';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>
ಕಡಬ: ರಬ್ಬರ್ ತೋಟಕ್ಕೆ ಟ್ಯಾಪಿಂಗ್ ಮಾಡಲು ಹೋಗಿದ್ದ ಮಹಿಳೆಗೆ ಕಾಡುಹಂದಿಯೊಂದು ತಿವಿದು ಕಚ್ಚಿ ಗಂಭೀರವಾಗಿ ಗಾಯಗೊಳಿಸಿದ ಘಟನೆ ಸಂಭವಿಸಿದೆ.
ಈ ಒಂದು ಘಟನೆಯು ಸುಳ್ಯ ತಾಲೂಕು ದುಗಲಡ್ಕ ಕೂಟೇಲು ಎಂಬಲ್ಲಿ ನಡೆದಿದ್ದು ಅಲ್ಲಿಯ ನಿವಾಸಿ ಪದ್ಮಾವತಿ ಎಂಬವರು ಕೆ.ಎಫ್.ಡಿ.ಸಿ. ರಬ್ಬರ್ ತೋಟದ ಟ್ಯಾಪರ್ ಆಗಿದ್ದು ಅವರು ಫೆ. 22 ರಂದು ಮುಂಜಾನೆ ದುಗಲಡ್ಕ ಘಟಕದ ಕೂಟೇಲು ಪಿಲಿಕಜೆ ಎಂಬಲ್ಲಿ ರಬ್ಬರ್ ಟ್ಯಾಪಿಂಗ್ ಮಾಡುತ್ತಿರುವಾಗ ಪೊದೆಯಲ್ಲಿದ್ದ ಕಾಡುಹಂದಿ ಏಕಾಏಕಿ ಧಾಳಿ ನಡೆಸಿದೆ ಎಂದು ತಿಳಿದು ಬಂದಿದೆ.
ಭಯಭೀತರಾಗಿ ಓಡಿದ ಮಹಿಳೆಯನ್ನು ಬೆನ್ನಟ್ಟಿದ ಕಾಡುಹಂದಿ ಅವರು ಬಿದ್ದಾಗ ಬೆನ್ನು ಮತ್ತಿತರೆಡೆಗೆ ಕಚ್ಚಿ ತೀವ್ರ ಗಾಯಗೊಳಿಸಿದೆ ಎಂದು ವರದಿಯಾಗಿದ್ದು ವಿಷಯ ತಿಳಿದ ಇತರ ಟ್ಯಾಪರ್ ಗಳು ಕೆ.ಎಫ್.ಡಿ.ಸಿ. ಅಧಿಕಾರಿಗಳಿಗೆ ತಿಳಿಸಿದ ಕೂಡಲೇ ಅವರು ವಾಹನ ತಂದು, ನಿಗಮದ ಸಿಬ್ಬಂದಿ, ಊರಿನವರು ಮತ್ತು ಬಂಧುಗಳು ಸೇರಿ ಸುಳ್ಯ ಸರಕಾರಿ ಆಸ್ಪತ್ರೆಗೆ ತಂದು ದಾಖಲಿಸಿದ್ದಾರೆ ಎಂದು ತಿಳಿದು ಬಂದಿದೆ.