';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>
ಉಪ್ಪಿನಂಗಡಿ: ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಪ್ಪಿನಂಗಡಿ ಸಮೀಪದ ಪೆರಿಯಡ್ಕ ಎಂಬಲ್ಲಿ ನಿನ್ನೆ ಸಂಭವಿಸಿದೆ.
ಮೃತಪಟ್ಟ ಯುವಕನನ್ನು ಬದ್ರುದ್ದಿನ್ ರವರ ಮಗ ಫತ್ತಾಹ್ (22) ಎಂದು ಗುರುತಿಸಲಾಗಿದೆ.
ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಈ ಕೃತ್ಯ ಎಸಗಿದ್ದಾಗಿ ತಿಳಿದು ಬಂದಿದೆ.
ಯುವಕ ದ್ವಿತೀಯ ವರ್ಷದ ವ್ಯಾಸಂಗ ಮಾಡುತ್ತಿದ್ದು ಕಳೆದ ಹಲವು ದಿನಗಳಿಂದ ಕಾಲೇಜು ಗೆ ಹೋಗದೇ ಮನೆಯಲ್ಲೇ ಇರುತ್ತಿದ್ದ ಎಂದು ತಿಳಿದು ಬಂದಿದೆ.
ತಂದೆ ಉದ್ಯೋಗ ಹಿನ್ನಲೆ ವಿದೇಶದಲ್ಲಿದ್ದು ಯುವಕ ತಾಯಿ ಜೊತೆ ವಾಸವಾಗಿದ್ದ.
ತಾಯಿ ಯಾವುದೋ ಕಾರ್ಯಕ್ರಮ ಎಂದು ಹೊರಗಡೆ ಹೋಗಿದ್ದು ತಿರುಗಿ ಮನೆ ತಲುಪುವ ವೇಳೆ ಮಗ ನೇಣು ಬಿಗಿದ ಸ್ಥಿತಿಯಲ್ಲಿ ಕಂಡು ಬಂದಿದೆ.
ಮಾನಸಿಕ ಖಿನ್ನತೆಗೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ತಿಳಿದು ಬಂದಿದೆ.
ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.