನನ್ನು ಹತ್ಯೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.

ರಶೀದ್ ಕಾಲಿಯಾ ಮೇಲೆ ಬರೋಬ್ಬರಿ 40 ಕೊಲೆ ಪ್ರಕರಣ ದಾಖಲಾಗಿತ್ತು. ಪೊಲೀಸರು ಆತನ ತಲೆಗೆ 1.25 ಲಕ್ಷ ರೂ. ಬಹುಮಾನ ಘೋಷಿಸಿದ್ದರು. ಉತ್ತರ ಪ್ರದೇಶ ಪೊಲೀಸ್ ಮೂಲಗಳ ಪ್ರಕಾರ, ಕಾಲಿಯಾ ಝಾನ್ಸಿ ಜಿಲ್ಲೆಯ ಮೌರಾನಿಪುರದಲ್ಲಿ ಸುಪಾರಿ ಹತ್ಯೆಗಾಗಿ ಆಗಮಿಸಿದ್ದ ವೇಳೆ ಪೊಲೀಸರು ಎನ್ ಕೌಂಟರ್ ಮಾಡಿದ್ದಾರೆ. ಮೌರಾನಿಪುರದಲ್ಲಿ ಕಾಲಿಯಾ ಇರುವಿಕೆಯ ಬಗ್ಗೆ ಮಾಹಿತಿ ಪಡೆದು ತಕ್ಷಣ ಸ್ಥಳಕ್ಕೆ ಆಗಮಿಸಿದ ಯುಪಿ ಎಸ್ ಟಿಎಫ್ ಗುಂಡಿನ ದಾಳಿ ನಡೆಸಿದೆ. ಗುಂಡಿನ ಚಕಮಕಿಯಲ್ಲಿ, ಕಾಲಿಯಾ ಗಾಯಗೊಂಡಿದ್ದು, ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ವೈದ್ಯರು ಕಾಲಿಯಾ ಮೃತಪಟ್ಟಿರುವುದಾಗಿ ಘೋಷಿಸಿದ್ದಾರೆ ಎನ್ನಲಾಗಿದೆ.

By dtv

Leave a Reply

Your email address will not be published. Required fields are marked *

error: Content is protected !!