';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>
ಬೆಂಗಳೂರು: ಮಂಗಳೂರಿನಲ್ಲಿ ನಾಳೆ ರಾಜ್ಯಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶವನ್ನು ಆಯೋಜಿಸಲಾಗಿದೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಹೇಳಿದ್ದಾರೆ.
ಈ ಬಗ್ಗೆ ಮಾತನಾಡಿದ ಅವರು, ಈ ಮೊದಲು ಕಳೆದ ತಿಂಗಳಲ್ಲೆ ರಾಜ್ಯಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶವನ್ನು ಆಯೋಜಿಸುವ ಬಗ್ಗೆ ತೀರ್ಮಾನಿಸಲಾಗಿತ್ತು. ಆದರೆ ಕಾರಣಾಂತರದಿಂದ ಅದನ್ನು ಮುಂದೂಡಲಾಗಿತ್ತು.
ಫೆ.17ರಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿ ಕಾರ್ಯಕರ್ತರ ಸಮಾವೇಶ ನಡೆಸಲು ತೀರ್ಮಾನಿಸಲಾಗಿದೆ ಎಂದು ಹೇಳಿದ್ದಾರೆ.
ಪುತ್ತೂರಿನಿಂದ ಬೃಹತ್ ವಾಹನ ಜಾಥ ಮಂಗಳೂರು ಕಡೆ ಸಾಗಲಿದ್ದು ಹತ್ತು ಸಾವಿರ ಜನ ಪುತ್ತೂರನಿಂದ ಸಮಾವೇಶಕ್ಕೆ ಬರಲಿದ್ದಾರೆ ಎಂದು ಶಾಸಕ ಅಶೋಕ್ ಕುಮಾರ್ ರೈಯವರು ತಿಳಿಸಿದ್ದಾರೆ.